How To Protect Yourself From Kidney Stones: ಸಾಮಾನ್ಯವಾಗಿ ಮೂತ್ರ ಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳು ತುಂಬಾ ನೋವಿನಿಂದ ಕೂಡಿರುತ್ತವೆ. ಕಿಡ್ನಿಗೆ ಸಂಬಂಧಿಸಿದ ಈ ಸಮಸ್ಯೆಗಳಲ್ಲಿ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯೂ ಒಂದು. ಸಾಮಾನ್ಯವಾಗಿ ಯಾವುದೇ ಓರ್ವ ಸ್ನೇಹಿತನಿಗೆ ಮೂತ್ರಪಿಂಡದ ಕಲ್ಲುಗಳ ಸಮಸ್ಯೆ ಎದುರಾದಾಗ, ತುಂಬಾ ನೋವಿನ ಸ್ಥಿತಿಯನ್ನು ಆತ ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಒಬ್ಬ ವ್ಯಕ್ತಿಯು ತನ್ನ ಆಹಾರಕ್ರಮವನ್ನು (ಕಿಡ್ನಿ ಸ್ಟೋನ್ ಡಯಟ್) ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕಾಗುತ್ತದೆ. ನಿಮಗೂ ಕೂಡ ಕಿಡ್ನಿ ಸಮಸ್ಯೆ ಇದ್ದರೆ, ಇಲ್ಲಿ ನೀಡಿರುವ ಕೆಲವು ಜ್ಯೂಸ್‌ಗಳ ಸಹಾಯದಿಂದ ನೀವು ಈ ಸಮಸ್ಯೆಯನ್ನು ಹೋಗಲಾಡಿಸಬಹುದು. ಅವು ಯಾವುವು ಮತ್ತು ಅವುಗಳನ್ನು ಹೇಗೆ ತಯಾರಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.


COMMERCIAL BREAK
SCROLL TO CONTINUE READING

ಮೂತ್ರಪಿಂಡದ ಕಲ್ಲುಗಳ ನಿವಾರಣೆಗೆ ಇಲ್ಲಿವೆ ಜ್ಯೂಸ್ ಗಳು
ಒಂದು ವೇಳೆ ನೀವೂ ಕೂಡ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ, ನಿಮ್ಮ ಆಹಾರದಲ್ಲಿ ಈ 3 ವಿಧದ ಜ್ಯೂಸ್ ಅನ್ನು ನೀವು ಸೇರಿಸಬಹುದು, ಇದರಿಂದ ನೀವು ನೋವು ಸೇರಿದಂತೆ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು.


3. ಟೊಮೆಟೊ ರಸ
ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಟೊಮೆಟೊ ರಸವು ತುಂಬಾ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ ಎರಡು ಟೊಮೆಟೊಗಳನ್ನು ಚೆನ್ನಾಗಿ ತೊಳೆದು ಮತ್ತು ಅವುಗಳನ್ನು ಸ್ಮಾಶ್ ಮಾಡಿಕೊಳ್ಳಿ. ರಸದಲ್ಲಿ ಉಪ್ಪು ಮತ್ತು ಕರಿಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ, ಬೇಕಿದ್ದರೆ ತಯಾರಿಸಿದ ಮಿಶ್ರಣವನ್ನು ಫ್ರಿಡ್ಜ್ ನಲ್ಲಿಟ್ಟು ನಂತರ ಜ್ಯೂಸ್ ರೂಪದಲ್ಲಿ ಸೇವಿಸಬಹುದು.


2. ನಿಂಬೆ ರಸ
ನಿಂಬೆಯೊಳಗೆ ಸಿಟ್ರಿಕ್ ಆಮ್ಲವಿದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಮೂತ್ರಪಿಂಡದ ಸಮಸ್ಯೆ ಇದ್ದಾರೆ ನಿಂಬೆ ರಸವನ್ನು ಸೇವಿಸಿದರೆ, ನಿಮ್ಮ ಸಮಸ್ಯೆಯನ್ನು ಸಹ ಪರಿಹರಿಸಬಹುದು. ನೀವು ಒಂದು ಬಟ್ಟಲಿನಲ್ಲಿ ಮೊಸರನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ, ಈಗ ರುಚಿಗೆ ತಕ್ಕಂತೆ ಉಪ್ಪನ್ನು ಬೆರೆಸಿ ಮಿಶ್ರಣವನ್ನು ಚೆನ್ನಾಗಿ ಬೆರೆಸಿ ಸೇವಿಸಿ. ಹೀಗೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ನೀವು ಪರಿಹಾರವನ್ನು ಪಡೆಯಬಹುದು.


ಇದನ್ನೂ ಓದಿ-Weight Loss: ಈ ಎಲೆಗಳ ಚಹಾ ಸೇವಿಸಿ ನೀವು ತೂಕ ಇಳಿಸಿಕೊಳ್ಳಬಹುದು


3. ತುಳಸಿ ರಸ
ತುಳಸಿಯಿಂದ ತಯಾರಿಸಿದ ಜ್ಯೂಸ್ ಕಿಡ್ನಿ ಸ್ಟೋನ್ ಸಮಸ್ಯೆಯನ್ನು ಹೋಗಲಾಡಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಈ ಸಂದರ್ಭದಲ್ಲಿ, ತುಳಸಿ ಎಲೆಗಳ ರಸವನ್ನು ತೆಗೆಯಿರಿ ಮತ್ತು ಅದರಲ್ಲಿ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಮತ್ತು ತಯಾರಿಸಿದ ಈ ಮಿಶ್ರಣವನ್ನು ಬೆಳಗ್ಗೆ ಮತ್ತು ಸಂಜೆ ಸೇವಿಸಿ. ಹೀಗೆ ಮಾಡುವುದರಿಂದ ಕಿಡ್ನಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.


ಇದನ್ನೂ ಓದಿ-Cervical Treatment: ಸರ್ವಿಕಲ್ ನಿಂದ ತೊಂದರೆಗೊಳಗಾಗಿದ್ದೀರಾ? ಈ ರೀತಿ ನೋವು ನಿಯಂತ್ರಿಸಿ


(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ