High Cholesterol: ಕೆಟ್ಟ ಕೊಲೆಸ್ಟ್ರಾಲ್ನಿಂದ ಮುಕ್ತಿ ಪಡೆಯಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
Foods To Reduce Cholesterol: ಕಳಪೆ ಜೀವನಶೈಲಿಯಿಂದಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುತ್ತದೆ. ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದು ಮಾರಣಾಂತಿಕ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ, ಚಿಂತಿಸುವ ಅಗತ್ಯವಿಲ್ಲ. ನೀವು ನಿಮ್ಮ ದಿನನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸಿದರೆ ಅಷ್ಟೇ ಸಾಕು.
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಆಹಾರಗಳು: ಬದಲಾದ ಜೀವನಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಜನರಲ್ಲಿ ಹೆಚ್ಚಾಗಿದೆ. ಕೊಲೆಸ್ಟ್ರಾಲ್ ಒಂದು ಮೇಣದಂಥ ವಸ್ತುವಾಗಿದ್ದು ಅದು ರಕ್ತನಾಳಗಳಲ್ಲಿ ತುಂಬಿರುತ್ತದೆ, ಇದರಿಂದಾಗಿ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಇದು ಭವಿಷ್ಯದಲ್ಲಿ ಹಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಕೆಲವೊಮ್ಮೆ ಇದು ಮಾರಣಾಂತಿಕ ಎಂತಲೂ ಸಾಬೀತುಪಡಿಸಬಹುದು. ಅದರಲ್ಲೂ ಮುಖ್ಯವಾಗಿ ಹೈ ಕೊಲೆಸ್ಟ್ರಾಲ್ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ, ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ ಚಿಂತಿಸುವ ಅಗತ್ಯವಿಲ್ಲ, ಸರಿಯಾದ ಜೀವನಶೈಲಿಯಿಂದ ನೀವು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಇದಕ್ಕಾಗಿ ದಿನ ನಿತ್ಯದ ನಿಮ್ಮ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸಿಕೊಳ್ಳಬೇಕು. ಇದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಕೆಲವು ವಿಷಯಗಳಿಂದ ದೂರವಿರುವುದು ಸಹ ಅತ್ಯಗತ್ಯವಾಗಿದೆ.
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ನಿಮ್ಮ ಡಯಟ್ನಲ್ಲಿರಲಿ ಈ ಆಹಾರಗಳು:-
* ಓಟ್ಸ್:
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಓಟ್ಸ್ ಅನ್ನು ಸೇವಿಸಬಹುದು. ವಾಸ್ತವವಾಗಿ, ಓಟ್ಸ್ನಲ್ಲಿ ಕರಗುವ ಫೈಬರ್ ಕಂಡುಬರುತ್ತದೆ. ಇದನ್ನು ಪ್ರತಿದಿನ ಬೆಳಿಗ್ಗೆ ಉಪಹಾರವಾಗಿ ಸೇವಿಸಿ. ಬೇಕಿದ್ದರೆ ಹಾಲಿನಲ್ಲಿ ಬೆರೆಸಿ ಅಥವಾ ಮಸಾಲೆ ಓಟ್ಸ್ ಅನ್ನು ಸಹ ಸೇವಿಸಬಹುದು.
ಇದನ್ನೂ ಓದಿ- Papaya Seeds: ಪರಂಗಿ ಮಾತ್ರವಲ್ಲ ಅದರ ಬೀಜಗಳೂ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
* ಡ್ರೈ ಫ್ರೂಟ್ಸ್:
ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ನೀವು ಗೋಡಂಬಿ, ವಾಲ್‌ನಟ್, ಬಾದಾಮಿ ಮುಂತಾದ ಡ್ರೈ ಫ್ರೂಟ್ಸ್ ಗಳನ್ನು ಸಹ ಸೇವಿಸಬಹುದು. ಒಣ ಹಣ್ಣುಗಳಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ಇದಲ್ಲದೆ, ಪ್ರೋಟೀನ್ಗಳು ಮತ್ತು ಅಗತ್ಯವಾದ ಪೋಷಕಾಂಶಗಳು ಅವುಗಳಲ್ಲಿ ಸಮೃದ್ಧವಾಗಿರುತ್ತವೆ.
* ಸೇಬು:
ನಿತ್ಯ ಒಂದು ಸೇಬು ಸೇವಿಸಿದರೆ ವೈದ್ಯರಿಂದ ದೂರ ಉಳಿಯಬಹುದು ಎಂಬ ಮಾತಿದೆ. ಪ್ರತಿದಿನ ಸೇಬನ್ನು ತಿನ್ನುವುದರಿಂದ ನಿಮ್ಮ ಆರೋಗ್ಯವು ಯಾವಾಗಲೂ ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ. ವಾಸ್ತವವಾಗಿ, ಸೇಬುಗಳಲ್ಲಿ ಡಯೆಟರಿ ಫೈಬರ್ ಕಂಡುಬರುತ್ತದೆ, ಇದು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ- ಕೊಲೆಸ್ಟ್ರಾಲ್ ಅಧಿಕವಾಗಿದ್ದಾಗ ತುಪ್ಪ ತಿನ್ನಬಹುದೇ ? ವೈದ್ಯರು ಹೇಳುವುದೇನು ?
* ಸೋಯಾಬೀನ್:
ಸೋಯಾಬೀನ್ ಹೆಚ್ಚಿನ ಪ್ರಮಾಣದ ಪ್ರೋಟೀನ್ ಅನ್ನು ಹೊಂದಿರುತ್ತದೆ. ಸೋಯಾಬೀನ್‌ಗಳಿಂದ ತಯಾರಿಸಿದ ಆಹಾರಗಳ ಸೇವನೆಯಿಂದ ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.