Health Tips: ಫೈಬರ್, ಪ್ರೋಟೀನ್, ವಿಟಮಿನ್ ಎ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ವಿಟಮಿನ್‌ಗಳಂತಹ ಅನೇಕ ಪೋಷಕಾಂಶಗಳ ಆಗರವಾಗಿರುವ ಒಂದು ಹಣ್ಣು ಎಂದ್ರೆ ಅದು ಹಲಸಿನ ಹಣ್ಣು. ಹಲಸಿನ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿದೆ, ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಹಲಸಿನ ಹಣ್ಣಿನಂತೆ ಅದರ ಬೀಜಗಳು ಕೂಡ ತುಂಬಾ ಪ್ರಯೋಜನಕಾರಿ ಎಂಬ ಸಂಗತಿ ಬಹುತೇಕರಿಗೆ ತಿಳಿದಿಲ್ಲ. ಹೀಗಾಗಿ ಇಂದು ನಾವು ನಿಮಗೆ ಹಲಸಿನ ಬೀಜಗಳನ್ನು ತಿನ್ನುವುದರಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಆದ್ದರಿಂದ ಹಲಸಿನ ಬೀಜಗಳನ್ನು ಎಸೆಯುವ ಮೊದಲು, ಅದರ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ.


COMMERCIAL BREAK
SCROLL TO CONTINUE READING

ಹಲಸಿನ ಬೀಜಗಳ ಆರೋಗ್ಯ ಪ್ರಯೋಜನಗಳು
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ಹಲಸಿನ ಬೀಜಗಳು ಉತ್ತಮ ಪ್ರಮಾಣದ ಫೈಬರ್‌ನಲ್ಲಿ ಸಮೃದ್ಧವಾಗಿವೆ, ಅವು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತವೇ. ಇದು ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ, ಇದರಿಂದಾಗಿ ಮಲಬದ್ಧತೆ ಮತ್ತು ಅಜೀರ್ಣ ಮುಂತಾದ ಜೀರ್ಣಕಾರಿ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ಮೂಲಕ ಸಂಪೂರ್ಣವಾಗಿ ಗುಣಪಡಿಸಲು ಸಹಾಯ ಮಾಡುತ್ತವೆ.


ಹೃದಯದ ಆರೋಗ್ಯ ರಕ್ಷಣೆ
ಹಲಸಿನ ಬೀಜಗಳಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್ ಇರುತ್ತದೆ, ಇದು ನಿಮ್ಮ ರಕ್ತನಾಳಗಳಿಗೆ ವಿಶ್ರಾಂತಿ ನೀಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಹಲಸಿನ ಬೀಜಗಳು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಅದನ್ನು ಉತ್ತಮವಾಗಿ ನಿರ್ವಹಿಸುತ್ತವೆ.


ಇದನ್ನೂ ಓದಿ-ನೀವೂ ನಿಮ್ಮ ಕೂದಲಿಗೆ ಬಣ್ಣ ಹಚ್ಚುತ್ತೀರಾ? ಈ ಸಲಹೆ ಅನುಸರಿಸಿ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಿ!


ಚಯಾಪಚಯವನ್ನು ಸುಧಾರಿಸುತ್ತವೆ
ಕಾರ್ಬೋಹೈಡ್ರೇಟ್‌ಗಳು ಮತ್ತು ವಿಟಮಿನ್ ಬಿ ಕಾಂಪ್ಲೆಕ್ಸ್‌ಗಳು ಹಲಸಿನ ಬೀಜಗಳಲ್ಲಿ ಇವೆ, ಅವು ನಮ್ಮ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಮತ್ತು ಆರೋಗ್ಯಕರ ಚಯಾಪಚಯ ದರವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ, ಇದರಿಂದ ನಮ್ಮ ಆಹಾರವು ತ್ವರಿತವಾಗಿ ಮತ್ತು ಸುಲಭವಾಗಿ ಜೀರ್ಣವಾಗುತ್ತದೆ. ಹೀಗಾಗಿ ಹಲಸಿನ ಬೀಜಗಳನ್ನು ತಿನ್ನುವುದು ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ-Health Tips: ಪುರುಷರೇ ನಿತ್ಯ ಈ ಒಂದು ಕೆಲಸ ದಾಂಪತ್ಯ ಜೀವನ ಸುಖಮಯವಾಗಿಸಿ!


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.