Health tips : ಭಾರತೀಯ ಅಡುಗೆ ಮನೆಯಲ್ಲಿ ಹಸಿರು ಮೆಣಸಿನಕಾಯಿಗೆ ಪ್ರಮುಖ ಸ್ಥಾನವಿದೆ. ಪ್ರತಿ ಆಹಾರದಲ್ಲಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಹಸಿರು ಮೆಣಸಿನಕಾಯಿಯನ್ನು ಪ್ರತಿದಿನ ಆಹಾರದಲ್ಲಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳು ದೊರೆಯುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.


COMMERCIAL BREAK
SCROLL TO CONTINUE READING

ಮೆಣಸಿನಕಾಯಿಯಲ್ಲಿರುವ ಗುಣಗಳು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲೂ ಪದೇ ಪದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಹಸಿಮೆಣಸಿನ ಕಾಯಿಯನ್ನು ಸೇವಿಸಲೇಬೇಕು. ಸಧ್ಯ ಹಸಿರು ಮೆಣಸಿನಕಾಯಿಯನ್ನು ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯೋಣ.


ಇದನ್ನೂ ಓದಿ:ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು, ಪ್ರತಿದಿನ ಈ 3 ಆಹಾರಗಳನ್ನು ಸೇವಿಸಿ, ಪರಿಣಾಮ ಒಂದು ವಾರದಲ್ಲಿ ಕಾಣಿಸುತ್ತೆ..!


ಕೊಲೆಸ್ಟ್ರಾಲ್ : ಹಸಿರು ಮೆಣಸಿನಲ್ಲಿ ಇರುವ ಕ್ಯಾಪ್ಸೈಸಿನ್ ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸುತ್ತದೆ. ಇದು ರಕ್ತದಲ್ಲಿ ಕೊಲೆಸ್ಟ್ರಾಲ್ ಶೇಖರಣೆಯಿಂದ ಉಂಟಾಗುವ ಅಧಿಕ ರಕ್ತದೊತ್ತಡವನ್ನು ಸಹ ಸುಲಭವಾಗಿ ನಿವಾರಿಸುತ್ತದೆ. ದೇಹದಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರತಿದಿನ ಆಹಾರದಲ್ಲಿ ಹಸಿರು ಮೆಣಸನ್ನು ಸೇವಿಸುವುದು ಒಳ್ಳೆಯದು


ಕ್ಯಾನ್ಸರ್‌ : ಆಧುನಿಕ ಜೀವನಶೈಲಿಯಿಂದಾಗಿ ಅನೇಕ ಜನರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದರೆ ಸಂಶೋಧನೆಗಳ ಪ್ರಕಾರ, ಪ್ರತಿದಿನ ಹಸಿರು ಮೆಣಸು ಸೇವಿಸುವವರಲ್ಲಿ ಕ್ಯಾನ್ಸರ್ ಅಪಾಯವು ಶೇಕಡಾ 50 ರಷ್ಟು ಕಡಿಮೆ ಎನ್ನಲಾಗಿದೆ. ಅದೂ ಅಲ್ಲದೆ ಹಸಿ ಮೆಣಸಿನಕಾಯಿ ದೇಹವನ್ನು ಕ್ಯಾನ್ಸರ್‌ ನಿಂದ ರಕ್ಷಿಸುತ್ತದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.


ದೀರ್ಘಕಾಲದ ಕಾಯಿಲೆಗಳಿಂದ ಪರಿಹಾರ: ಅನೇಕ ಜನರು ಆಗಾಗ್ಗೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಇದರಿಂದಾಗಿ ಕೆಲವರು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರಿಗೆ ಹಸಿರು ಮೆಣಸಿನಕಾಯಿ ಪರಿಣಾಮಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಎಲ್ಲಾ ರೀತಿಯ ದೀರ್ಘಕಾಲದ ಕಾಯಿಲೆಗಳಿಂದ ಪರಿಹಾರವನ್ನು ನೀಡುತ್ತದೆ.


ಇದನ್ನೂ ಓದಿ:ಈ ಬಿಳಿ ಧಾನ್ಯಗಳ ಸಹಾಯದಿಂದ ನೀವು ತೂಕವನ್ನು ಕಳೆದುಕೊಳ್ಳಬಹುದು..! ಅವುಗಳನ್ನು ಬಳಸುವ ಬಗೆ ಇಲ್ಲಿದೆ


ತ್ವಚೆಯ ಆರೋಗ್ಯ : ಹಸಿರು ಮೆಣಸಿನಕಾಯಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಲಭ್ಯವಿವೆ. ಅದರಲ್ಲೂ ಇದರಲ್ಲಿರುವ ವಿಟಮಿನ್ ಸಿ ಚರ್ಮವನ್ನು ಆರೋಗ್ಯವಾಗಿಡುವಲ್ಲಿ ಪರಿಣಾಮಕಾರಿಯಾಗಿದೆ. ಇದು ತ್ವಚೆಯ ಮೇಲಿರುವ ಮೊಡವೆ ಕಲೆಗಳನ್ನು ತೆಗೆದುಹಾಕಲು ಸಹ ಸಹಾಯ ಮಾಡುತ್ತದೆ.


ರೋಗನಿರೋಧಕ ಶಕ್ತಿ: ಚಳಿಗಾಲದಲ್ಲಿ ಜನರು ಹೆಚ್ಚಾಗಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಅಂತಹವರು ಪ್ರತಿದಿನ ಹಸಿರು ಮೆಣಸಿನಕಾಯಿಯನ್ನು ಆಹಾರದಲ್ಲಿ ತೆಗೆದುಕೊಳ್ಳಬೇಕು. ಇದರ ಗುಣಲಕ್ಷಣಗಳು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ ಮತ್ತು ದೇಹವನ್ನು ಸೋಂಕುಗಳಿಂದ ಮುಕ್ತಗೊಳಿಸುತ್ತದೆ.


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಪ್ರತಿದಿನ ಅನಾರೋಗ್ಯಕರ ಆಹಾರವನ್ನು ಸೇವಿಸುವುದರಿಂದ ಅನೇಕರು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹವರು ಪ್ರತಿದಿನ ಹಸಿರು ಮೆಣಸಿನಕಾಯಿ ಇರುವ ಆಹಾರವನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಇದಲ್ಲದೆ, ಹಸಿರು ಮೆಣಸಿನಕಾಯಿಯ ಗುಣಲಕ್ಷಣಗಳು ಚಯಾಪಚಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ.


ಇದನ್ನೂ ಓದಿ:Dengue ಜ್ವರ ಇದ್ದಾಗ ಈ ತರಕಾರಿಗಳ ಸೇವನೆಯಿಂದ ಶೀಘ್ರದಲ್ಲೇ ಸಿಗುತ್ತೆ ಪರಿಹಾರ


ದೇಹದ ತೂಕವನ್ನು ನಿಯಂತ್ರಿಸುತ್ತದೆ: ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ತಮ್ಮ ಆಹಾರದಲ್ಲಿ ಹಸಿರು ಮೆಣಸಿನಕಾಯಿಯನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಇದಲ್ಲದೆ, ಅದರ ಗುಣಲಕ್ಷಣಗಳು ದೇಹದ ತೂಕವನ್ನು ನಿಯಂತ್ರಿಸುತ್ತವೆ. ಇದಲ್ಲದೆ, ಹಸಿರು ಮೆಣಸು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.