ನವದೆಹಲಿ: ಇತ್ತೀಚೆಗೆ ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾರ್ನ್, ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಪ್ರಸಿದ್ಧ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್ (KK) ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಭಾರತದ ಅನೇಕ ಯುವಕರು ಈ ಸಮಸ್ಯೆಗೆ ಬಲಿಯಾಗುತ್ತಿದ್ದಾರೆ. ಇದು ಇಂದಿನ ದಿನಮಾನಗಳಲ್ಲಿ ಸಾಕಷ್ಟು ಆಘಾತಕಾರಿ ಬೆಳವಣಿಗೆಯಾಗಿದೆ. ಕೆಲ ದಶಕಗಳ ಹಿಂದೆ 40-45 ವರ್ಷ ದಾಟಿದ ನಂತರ ಹೃದಯಾಘಾತವಾಗುತ್ತಿತ್ತು. ಆದರೆ ಈಗ ಸಣ್ಣಮಕ್ಕಳಿಂದ ಹಿಡಿದು 30ರ ಆಸುಪಾಸಿನವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರ ಹಿಂದಿನ ಮುಖ್ಯ ಕಾರಣಗಳೇನು?


COMMERCIAL BREAK
SCROLL TO CONTINUE READING

ಹೃದಯಾಘಾತ ಏಕೆ ಸಂಭವಿಸುತ್ತದೆ?


ದೇಹದ ರಕ್ತನಾಳಗಳಲ್ಲಿ ರಕ್ತದ ಹರಿವು ಸರಿಯಾಗಿ ಆಗದೇ ಇದ್ದಾಗ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆ ಉಂಟಾಗುತ್ತದೆ ಮತ್ತು ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಯಾವಾಗ ರಕ್ತವು ಹೃದಯಕ್ಕೆ ಸರಿಯಾಗಿ ತಲುಪುವುದಿಲ್ಲವೋ, ಆಗ ರಕ್ತನಾಳಗಳ ಮೇಲೆ ಒತ್ತಡ ಉಂಟಾಗುತ್ತದೆ ಮತ್ತು ನಂತರ ಹೃದಯಾಘಾತವಾಗುತ್ತದೆ.


ಇದನ್ನೂ ಓದಿ: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಲು ಇದುವೇ ಪ್ರಮುಖ ಕಾರಣ ..! ಅಪಾಯಕ್ಕಿಂತ ಮುನ್ನ ಎಚ್ಚೆತ್ತುಕೊಳ್ಳಿ


ಯುವಕರಲ್ಲಿ ಹೃದಯಾಘಾತದ ಕಾರಣಗಳು


1. ಕೆಟ್ಟ ಜೀವನಶೈಲಿ


ಕೆಟ್ಟ ಜೀವನಶೈಲಿಯಿಂದ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳು ಬರುತ್ತವೆ. ಇತ್ತೀಚಿನ ದಿನಗಳಲ್ಲಿ ಧಾವಂತದ ಜೀವನದಲ್ಲಿ ಯುವಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗುತ್ತಿಲ್ಲ, ಇದು ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿದೆ.


2. ಬೊಜ್ಜು


ಸಾಮಾನ್ಯವಾಗಿ ಯುವಕರು ತಪ್ಪು ಆಹಾರ ಪದ್ಧತಿಯಿಂದ ಬೊಜ್ಜು ಹೊಂದುತ್ತಿದ್ದಾರೆ. ಅವರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಗಮನಾರ್ಹವಾಗಿ ಹೆಚ್ಚಾಗುತ್ತದೆ, ಇದು ಹೃದಯಾಘಾತ, ಪರಿಧಮನಿಯ ಕಾಯಿಲೆ, ಟ್ರಿಪಲ್ ವೆಸೆಲ್ ಡಿಸೀಸ್ಗೆ ಕಾರಣವಾಗುತ್ತದೆ. ಇದರಿಂದ ಪ್ರಾಣಾಪಾಯ ಹೆಚ್ಚಾಗುತ್ತದೆ.


ಇದನ್ನೂ ಓದಿ: Diabetes Diet: ಮಧುಮೇಹಿಗಳಿಗೆ ಅಪಾರ ಪ್ರಯೋಜನ ನೀಡಲಿದೆ ಈ ಬೀಜ


3. ಸಿಗರೇಟ್ ಮತ್ತು ಮದ್ಯ ಸೇವನೆ


ಟ್ರೆಂಡ್‍ಗಾಗಿ, ಕೂಲ್ ಆಗಿ ಕಾಣಲು ಚಿಕ್ಕ ವಯಸ್ಸಿನವರೂ ಇಂದು ಸಿಗರೇಟ್, ಮದ್ಯಪಾನದ ಮೊರೆ ಹೋಗುತ್ತಿದ್ದಾರೆ. ಆದರೆ, ಈ ಚಟದಿಂದ ಆರೋಗ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎಂಬುದನ್ನು ಮರೆತುಬಿಡುತ್ತಾರೆ. ಈ ಕಾರಣದಿಂದ ರಕ್ತದೊತ್ತಡವು ಹೆಚ್ಚಾಗುತ್ತದೆ ಮತ್ತು ಅಪಧಮನಿಗಳ ಮೇಲೆ ಅದರ ನೇರ ಪರಿಣಾಮ ಉಂಟಾಗಿ ಜೀವಕ್ಕೆ ಕುತ್ತುಂಟಾಗುತ್ತದೆ.


4. ಉದ್ವೇಗ


ಭಾರತದಲ್ಲಿ ಮಾನಸಿಕ ಆರೋಗ್ಯವನ್ನು ಸರಿಪಡಿಸಲು ಹೆಚ್ಚಿನ ಒತ್ತು ನೀಡಲಾಗಿಲ್ಲ. ಆದರೆ, ಇದು ಅನೇಕ ರೋಗಗಳಿಗೆ ಕಾರಣವಾಗಬಹುದು. ಇಂದಿನ ಯುವಕರು ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬೇಕೆಂಬ ಹಂಬಲದಿಂದ ಟೆನ್ಷನ್‌ನಲ್ಲಿ ಬದುಕುತ್ತಿದ್ದು, ಇದರಿಂದ ಅವರು ಹೃದಯಾಘಾತದಂತಹ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.