ನಿಧಾನವಾಗಿ ಸಾವಿನತ್ತ ಕೊಂಡೊಯ್ಯುವ ಕೊಲೆಸ್ಟ್ರಾಲ್ ಹೆಚ್ಚಾದಾಗ ದೇಹ ಈ ಸಂಕೇತಗಳನ್ನು ನೀಡುತ್ತದೆ .!

Bad Cholesterol Symptoms :ಸೂಕ್ತ ಸಮಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ ಲಕ್ಷಣಗಳನ್ನು ಗುರುತಿಸಿದರೆ, ಗಂಭೀರ ಹೃದಯ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು.   

Written by - Ranjitha R K | Last Updated : Nov 10, 2022, 09:16 AM IST
  • ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ.
  • ದೇಹದಲ್ಲಿ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ.
  • ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.
ನಿಧಾನವಾಗಿ ಸಾವಿನತ್ತ ಕೊಂಡೊಯ್ಯುವ ಕೊಲೆಸ್ಟ್ರಾಲ್ ಹೆಚ್ಚಾದಾಗ ದೇಹ ಈ ಸಂಕೇತಗಳನ್ನು ನೀಡುತ್ತದೆ .! title=
High Cholesterol Symptoms (file photo)

Bad Cholesterol Symptoms : ಕೊಲೆಸ್ಟ್ರಾಲ್ ಮೇಣದಂಥ ವಸ್ತುವಾಗಿದ್ದು, ಇದು ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ. ಇದರಿಂದಾಗಿ ದೇಹದಲ್ಲಿ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದಾಗ ನಮ್ಮ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನ  ಮೊದಲ ಲಕ್ಷಣ ಪಾದಗಳಲ್ಲಿ ಕಂಡುಬರುತ್ತವೆ. ಇದಲ್ಲದೆ, ಕೊಲೆಸ್ಟ್ರಾಲ್ ಮಟ್ಟವು ತುಂಬಾ ಹೆಚ್ಚಾದಾಗ, ಇದು ಪೆರಿಫೆರಲ್ ಆರ್ಟರಿ ಡಿಸೀಸ್ ನಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಸೂಕ್ತ ಸಮಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ ಲಕ್ಷಣಗಳನ್ನು ಗುರುತಿಸಿದರೆ, ಗಂಭೀರ ಹೃದಯ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು. 

ಏನಿದು ಪೆರಿಫೆರಲ್ ಆರ್ಟರಿ ಡಿಸೀಸ್ :
ರಕ್ತನಾಳಗಳಲ್ಲಿ ಹೆಚ್ಚು ಕೊಲೆಸ್ಟ್ರಾಲ್ ಸಂಗ್ರಹವಾಗುವುದರಿಂದ, ರಕ್ತನಾಳಗಳ ಮೂಲಕ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಹೀಗಾದಾಗ ದೇಹದ ಅನೇಕ ಭಾಗಗಳಲ್ಲಿ ಅದರ ಚಿಹ್ನೆಗಳು ಗೋಚರಿಸುತ್ತವೆ. ರಕ್ತ ಸಂಚಲನ ಸರಿಯಾಗಿ ಸಾಧ್ಯವಾಗದ ಲಕ್ಷಣಗಳು ಮೊದಲು ಪಾದಗಳಲ್ಲಿ ಕಂಡುಬರುತ್ತವೆ. ಇದನ್ನು ಪೆರಿಫೆರಲ್ ಆರ್ಟರಿ ಡಿಸೀಸ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ : ಈ ಎಲ್ಲಾ ಸಮಸ್ಯೆಗಳಿಗೆ ರಾಮಬಾಣ ಪೇರಳೆ ಎಲೆ

ಪೆರಿಫೆರಲ್ ಆರ್ಟರಿ ಡಿಸೀಸ್ ಲಕ್ಷಣಗಳು : 
ಕಾಲುಗಳಲ್ಲಿ ಸೆಳೆತದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ವಿಶ್ರಾಂತಿ ಅಥವಾ ದೀರ್ಘ ನಿದ್ರೆಯ ನಂತರ ಎಚ್ಚರವಾದಾಗ ಕಾಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇದರ ಹೊರತಾಗಿ, ಪಾದಗಳ ಅಡಿಭಾಗದಲ್ಲಿ ಸುಡುವ ಅನುಭವ, ನೋವು ಕಾಣಿಸಿಕೊಳ್ಳುತ್ತದೆ. ಇದು ಬಾಹ್ಯ ಅಪಧಮನಿ ಕಾಯಿಲೆಯ ಸಂಕೇತವಾಗಿದೆ. ಬಾಹ್ಯ ಅಪಧಮನಿ ಕಾಯಿಲೆಯು ಪಾದಗಳ ಮರಗಟ್ಟುವಿಕೆ, ಕಾಲುಗಳಲ್ಲಿ ಬಲ ಇಲ್ಲದಂತಾಗುವುದು, ಪಾದಗಳು ಭಾರವಾಗುವುದು ಮುಂತಾದ ಸಮಸ್ಯೆಗಳನ್ನು ಉಂಟುಮಾಡಬಹುದು.

ಅಧಿಕ ಕೊಲೆಸ್ಟ್ರಾಲ್ ನಿಯಂತ್ರಿಸುವುದು ಹೇಗೆ? :
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಇದಕ್ಕಾಗಿ ಧಾನ್ಯಗಳು, ಕಾಳುಗಳು, ಬೀನ್ಸ್, ಹಸಿರು ತರಕಾರಿಗಳು, ಸೇಬು, ಬಾಳೆಹಣ್ಣು, ಕಿತ್ತಳೆ, ಪೇರಳೆ ಮುಂತಾದ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು. ನಾನ್ ವೆಜ್ ತಿಂದರೆ ಮೀನು ತಿನ್ನಬಹುದು. ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿವೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬೇಕಾದರೆ ಮುಖ್ಯವಾಗಿ ಆಲ್ಕೊಹಾಲಿನಿಂದ ದೂರವಿರಬೇಕು.

ಇದನ್ನೂ ಓದಿ : Pregnancy Tips : ಗರ್ಭಾವಸ್ಥೆಯಲ್ಲಿ ಅಪ್ಪಿತಪ್ಪಿಯೂ ತಿನ್ನಬೇಡಿ ಈ ಹಣ್ಣು ಮತ್ತೆ ಈ ಎಲೆ!

 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News