ಬೆಂಗಳೂರು: ಅಧುನಿಕ ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ಬಾಧಿಸುತ್ತಿರುವ ಸಮಸ್ಯೆ ಮಧುಮೇಹ. ಮಧುಮೇಹವನ್ನು ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಕಾಯಿಲೆಗಳಿಗೆ ಬಲಿಯಾಗಬಹುದು. ಮಧುಮೇಹ, ಡಯಾಬಿಟಿಸ್ ಬಂತೆಂದರೆ ಕೇವಲ ಮಾತ್ರೆ ತೆಗೆದುಕೊಳ್ಳುವುದು ಮಾತ್ರವಲ್ಲ, ನಿಮ್ಮ ಆಹಾರ, ಜೀವನ ಶೈಲಿಯಲ್ಲಿಯೂ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಕೆಲವು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದಲೂ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ನಿಮಗೆ ತಿಳಿದಿದೆಯೇ?


COMMERCIAL BREAK
SCROLL TO CONTINUE READING

ಹೌದು, ಕೆಲವು ನೈಸರ್ಗಿಕ ವಿಧಾನಗಳಿಂದಲೂ ಮಧುಮೇಹವನ್ನು ನಿಯಂತ್ರಿಸಬಹುದು. ಆ ವಿಧಾನಗಳು ಯಾವುವು ಎಂದು ತಿಳಿಯೋಣ...
ನಿಯಮಿತ ವ್ಯಾಯಾಮ:
ಮ್ಯಾಯಾಮ ಮಾಡುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ. ಮಾತ್ರವಲ್ಲ, ಇದು ಸ್ನಾಯುಗಳು ಶಕ್ತಿಗಾಗಿ ರಕ್ತದಲ್ಲಿನ ಸಕ್ಕರೆಯನ್ನು ಬಳಸಲು ಅನುಮತಿಸುತ್ತದೆ. ಅಷ್ಟೇ ಅಲ್ಲ, ನಿಯಮಿತ ವ್ಯಾಯಾಮದಿಂದ ಮಧುಮೇಹವೂ ನಿಯಂತ್ರಣದಲ್ಲಿರುತ್ತದೆ.


ನಿಮ್ಮನ್ನು ಹೈಡ್ರೀಕರಿಸಿ:
ದೇಹವು ಹೆಚ್ಚಾಗಿ ನೀರಿನಿಂದ ಮಾಡಲ್ಪಟ್ಟಿದೆ. ಹಾಗಾಗಿ, ನಿಮ್ಮನ್ನು ಸದಾ ಹೈಡ್ರೀಕರಿಸುವುದರಿಂದ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಅದರಲ್ಲೂ ನೀವು ಮಧುಮೇಹಿಗಳಾಗಿದ್ದರೆ ಈ ಬಗ್ಗೆ ಹೆಚ್ಚಿನ ಗಮನಹರಿಸಿ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಬಹುದು.


ಇದನ್ನೂ ಓದಿ- ಬೆಳ್ಳಂಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆನಸಿಟ್ಟ ಈ ಡ್ರೈ ಫ್ರೂಟ್ಸ್ ತಿಂದರೆ ಸಿಗುತ್ತೆ ಅದ್ಭುತ ಆರೋಗ್ಯ ಪ್ರಯೋಜನಗಳು


ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳಿ:
ವಿಟಮಿನ್ ಡಿ ಯ ಅತ್ಯುತ್ತಮ ಮೂಲ ಸೂರ್ಯನ ಕಿರಣಗಳು ಎಂದು ನಿಮಗೆ ತಿಳಿದೇ ಇದೆ. ನಿತ್ಯ ಕನಿಷ್ಠ 15-20 ನಿಮಿಷಗಳವರೆಗೆ ನಿಮ್ಮನ್ನು ನೀವು ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಿವೆ. ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ರಕ್ತದ ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಬಹುದು ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಲವು ಸಂಶೋಧನೆಗಳಿಂದ ತಿಳಿದುಬಂದಿದೆ.


ಒತ್ತಡ ನಿರ್ವಹಣೆ:
ಈ ಒತ್ತಡ ಭರಿತ ಜೀವನ ಶೈಲಿಯು ನಮ್ಮನ್ನು ಹಲವು ರೋಗಗಳಿಗೆ ಬಲಿಯಾಗುವಂತೆ ಮಾಡುತ್ತಿದೆ. ಇದನ್ನು ತಪ್ಪಿಸಲು ಒತ್ತಡ ನಿರ್ವಹಣೆ ಬಹಳ ಮುಖ್ಯ. ಒತ್ತಡವನ್ನು ನಿರ್ವಹಿಸುವುದು ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.


ಇದನ್ನೂ ಓದಿ- ಹುಳುಕಡ್ಡಿ ಸಮಸ್ಯೆಗೆ ನೈಸರ್ಗಿಕ ಮನೆಮದ್ದು


ತೂಕ ನಿಯಂತ್ರಣ:
ದೇಹದ ತೂಕ ಹೆಚ್ಚಾದಂತೆ ದೇಹವು ಇನ್ಸುಲಿನ್ ಅನ್ನು ಬಳಸಲು ಕಷ್ಟವಾಗುತ್ತದೆ. ಇದನ್ನು ತಪ್ಪಿಸಲು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದಲ್ಲದೆ, ಅಧಿಕ ತೂಕ, ಬೊಜ್ಜಿನ ಸಮಸ್ಯೆಯನ್ನು ನಿರ್ಲಕ್ಷಿಸದೆ ಮೊದಲು ತೂಕ ನಿಯಂತ್ರಣದತ್ತ ಗಮನಹರಿಸಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.