Health Benefits Of Chakkotta: ಚಳಿಗಾಲದಲ್ಲಿ ವಿವಿಧ ರೀತಿಯ ಸೊಪ್ಪುಗಳು ಮಾರುಕಟ್ಟೆಗಳಲ್ಲಿ ಬರುತ್ತವೆ. ಅವುಗಳನ್ನು ಸೇವಿಸುವುದರಿಂದ ದೇಹವು ಆರೋಗ್ಯವಾಗಿರುತ್ತದೆ. ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗನೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ದೇಹದ ಮೇಲೆ ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾಗಳ ದಾಳಿಯೇ ಇದಕ್ಕೆ ಕಾರಣವಾಗಿದೆ. ಒಬ್ಬ ವ್ಯಕ್ತಿಯು ಚಳಿಗಾಲದಲ್ಲಿ ತನ್ನನ್ನು ತಾನು ಆರೋಗ್ಯವಾಗಿರಿಸಿಕೊಂಡರೆ, ಅವನು ಕಡಿಮೆ ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಈ ಋತುವಿನಲ್ಲಿ ಚಕ್ಕೊತ್ತ ಸೊಪ್ಪನ್ನು ಸೇವಿಸುವುದರಿಂದ ದೇಹವು ಅನೇಕ ರೀತಿಯ ಕಾಯಿಲೆಗಳಿಂದ ಮುಕ್ತಿ ಪಡೆಯುತ್ತದೆ. ಚಕ್ಕೊತ್ತ ಸೊಪ್ಪು ನಿಮಗೆ ಆರೋಗ್ಯದ ಜೊತೆಗೆ ರುಚಿಯನ್ನು ನೀಡುತ್ತದೆ. ಇದನ್ನು ತಿನ್ನುವುದರಿಂದ, ದೇಹದಲ್ಲಿ ಶಾಖ ಉತ್ಪತ್ತಿಯಾಗುತ್ತದೆ, ಇದು ಋತುಮಾನದ ಕಾಯಿಲೆಗಳನ್ನು ದೂರವಿಡುತ್ತದೆ.
ಪೋಷಕಾಂಶಗಳಿಂದ ಸಮೃದ್ಧವಾಗಿದೆ
ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ಮ್ಯಾಂಗನೀಸ್, ಸೋಡಿಯಂ, ರಂಜಕ, ಪೊಟ್ಯಾಸಿಯಮ್ ಮತ್ತು ಸತುವು ಸೇರಿದಂತೆ ಅನೇಕ ಪೋಷಕಾಂಶಗಳು ಚಕ್ಕೊತ್ತ ಸೊಪ್ಪಿನಲ್ಲಿ ಕಂಡುಬರುತ್ತವೆ. ಹೀಗಾಗಿ ಇದು ಋತುಮಾನದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದರಲ್ಲಿರುವ ವಿಟಮಿನ್‌ಗಳು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತವೆ. ಚಕ್ಕೊತ್ತ ಸೊಪ್ಪಿನ ಸಾಗನ್ನು ಕೂಡ ತಯಾರಿಸಿ ನೀವು ಇದನ್ನು ಸೇವಿಸಬಹುದು.
ಇದನ್ನೂ ಓದಿ-Male Health Tips: ಈ 5 ಸಂಗತಿಗಳಿಂದ ಪುರುಷರು ಇಂದೇ ಅಂತರ ಕಾಯ್ದುಕೊಳ್ಳಬೇಕು, ಇಲ್ದಿದ್ರೆ?
ಈ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ
ಚಕ್ಕೊತ್ತ ಸೊಪ್ಪು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಚಳಿಗಾಲದಲ್ಲಿ ಚರ್ಮಕ್ಕೆ ಆಗುವ ಹಾನಿಯನ್ನು ತಪ್ಪಿಸುತ್ತದೆ ಮತ್ತು ಚರ್ಮಕ್ಕೆ ಹೊಳಪನ್ನು ನೀಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾರಿನಂಶ ಕಂಡುಬರುತ್ತದೆ. ಇದು ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಇದು ಮಲಬದ್ಧತೆ, ಗ್ಯಾಸ್ ಮತ್ತು ಕಿಬ್ಬೊಟ್ಟೆಯ ನೋವನ್ನು ನಿವಾರಿಸುತ್ತದೆ. ಚಕ್ಕೊತ್ತ ಯಕೃತ್ತಿನ ಆರೋಗ್ಯಕ್ಕೂ ತುಂಬಾ ಲಾಭಕಾರಿಯಾಗಿದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಇದರ ಬಳಕೆಯು ಮೂತ್ರಪಿಂಡದ ಕಲ್ಲಿನ ಅಪಾಯವನ್ನು ಕಡಿಮೆ ಮಾಡುತ್ತದೆ. ತೂಕ ಇಳಿಕೆ ಮಾಡಿಕೊಳ್ಳಲು ಕೂಡ ಚಕ್ಕೊತ್ತ ಸೇವಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
ಇದನ್ನೂ ಓದಿ-Cholesterol: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಈ ಅನುಭವಗಳಾಗುತ್ತವೆ, ನಿರ್ಲಕ್ಷಿಸಬೇಡಿ
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.