ಬೆಂಗಳೂರು: ಮಧುಮೇಹವು ಒಂದು ರೀತಿಯ ಕಾಯಿಲೆಯಾಗಿದ್ದು, ವಿಶ್ವಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಈ ರೋಗದ ಚಿಕಿತ್ಸೆಯನ್ನು ಸರಿಯಾದ ಸಮಯದಲ್ಲಿ ಮಾಡದಿದ್ದರೆ, ಅದು ಸಾವಿಗೆ ಸಹ ಕಾರಣವಾಗಬಹುದು. ಮಧುಮೇಹ ರೋಗಿಗಳು ವಿಶೇಷವಾಗಿ ಸಿಹಿತಿಂಡಿಗಳನ್ನು ತಿನ್ನುವುದನ್ನು ತಪ್ಪಿಸಬೇಕು. ಶುಗರ್ ರೋಗಿಗಳಲ್ಲಿ ಹೆಚ್ಚಿನವರು ಮೊಟ್ಟೆ ತಿನ್ನುವುದನ್ನು ನೀವು ನೋಡಬಹುದು (Health News In Kannada). 10 ರಲ್ಲಿ 9 ಅಗತ್ಯ ಅಮೈನೋ ಆಮ್ಲಗಳು ಮೊಟ್ಟೆಗಳಲ್ಲಿವೆ ಎಂದು ಹೇಳಲಾಗುತ್ತದೆ, ಇದು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.


COMMERCIAL BREAK
SCROLL TO CONTINUE READING

ಮೊಟ್ಟೆಯಲ್ಲಿ ಸಾಕಷ್ಟು ಪೌಷ್ಟಿಕಾಂಶವಿಗಳಿರುತ್ತವೆ, ಇದು ಪ್ರೋಟೀನ್, ವಿಟಮಿನ್ ಡಿ, ಬಿ 12, ಬಿ 6, ಕ್ಯಾಲ್ಸಿಯಂ, ಫೋಲೇಟ್, ರೈಬೋಫ್ಲಾವಿನ್, ಸತು ಮತ್ತು ಕಬ್ಬಿಣದಂತಹ ವಿವಿಧ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಅನೇಕ ಪೋಷಕಾಂಶಗಳ ಉಪಸ್ಥಿತಿಯಿಂದಾಗಿ, ಮೊಟ್ಟೆಗಳನ್ನು ಹೆಚ್ಚಿನ ಜನರು ಸೇವಿಸುತ್ತಾರೆ, ಹೀಗಾಗಿ ಮಧುಮೇಹ ರೋಗಿಗಳು ಮೊಟ್ಟೆಯನ್ನು ಸೇವಿಸಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಸಕ್ಕರೆ ರೋಗಿಗಳು ಮೊಟ್ಟೆ ತಿನ್ನಬಹುದೇ?
ಮೊಟ್ಟೆಯ ಸೇವನೆಯು ರಕ್ತದಲ್ಲಿನ ಸಕ್ಕರೆಯ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಅನೇಕ ಅಧ್ಯಯನಗಳು ತೋರಿಸುತ್ತವೆ. ಅಧ್ಯಯನಗಳನ್ನು ನಂಬುವುದಾದರೆ, ಸಾಕಷ್ಟು ಪ್ರಮಾಣದಲ್ಲಿ ನೈಸರ್ಗಿಕ ಪ್ರೋಟೀನ್ ಅನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಅದು ಸಹಾಯ ಮಾಡುತ್ತದೆ. ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದ್ದರೂ. ಕೆಲವು ಅಧ್ಯಯನಗಳ ಪ್ರಕಾರ, ಆಹಾರದ ಕೊಲೆಸ್ಟ್ರಾಲ್ ಜನರ ರಕ್ತದ ಕೊಲೆಸ್ಟ್ರಾಲ್ ಮಟ್ಟಗಳ ಮೇಲೆ ಕಡಿಮೆ ಪರಿಣಾಮ ಬೀರುತ್ತದೆ. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಮತ್ತು ಇತರ ಆರೋಗ್ಯ ಸಂಸ್ಥೆಗಳ ಪ್ರಕಾರ, ಸೀಮಿತ ಪ್ರಮಾಣದಲ್ಲಿ ಮೊಟ್ಟೆಗಳನ್ನು ಸೇವಿಸುವುದರಿಂದ ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎನ್ನಲಾಗುತ್ತದೆ.


ಇದನ್ನೂ ಓದಿ-ರಕ್ತದಲ್ಲಿನ ಸಕ್ಕರೆ ಮಟ್ಟ ಎರಡೇ ವಾರಗಳಲ್ಲಿ ನಿಯಂತ್ರಿಸಲು ಈ ವಿಧಾನಗಳನ್ನು ಅನುಸರಿಸಿ!


ಅತಿಯಾಗಿ ಸೇವಿಸಬೇಡಿ
ಒಟ್ಟಾರೆಯಾಗಿ, ಮಧುಮೇಹ ರೋಗಿಗಳು ಮೊಟ್ಟೆಗಳನ್ನು ಸೇವಿಸಬಹುದು ಎಂಬ ನಿಷ್ಕರ್ಷಕ್ಕೆ ಬರಲಾಗಿದೆ. ಏಕೆಂದರೆ ಅವುಗಳಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಪ್ರಮಾಣದಲ್ಲಿರುತ್ತವೆ ಮತ್ತು ವಿಟಮಿನ್‌ಗಳು, ಖನಿಜಗಳು, ಪ್ರೋಟೀನ್‌ಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಆದಾಗ್ಯೂ,  ಜನರು ಅದನ್ನು ಅತಿಯಾಗಿ ಸೇವಿಸುವುದನ್ನು ತಪ್ಪಿಸಬೇಕು.


ಇದನ್ನೂ ಓದಿ-ಕೆಲವೇ ದಿನಗಳಲ್ಲಿ ಚಮತ್ಕಾರಿಕ ಪದ್ಧತಿಯಲ್ಲಿ ತೂಕ ಇಳಿಕೆ ಮಾಡುತ್ತೆ ಈ ಪೇಯ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.