Health Tips: ಉರಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ನೀವು ಅನುಸರಿಸಬೇಕಾದ ಕ್ರಮಗಳು

ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಾಗಿರುವುದು ಬೇಸಿಗೆಯ ಅವಧಿಯಲ್ಲಿ ಅನಿವಾರ್ಯವಾಗಿದೆ.

Written by - Zee Kannada News Desk | Last Updated : Apr 1, 2022, 12:54 AM IST
  • ಕೈಗೆ ಸಿಗುವಂತೆ ಶುದ್ದ ಕುಡಿಯುವ ನೀರನ್ನು ಇಟ್ಟಕೊಳ್ಳಿ.
  • ಆಗಾಗ್ಗೆ ನಿಧಾನವಾಗಿ ಧಾರಾಳವಾಗಿ ಉಪ್ಪು, ಸಕ್ಕರೆ ಮಿತ್ರಿತ ನೀರನ್ನು ಕುಡಿಯಿರಿ ಮತ್ತು ಹಣ್ಣಿನ ರಸ/ಪಾನಕಗಳನ್ನು ಕುಡಿಯಿರಿ.
  • ಹತ್ತಿಯ ನುಣುಪಾದ ಬಟ್ಟೆ/ಟಿಶ್ಯು ಕರವಸ್ತದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ/ಎಳನೀರು ಕುಡಿಯಬಹುದು.
 Health Tips: ಉರಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ನೀವು ಅನುಸರಿಸಬೇಕಾದ ಕ್ರಮಗಳು  title=

ನವದೆಹಲಿ: ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಾಗಿರುವುದು ಬೇಸಿಗೆಯ ಅವಧಿಯಲ್ಲಿ ಅನಿವಾರ್ಯವಾಗಿದೆ.

ಈ ಹಿನ್ನಲೆಯಲ್ಲಿ ನಾವು ಈಗ ಬೇಸಿಗೆ ಸಮಯದಲ್ಲಿ ನೀವು ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕೆಲವು ಮುಂಜಾಗ್ರತೆಯ ಕ್ರಮಗಳನ್ನು ನಾವು ಇಲ್ಲಿ ಪಟ್ಟಿ ಮಾಡುತ್ತೇವೆ.

ಬೇಸಿಗೆ ಸಮಯದಲ್ಲಿ ಸಾರ್ವಜನಿಕರು ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ದ ಕುಡಿಯುವ ನೀರನ್ನು (Water) ತೆಗೆದುಕೊಂಡು ಹೋಗಬೇಕು.

ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ.

ಸಡಿಲವಾದ ತೆಳು ಬಣ್ಣದ ಹತ್ತಿ ಬಟ್ಟೆಯನ್ನು ಧರಿಸಬೇಕು.  

ಇದನ್ನೂ ಓದಿ: Coffee: ಅತಿಯಾದ ಕಾಫಿ ಸೇವನೆಯಿಂದ ಏನಾಗುತ್ತದೆ ಗೊತ್ತಾ..?

ಕೈಗೆ ಸಿಗುವಂತೆ ಶುದ್ದ ಕುಡಿಯುವ ನೀರನ್ನು ಇಟ್ಟಕೊಳ್ಳಿ.

ಆಗಾಗ್ಗೆ ನಿಧಾನವಾಗಿ ಧಾರಾಳವಾಗಿ ಉಪ್ಪು, ಸಕ್ಕರೆ ಮಿತ್ರಿತ ನೀರನ್ನು ಕುಡಿಯಿರಿ ಮತ್ತು ಹಣ್ಣಿನ ರಸ/ಪಾನಕಗಳನ್ನು ಕುಡಿಯಿರಿ.

ಹತ್ತಿಯ ನುಣುಪಾದ ಬಟ್ಟೆ/ಟಿಶ್ಯು ಕರವಸ್ತçದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ/ಎಳನೀರು ಕುಡಿಯಬಹುದು.

ಬೆಚ್ಚಗಿನ, ಮಸಾಲೆ ರಹಿತ ಶುದ್ಧ ಸಾತ್ವಿಕ ಆಹಾರ ಸೇವಿಸಿರಿ.

ಗಾಳಿಯಾಡುವಂತಿರುವ ಪಾದರಕ್ಷೆಗಳನ್ನು ಧರಿಸಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿರುವ ಸ್ಥಳಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ.

ಚರ್ಮ ಕೆಂಪಾದರೆ, ಬೆವರು ಕಡಿಮೆ ಆದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀವ್ರ ಉಸಿರಾಟ ಇದ್ದಲ್ಲಿ ತುರ್ತಾಗಿ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿರಿ.

ಇದನ್ನೂ ಓದಿ: Harmful Fruit Combination : ಬಾಳೆ ಹಣ್ಣಿನ ಜೊತೆ ತಪ್ಪಿಯೂ ಈ ಹಣ್ಣನ್ನು ಸೇವಿಸಬೇಡಿ..! ಎದುರಿಸಬೇಕಾಗುತ್ತದೆ ಆರೋಗ್ಯ ಸಮಸ್ಯೆ

ಜಾಗ್ರತೆ ವಹಿಸಬೇಕಾದ ಕ್ರಮಗಳು ;

ಬೇಸಿಗೆ ಸಮಯದಲ್ಲಿ ಸಾರ್ವಜನಿಕರು ಮಾಡಬಾರದ/ ಜಾಗ್ರತೆ ವಹಿಸಬೇಕಾದ ಕ್ರಮಗಳು ಇಂತಿವೆ.  

ಅತಿ ಬಿಗಿಯಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು. 

ಕುಷನ್‌ಯುಕ್ತ ಖುರ್ಚಿಯಲ್ಲಿ ಹೆಚ್ಚು ಕೂಡಬಾರದು. 

ಸೋಡಾ ಇತ್ಯಾದಿ ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬಾರದು.

ಬೆವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬಾರದು.  

ಕಾಫೀ/ಟೀ ಸಕ್ಕರೆ ಅಂಶವುಳ್ಳ ಪಾನೀಯಗಳನ್ನು ಅತಿಯಾಗಿ ಸೇವಿಸಬಾರದು.

ಉಷ್ಣತೆಯಿಂದ ಸುಸ್ತಾದ ವ್ಯಕ್ತಿಯನ್ನು ತುಂಬಾ ತಣ್ಣಗಿನ/ಶಿಥಲೀಕರಿಸಿದ ನೀರಿನಿಂದ ಒರೆಸಬೇಡಿ. 

ವ್ಯಕ್ತಿಯು ತೊದಲು ತೊದಲಾಗಿ, ವಿಚಿತ್ರವಾಗಿ ಮಾತನಾಡಿದರೆ ಆತಂಕ ಪಡದೆ, ಶಾಂತಿ ಸಮಾಧಾನದಿಂದ ಶೀಘ್ರವಾಗಿ 108 ಆಂಬ್ಯುಲೆನ್ಸ್ಸ್ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. 

ಕಲುಷಿತ ನೀರನ್ನು ಸೇವಿಸಬಾರದು.  

ಆರೋಗ್ಯದ ಯಾವುದೇ ಸಮಸ್ಯೆ ಇದ್ದರೆ ತಮ್ಮ ಸಮೀಪದ ಆಸ್ಪತ್ರೆಯ ವೈದ್ಯರನ್ನು ಮತ್ತು ಆರೋಗ್ಯ ಕಾರ್ಯಕರ್ತೆಯರನ್ನು ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News