ರಕ್ತದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಅನ್ನು ನಾರ್ಮಲ್ ಮಾಡುತ್ತದೆ ಈ ಪಾನೀಯಗಳು

Cholesterol control tips : ಮನೆಯಲ್ಲಿ ತಯಾರಿಸಿದ ಐದು ಪಾನೀಯಗಳು ಔಷಧಿ ಇಲ್ಲದೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಬಿಪಿ ಮತ್ತು ಬೊಜ್ಜು ನಿಯಂತ್ರಣಕ್ಕೂ ಇದು ಸಹಕಾರಿ. ಯಾವುದೇ ತೊಂದರೆ ಮತ್ತು ಶ್ರಮವಿಲ್ಲದೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. 

Written by - Ranjitha R K | Last Updated : Mar 12, 2024, 02:55 PM IST
  • ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ, ಇದು ರಕ್ತ ಪರಿಚಲನೆಗೆ ಅಡಚಣೆಯಾಗುತ್ತದೆ.
  • ನಿರ್ಲಕ್ಷಿಸಿದರೆ ಅದು ಮಾರಣಾಂತಿಕವಾಗಿ ಸಾಬೀತಾಗಬಹುದು
  • ಮನೆ ಮದ್ದುಗಳ ಸಹಾಯದಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.
ರಕ್ತದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಅನ್ನು ನಾರ್ಮಲ್ ಮಾಡುತ್ತದೆ ಈ ಪಾನೀಯಗಳು title=

Homemade Drinks to control cholesterol : ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ, ಇದು ರಕ್ತ ಪರಿಚಲನೆಯಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದರೆ ದೇಹದಲ್ಲಿ ಹೃದಯಾಘಾತ, ಸ್ಥೂಲಕಾಯತೆ, ಅಧಿಕ ರಕ್ತದೊತ್ತಡ ಮುಂತಾದ ಕಾಯಿಲೆಗಳನ್ನು ಉಂಟುಮಾಡುತ್ತದೆ. ಈ ರೋಗಗಳನ್ನು ದೀರ್ಘಕಾಲದವರೆಗೆ ನಿರ್ಲಕ್ಷಿಸಿದರೆ, ಅದು ಮಾರಣಾಂತಿಕವಾಗಿ ಸಾಬೀತಾಗಬಹುದು. ಆರೋಗ್ಯಕರ ಜೀವನಕ್ಕಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬೇಕು. ಕೆಲವು 
ಮನೆ ಮದ್ದುಗಳ ಸಹಾಯದಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಶಾಶ್ವತವಾಗಿ ಕಡಿಮೆ ಮಾಡಬಹುದು. 

1.ಕೊತ್ತಂಬರಿ ಬೀಜದ ನೀರು : 
ಕೊತ್ತಂಬರಿ ಬೀಜದ ನೀರು ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಹೃದಯದ ಆರೋಗ್ಯವೂ ವೃದ್ಧಿಸುತ್ತದೆ.ಕೊಲೆಸ್ಟ್ರಾಲ್ ಅನ್ನು ಸಮತೋಲನದಲ್ಲಿಡಲು, ಕೊತ್ತಂಬರಿ ನೀರನ್ನು ನಿಯಮಿತವಾಗಿ ಸೇವಿಸಬೇಕು. 

ಕೊತ್ತಂಬರಿ ನೀರು ಮಾಡುವ ವಿಧಾನ : 
- ಮೊದಲು 2 ಚಮಚ ಕೊತ್ತಂಬರಿ ಬೀಜ ಮತ್ತು ಒಂದು ಕಪ್ ನೀರನ್ನು ತೆಗೆದುಕೊಂದು ಈ ನೀರನ್ನು ಚೆನ್ನಾಗಿ ಕುದಿಸಿ. 
-ಸುಮಾರು 10 ನಿಮಿಷಗಳ ನಂತರ ಗ್ಯಾಸ್ ಆಫ್ ಮಾಡಿ.
- ಹೀಗೆ ಕುದಿಸಿದ ನೀರನ್ನು ಇನ್ನೊಂದು ಕಪ್‌ಗೆ ಫಿಲ್ಟರ್‌ ಮಾಡಿಕೊಳ್ಳಿ. 
-ಈಗ ಈ ಫಿಲ್ಟರ್ ಮಾಡಿದ ನೀರನ್ನು ರಾತ್ರಿಯಿಡೀ ಹಾಗೆಯೇ ಬಿಡಿ.
- ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.
 ಹೀಗೆ ಮಾಡುತ್ತಾ ಬಂದರೆ ಕೊಲೆಸ್ಟ್ರಾಲ್ ಮಟ್ಟವನ್ನು ಶೀಘ್ರದಲ್ಲೇ ಕಂಟ್ರೋಲ್  ಮಾಡಬಹುದು.

ಇದನ್ನೂ ಓದಿ : Diabetes Symptoms In Men: ಪುರುಷರಲ್ಲಿ ಕಂಡು ಬರುವ ಈ ಲಕ್ಷಣಗಳು ಮಧುಮೇಹದ ಸೂಚನೆಯೂ ಆಗಿರಬಹುದು!

2.ಸೊಂಫು ಮತ್ತು ಜೀರಿಗೆ ನೀರು : 
ಸೊಂಫು ಮತ್ತು ಜೀರಿಗೆ ನೀರನ್ನು ಸೇವಿಸುವುದರಿಂದ ಬೊಜ್ಜು ಮತ್ತು ಕೊಲೆಸ್ಟ್ರಾಲ್  ಸಮಸ್ಯೆಯಿಂದ ಮುಕ್ತಿ ಕಾಣಬಹುದು.ಈ ಎರಡೂ ಮಸಾಲೆಗಳು ಆಯುರ್ವೇದ ಗುಣಗಳಿಂದ ಕೂಡಿದೆ. ಅವುಗಳಲ್ಲಿ ಕಂಡುಬರುವ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಉರಿಯೂತದ ಗುಣಲಕ್ಷಣಗಳು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಸುಲಭವಾಗಿ ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ಮೂಲಕ ಹೆಚ್ಚಿದ ಕೊಲೆಸ್ಟ್ರಾಲ್ ಅನ್ನು ಕಡಿಮೆ  ಮಾಡುತ್ತದೆ.

ಸೊಂಫು ಮತ್ತು ಜೀರಿಗೆ ನೀರು ಮಾಡುವ ವಿಧಾನ :
- ಇದಕ್ಕಾಗಿ ಬಾಣಲೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಳ್ಳಿ. 
- ಇದರ ನಂತರ 1 ಟೀಚಮಚ ಜೀರಿಗೆ ಮತ್ತುಸೊಂಫನ್ನು ಸೇರಿಸಿ.
- ಈಗ ಈ ಮಿಶ್ರಣವನ್ನು ಚೆನ್ನಾಗಿ ಕುದಿಯಲು ಬಿಡಿ. 
- ಈ ನೀರು ಅರ್ಧದಷ್ಟಾಗುವವರೆಗೆ ಕುದಿಸಿ.
- ನಂತರ, ಈ ನೀರನ್ನು ಫಿಲ್ಟರ್ ಮಾಡಿಕೊಳ್ಳಿ.  
-  ಈ ನೀರು ತಣ್ಣಗಾದ ನಂತರ ಒಂದು ಚಮಚ ಜೇನುತುಪ್ಪ ಸೇರಿಸಿ ಕುಡಿಯಿರಿ.

ಇದನ್ನೂ ಓದಿ : ರಾತ್ರಿ ಊಟಕ್ಕೆ ಮುನ್ನ ಈ ಹಣ್ಣು ತಿನ್ನಿ… ಬ್ಲಡ್ ಶುಗರ್ ಲೆವೆಲ್ ಯಾವತ್ತೂ ನಿಯಂತ್ರಣದಲ್ಲಿರುತ್ತೆ! ಎಂದೂ ಹೆಚ್ಚಾಗೋದಿಲ್ಲ

3.ಮೆಂತ್ಯೆ ನೀರು : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್‌ನಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೀರನ್ನು ಕುಡಿಯುವುದರಿಂದ   ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. 

1 ಟೀಚಮಚ ಮೆಂತ್ಯೆ ಬೀಜಗಳನ್ನು 1 ಗ್ಲಾಸ್ ನೀರಿನಲ್ಲಿ ಹಾಕಿ ರಾತ್ರಿಯಿಡಿ ನೆನೆಸಿಡಿ.
ಈ ನೀರನ್ನು ಫಿಲ್ಟರ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

4. ನಿಂಬೆ ನೀರು : 
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ ಒಂದು ಇಡೀ ನಿಂಬೆಹಣ್ಣನ್ನು ಉಗುರುಬೆಚ್ಚಗಿನ ನೀರಿನಲ್ಲಿ ಹಿಂಡಿ ಮತ್ತು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.

ಇದನ್ನೂ ಓದಿ : Bad Cholesterol: ಶರೀರದಿಂದ ಕೆಟ್ಟ ಕೊಲೆಸ್ಟ್ರಾಲ್ ಕಿತ್ತೆಸೆಯುವ ಸಾಮರ್ಥ್ಯ ಹೊಂದಿವೆ ಈ ತರಕಾರಿಗಳು!

5.ಅರಿಶಿನ ನೀರು : 
ತಜ್ಞರ ಪ್ರಕಾರ, ಅರಿಶಿನವು ಆಂಟಿ-ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಇದು ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಸೇವಿಸಬಹುದು. ಇದು ದೇಹದಲ್ಲಿ ಹೆಚ್ಚುತ್ತಿರುವ ತೂಕ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News