Jaggery Benefits : ಬೆಲ್ಲವು ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಊಟದ ನಂತರ ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಆಹಾರ ಸೇವಿಸಿದ ನಂತರ ಬೆಲ್ಲ ತಿನ್ನುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.


COMMERCIAL BREAK
SCROLL TO CONTINUE READING

ಬೆಲ್ಲ ತಿನ್ನುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಊಟದ ನಂತರ ಬೆಲ್ಲ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ.‌  


ಇದನ್ನೂ ಓದಿ: ಚಳಿಗಾಲದ ಸಂಜೆಗೆ ಆರೋಗ್ಯಕರ ಸ್ನ್ಯಾಕ್ಸ್.. ತೂಕ ಇಳಿಕೆಗೆ ಹೇಳಿ ಮಾಡಿಸಿದ ತಿಂಡಿಗಳು! 


ಇದಲ್ಲದೆ, ಬೆಲ್ಲದಲ್ಲಿರುವ ಕಬ್ಬಿಣಂಶವು ಕೀಲು ಸಮಸ್ಯೆಗಳು ಮತ್ತು ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಪಾಯಕಾರಿ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರು ಈ ಬೆಲ್ಲವನ್ನು ತಿನ್ನುವುದರಿಂದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.


ಆಲಸ್ಯ ಮತ್ತು ದೌರ್ಬಲ್ಯದ ಲಕ್ಷಣಗಳು ಕಾಣಿಸಿಕೊಂಡಾಗ ಸಣ್ಣ ತುಂಡು ಬೆಲ್ಲವನ್ನು ತಿನ್ನುವುದು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಕಿವಿ ನೋವಿನಿಂದ ಬಳಲುತ್ತಿರುವವರು ಬೆಲ್ಲವನ್ನು ತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.


ಊಟದ ನಂತರ ಬೆಲ್ಲವನ್ನು ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಆಹಾರ ಸೇವಿಸಿದ ನಂತರ ಬೆಲ್ಲ ತಿನ್ನುವುದರಿಂದ ಹಲವಾರು ಆರೋಗ್ಯ ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು.


ಇದನ್ನೂ ಓದಿ: Banana: ಚಳಿಗಾಲದಲ್ಲಿ ಪ್ರತಿದಿನ ಬಾಳೆಹಣ್ಣು ತಿನ್ನಬಹುದೇ? ತಜ್ಞರು ಏನು ಹೇಳುತ್ತಾರೆ? 


( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.