ಎಲ್ಲರೂ ಮೊಸರು ಸೇವನೆಯನ್ನು ತುಂಬಾ ಇಷ್ಟಪಡುತ್ತಾರೆ. ಮೊಸರು ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನ ಉತ್ತಮಗೊಳಿಸುತ್ತದೆ. ಹೃದಯ ಸಂಬಂಧಿ ಖಾಯಿಲೆಯಿರುವವರು ಮೊಸರು ಸೇವಿಸುವುದು ತುಂಬಾ ಮುಖ್ಯ.


COMMERCIAL BREAK
SCROLL TO CONTINUE READING

ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್-ಬಿ 6(Vitamin B 6) ಮತ್ತು ವಿಟಮಿನ್-ಬಿ 12 ಸೇರಿದಂತೆ ಅನೇಕ ಪೋಷಕಾಂಶಗಳು ಕಂಡು ಬರುತ್ತವೆ. ಇವು ಆರೋಗ್ಯಕರ ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನ ಒದಗಿಸುತ್ತದೆ. ಮೊಸರು ಹಸಿವು ಕಡಿಮೆ ಇರುವವರಿಗೂ ಇದು ತುಂಬಾ ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ : Diabetes Control : ಡಯಾಬಿಟಿಸ್ ನಿಯಂತ್ರಣಕ್ಕೆ 'ಮಾವಿನ ಎಲೆ' ಮದ್ದು!


ಮೊಸರು(Curd) ಕೂದಲು, ರಕ್ತದೊತ್ತಡ, ಆಸ್ಟಿಯೊಪೊರೋಸಿಸ್ ಮತ್ತು ಮೂಳೆಗಳಿಗೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಮೊಸರು ನಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಚರ್ಮದ ಕಾಯಿಲೆಗಳನ್ನು ಗುಣಪಡಿಸಲು ಸಹ ಮೊಸರು ಉಪಯುಕ್ತವೆಂದು ಪರಿಗಣಿಸಲಾಗುತ್ತದೆ.


ಇದನ್ನೂ ಓದಿ : Wheat Flour Benefits For Skin: ಚರ್ಮದ ಮೇಲೆ ಮ್ಯಾಜಿಕ್ನಂತೆ ಕಾರ್ಯನಿರ್ವಹಿಸುತ್ತೆ ಗೋಧಿ ಹಿಟ್ಟು


ಮೊಸರು ರೋಗ ನಿರೋಧಕ ಶಕ್ತಿ(Immunity)ಯನ್ನು ಕೂಡ ಬಲಪಡಿಸುವ ಕೆಲಸವನ್ನು ಮಾಡುತ್ತದೆ. ಇದರಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಮೊಸರನ್ನು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಶೀತ ಮತ್ತು ಕೆಮ್ಮಿನ ಸಮಸ್ಯೆಯಿರುವವರು ಮೊಸರು ಸೇವನೆ ಮಾಡಬಾರದು.


ಇದನ್ನೂ ಓದಿ : food to avoid with milk : ಹಾಲಿನ ಜೊತೆ ಈ ಕಾಂಬಿನೇಷನ್ ಒಳ್ಳೆಯದಲ್ಲ..ಗೊತ್ತಿರಲಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ