ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇಲ್ಲವಾದರೆ ಎದುರಾಗುವುದು ಈ ಸಮಸ್ಯೆಗಳು. !

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಳದಿಂದ ದೇಹದ ಯಾವ ಭಾಗಗಳ ಮೇಲೆ ಪರಿಣಾಮ ಬೀರುತ್ತವೆ  ನೋಡೋಣ.   

Written by - Ranjitha R K | Last Updated : Oct 13, 2022, 03:33 PM IST
  • ಇತ್ತೀಚಿನ ದಿನಗಳಲ್ಲಿ ಮಧುಮೇಹವು ಸಾಮಾನ್ಯ ಕಾಯಿಲೆಯಾಗಿದೆ.
  • ಅನೇಕ ಜನರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ
  • ಮಧುಮೇಹವು ಅನೇಕ ಪ್ರಮುಖ ಕಾಯಿಲೆಗಳಿಗೆ ಕಾರಣವಾಗಬಹುದು.
ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇಲ್ಲವಾದರೆ ಎದುರಾಗುವುದು ಈ ಸಮಸ್ಯೆಗಳು. ! title=
Diabetes Effect On Body (file photo)

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮಧುಮೇಹವು ಸಾಮಾನ್ಯ ಕಾಯಿಲೆಯಾಗಿದೆ. ಅನೇಕ ಜನರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇನ್ನು ಮಧುಮೇಹವು ಅನೇಕ ಪ್ರಮುಖ ಕಾಯಿಲೆಗಳಿಗೆ ಕೂಡಾ ಕಾರಣವಾಗಬಹುದು. ಹೌದು, ಇದು ದೇಹದ ಇತರ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಆದ್ದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಳದಿಂದ ದೇಹದ ಯಾವ ಭಾಗಗಳ ಮೇಲೆ ಪರಿಣಾಮ ಬೀರುತ್ತವೆ  ನೋಡೋಣ. 

ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದಾಗ ದೇಹದ ಈ ಅಂಗಗಳ ಮೇಲೆ ಬೀರುತ್ತದೆ ಪರಿಣಾಮ : 
ಮೂತ್ರಪಿಂಡದ ಸಣ್ಣ ರಕ್ತನಾಳಗಳು :
ದೀರ್ಘಕಾಲದವರೆಗೆ ಮಧುಮೇಹದಿಂದ ಬಳಲುತ್ತಿರುವ ಜನರು ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ರಕ್ತ ದಲ್ಲಿನ ಸಕ್ಕರೆ ಪ್ರಮಾಣ ಹೆಚ್ಕಾಗುತ್ತಿದ್ದಂತೆಯೇ ಸಣ್ಣ ರಕ್ತನಾಳಗಳು ಹಾನಿಗೊಳಗಾಗುತ್ತವೆ. ಈ ಸಮಯದಲ್ಲಿ, ದೇಹದಲ್ಲಿ ಊತದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದನ್ನು ಮಧುಮೇಹ ಮೂತ್ರಪಿಂಡ ಕಾಯಿಲೆ ಎಂದೂ ಕರೆಯುತ್ತಾರೆ.

ಇದನ್ನೂ ಓದಿ : Diabetics : ಮಧುಮೇಹಿಗಳೇ ತಪ್ಪದೆ ಸೇವಿಸಿ ಈ ಹಣ್ಣುಗಳನ್ನು ; ನಿಯಂತ್ರದಲ್ಲಿರುತ್ತೆ ಶುಗರ್!

ಕಣ್ಣುಗಳ ಮೇಲೆ ಪರಿಣಾಮ :
ಮಧುಮೇಹ ಕಣ್ಣುಗಳ ಮೇಲೂ ಪರಿಣಾಮ ಬೀರಬಹುದು. ಈ ಕಾರಣದಿಂದಾಗಿ, ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಅಷ್ಟೇ ಅಲ್ಲ, ಮಧುಮೇಹದಿಂದ ರೆಟಿನಾದಲ್ಲಿ ದ್ರವದ ಸಮಸ್ಯೆ ಉಂಟಾಗುತ್ತದೆ. ಇದು ನಮ್ಮ ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ.

ಪಾದದ ನರಗಳ ಮೇಲೆ ಪರಿಣಾಮ:
ಮಧುಮೇಹವು ಪಾದದ ನರಗಳಿಗೂ ಹಾನಿಯುಂಟುಮಾಡುತ್ತದೆ. ದೇಹದಲ್ಲಿ ಸಕ್ಕರೆ ಅಂಶ ಅಧಿಕವಾಗುವ ಪರಿಣಾಮ, ಪಾದದ ನರಗಳು ಹಾನಿಗೊಳಗಾಗಲು ಪ್ರಾರಂಭವಾಗುತ್ತದೆ. ಇದರಿಂದಾಗಿ ಮಧುಮೇಹ ರೋಗಿಗಳಲ್ಲಿ ಪಾದಗಳು  ಮರಗಟ್ಟುವ ಸಮಸ್ಯೆ ಉಂಟಾಗುತ್ತದೆ. 

ಇದನ್ನೂ ಓದಿ : Side Effects Of Indian gooseberry : ನೆಲ್ಲಿಕಾಯಿಯನ್ನು ಇವರು ಅಪ್ಪಿತಪ್ಪಿಯೂ ಸೇವಿಸಬಾರದು : ಯಾಕೆ? ಇಲ್ಲಿದೆ ನೋಡಿ

ಹೃದಯದ ಮೇಲೂ ಪರಿಣಾಮ : 
ದೀರ್ಘಕಾಲದವರೆಗೆ ನಿರಂತರವಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಅಧಿಕವಾಗಿದ್ದರೆ, ಹೃದಯದ ಮೇಲೂ ಪರಿಣಾಮ ಬೀರುತ್ತದೆ.  ದೀರ್ಘಕಾಲದವರೆಗೆ ಮಧುಮೇಹ ಹೊಂದಿದ್ದರೆ, ಹೃದ್ರೋಗದ ಅಪಾಯವನ್ನು ಕೂಡಾ ಎದುರಿಸಬೇಕಾಗುತ್ತದೆ.

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ತಜ್ಞರನ್ನು ಸಂಪರ್ಕಿಸಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News