ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೆ ಕಾಲಿನಲ್ಲಿ ಕಾಣಿಸಿಕೊಳ್ಳುತ್ತದೆ ಈ ಲಕ್ಷಣ
Bad Cholesterol Warning Sign In Legs: ಕೊಲೆಸ್ಟ್ರಾಲ್ ಹೆಚ್ಚಾದಾಗ ನಮ್ಮ ದೇಹವು ಹಲವು ರೀತಿಯ ಸೂಚನೆಗಳನ್ನು ನೀಡುತ್ತದೆ. ಅದನ್ನು ಸರಿಯಾಗಿ ತಿಳಿದುಕೊಂಡರೆ ಗಂಭೀರ ಕಾಯಿಲೆಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು.
Bad Cholesterol Warning Sign In Legs : ರಕ್ತದಲ್ಲಿ ಶೇಖರಣೆಯಾಗುವ ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದ ದೊಡ್ಡ ಶತ್ರು. ಅದು ರಕ್ತನಾಳಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ. ಹೀಗಾದಾಗ ರಕ್ತವು ಹೃದಯ ಮತ್ತು ದೇಹದ ಉಳಿದ ಭಾಗಗಳನ್ನು ತಲುಪುವಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ರಕ್ತದೊತ್ತಡ, ಹೃದಯಾಘಾತ ಮತ್ತು ಎಲ್ಲಾ ರೀತಿಯ ಪರಿಧಮನಿಯ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಕೊಲೆಸ್ಟ್ರಾಲ್ ತುಂಬಾ ಅಪಾಯಕಾರಿಯಾಗಿದ್ದು, ಅದರ ಕಾರಣದಿಂದಾಗಿ ಮಧುಮೇಹದಂತಹ ಗಂಭೀರ ಕಾಯಿಲೆಗಳು ಕೂಡಾ ಎದುರಾಗಬಹುದು. ಕೊಲೆಸ್ಟ್ರಾಲ್ ಲಕ್ಷಣವನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಬಹಳ ಮುಖ್ಯ.
ಕೊಲೆಸ್ಟ್ರಾಲ್ ಹೆಚ್ಚಾದಾಗ ಪಾದದಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ :
ಕೊಲೆಸ್ಟ್ರಾಲ್ ಹೆಚ್ಚಾದಾಗ ನಮ್ಮ ದೇಹವು ಹಲವು ರೀತಿಯ ಸೂಚನೆಗಳನ್ನು ನೀಡುತ್ತದೆ. ಅದನ್ನು ಸರಿಯಾಗಿ ತಿಳಿದುಕೊಂಡರೆ ಗಂಭೀರ ಕಾಯಿಲೆಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು. ಕೊಲೆಸ್ಟ್ರಾಲ್ ಹೆಚ್ಚಾದಾಗ ಅನೇಕ ವಿಚಿತ್ರ ಲಕ್ಷಣಗಳು ನಮ್ಮ ಪಾದಗಳಲ್ಲೂ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ನಿಮಗೂ ಅಂತಹ ಅನುಭವಗಳಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಮತ್ತು ಲಿಪಿಡ್ ಪ್ರೊಫೈಲ್ ಪರೀಕ್ಷೆಯನ್ನು ಮಾಡಿ.
ಇದನ್ನೂ ಓದಿ : Milk Benefits: ರಾತ್ರಿ ಮಲಗುವ ಮುನ್ನ 1 ಲೋಟ ಹಾಲು ಕುಡಿದರೆ ಇಷ್ಟೆಲ್ಲಾ ಲಾಭ ಗೊತ್ತಾ?
1. ಪಾದಗಳ ಮರಗಟ್ಟುವಿಕೆ :
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾದಾಗ, ಪಾದಗಳಿಗೆ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ. ಇದರಿಂದಾಗಿ ಅನೇಕ ಬಾರಿ ಪಾದಗಳ ಮರಗಟ್ಟುವ ಅನುಭವವಾಗುತ್ತದೆ.
2. ಪಾದಗಳು ತಣ್ಣಗಾಗುವುದು :
ಕೊಲೆಸ್ಟ್ರಾಲ್‌ನಿಂದ ನಮ್ಮ ಅಪಧಮನಿಗಳಲ್ಲಿ ಅಡಚಣೆ ಉಂಟಾದಾಗ, ಕಾಲುಗಳಲ್ಲಿ ರಕ್ತದ ಕೊರತೆ ಉಂಟಾಗುತ್ತದೆ. ಇದರಿಂದಾಗಿ ನಮ್ಮ ಪಾದಗಳು ಕೆಲವೊಮ್ಮೆ ತಣ್ಣಗಾಗುತ್ತವೆ.
3. ಕಾಲುಗಳಲ್ಲಿ ನೋವು :
ರಕ್ತದ ಹರಿವು ಸರಿಯಾಗಿಲ್ಲದಿದ್ದಾಗ, ಆಮ್ಲಜನಕವು ನಮ್ಮ ಪಾದಗಳನ್ನು ಸರಿಯಾಗಿ ತಲುಪಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪಾದಗಳಲ್ಲಿ ತೀವ್ರ ನೋವು ಉಂಟಾಗುತ್ತದೆ.
ಇದನ್ನೂ ಓದಿ : Diabetes: ಇನ್ಸುಲಿನ್ ನ ಪಾವರ್ ಹೌಸ್ ಆಗಿವೆ ಈ ತರಕಾರಿ ಹಾಗೂ ಮಸಾಲೆಗಳು
4. ಪಾದಗಳ ಉಗುರುಗಳು ಹಳದಿ ಬಣ್ಣಕ್ಕೆ ತಿರುಗುವುದು :
ಅಧಿಕ ಕೊಲೆಸ್ಟ್ರಾಲ್ ನ ಪರಿಣಾಮವು ನಮ್ಮ ಪಾದಗಳ ಉಗುರುಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಸಾಮಾನ್ಯವಾಗಿ ನಮ್ಮ ಉಗುರುಗಳು ಗುಲಾಬಿ ಬಣ್ಣದಲ್ಲಿರುತ್ತವೆ. ಆದರೆ, ಹೆಚ್ಚುತ್ತಿರುವ ಕೊಲೆಸ್ಟ್ರಾಲ್‌ನಿಂದ ರಕ್ತದ ಹರಿವು ಸರಿಯಾಗಿಲ್ಲದಿದ್ದರೆ, ಉಗುರುಗಳು ಹಳದಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತವೆ ಅಥವಾ ಅದರಲ್ಲಿ ಗೆರೆಗಳು ಕಾಣಿಸಿಕೊಳ್ಳುತ್ತವೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.