)
Anti Cancer Drinks: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಕಳಪೆ ಜೀವನಶೈಲಿಯೇ ಮಾರಕ ಕ್ಯಾನ್ಸರ್ಗೆ ಪ್ರಮುಖ ಕಾರಣವೆಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖವಾಗಿ ಆಹಾರ ಪದ್ದತಿಯಲ್ಲಿ ಗಮನಾರ್ಹ ಬದಲಾವಣೆ ಮಾಡುವುದರಿಂದ ಕ್ಯಾನ್ಸರ್ ಅಪಾರ ಹತ್ತಿರವೂ ಸುಳಿಯುವುದಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ.
ತಜ್ಞರ ಪ್ರಕಾರ, ನಮ್ಮ ದೈನಂದಿನ ಆಹಾರಪದ್ದತಿಯಲ್ಲಿ ಆಂಟಿ-ಆಕ್ಸಿಡೆಂಟ್ಗಳು ಮತ್ತು ಉರಿಯೂತ ನಿವಾರಕಗಳನ್ನು ಸೇರಿಸುವುದರಿಂದ ಕ್ಯಾನ್ಸರ್ ಅಪಾಯದಿಂದ ದೂರ ಉಳಿಯಬಹುದು. ಇದಕ್ಕಾಗಿ, ಪ್ರತಿದಿನ ಮೂರು ಬಗೆಯ ಜ್ಯೂಸ್ಗಳನ್ನು ಆಹಾರದಲ್ಲಿ ಸೇರಿಸುವುದು ಲಾಭದಾಯಕ ಎಂದು ಹಾರ್ವರ್ಡ್ ವೈದ್ಯರೊಬ್ಬರು ತಿಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಹಾರ್ವರ್ಡ್ ತರಬೇತುದಾರ ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ಸೌರಭ್ ಸೇಥಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಿಣಾಮಕಾರಿಯಾಗಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಲ್ಲ ಕ್ಯಾನ್ಸರ್ ವಿರೋಧಿ ಪಾನೀಯಗಳ ಬಗ್ಗೆ ಮಾತನಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಡಾ. ಸೌರಭ್ ಸೇಥಿ ಅವರ ಪ್ರಕಾರ ಪ್ರತಿದಿನ ಈ ಮೂರು ಜ್ಯೂಸ್ಗಳನ್ನು ಕುಡಿಯುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ. ಅವುಗಳೆಂದರೆ...
ಗ್ರೀನ್ ಟೀ:
ಸಾಮಾನ್ಯವಾಗಿ ತೂಕ ಇಳಿಕೆಗಾಗಿ ಜನರು ಹೆಚ್ಚಾಗಿ ಗ್ರೀನ್ ಟೀ ಬಳಸುತ್ತಾರೆ. ಗ್ರೀನ್ ಟೀಯಲ್ಲಿ ಆಂಟಿಆಕ್ಸಿಡೆಂಟ್ಗಳು ಸಮೃದ್ಧವಾಗಿರುವುದರ ಜೊತೆಗೆ ಗ್ರೀನ್ ಟೀಯಲ್ಲಿ ಆಂಟಿಆಕ್ಸಿಡೆಂಟ್ಗಳು ಸಮೃದ್ಧವಾಗಿದ್ದು ಇದು ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿಯೂ, ನಮ್ಮನ್ನು ಕ್ಯಾನ್ಸರ್'ನಿಂದ ದೂರ ಉಳಿಸುವಲ್ಲಿಯೂ ಪರಿಣಾಮಕಾರಿ ಆಗಿದೆ.
ಗ್ರೀನ್ ಸ್ಮೂಥಿ:
ಪ್ರತಿದಿನ ಪಾಲಕ್, ಸೌತೆಕಾಯಿ ಸೇರಿದಂತೆ ಇತರ ತಾಜಾ ಹಸಿರು ಸೊಪ್ಪು- ತರಕಾರಿಗಳಿಂದ ಸ್ಮೂಥಿ ತಯಾರಿಸಿ ಕುಡಿಯುವುದರಿಂದ ಇವುಗಳಲ್ಲಿರುವ ಪೋಷಕಾಂಶಗಳು ಮತ್ತು ಉರಿಯೂತದ ಗುಣಲಕ್ಷಣಗಳು ಕ್ಯಾನ್ಸರ್ ಅಪಾಯದಿಂದ ರಕ್ಷಿಸುವಲ್ಲಿ ದಿವ್ಯೌಷಧದಂತೆ ಕಾರ್ಯನಿರ್ವಹಿಸುತ್ತದೆ.
ಅರಿಶಿನ:
ಅರಿಶಿನದಲ್ಲಿ ಕಂಡು ಬರುವ ಕರ್ಕ್ಯುಮಿನ್ ಎಂಬ ಸಕ್ರಿಯ ಸಂಯುಕ್ತ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ. ಇದಲ್ಲದೆ, ಅರಿಶಿನದಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ ಮತ್ತು ಆಂಟಿಮೈಕ್ರೊಬಿಯಲ್ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದ್ದು ಪ್ರತಿದಿನ ರಾತ್ರಿ ಮಲಗುವ ಮೊದಲು ಒಂದು ಲೋಟ ಹಾಲಿನಲ್ಲಿ ಸ್ವಲ್ಪ ಅರಿಶಿನದೊಂದಿಗೆ ಕರಿಮೆಣಸಿನ ಪುಡಿ ಬೆರೆಸಿ ಕುಡಿಯುವುದರಿಂದ ಮಾರಕ ಕ್ಯಾನ್ಸರ್ ಹತ್ತಿರವೂ ಸುಳಿಯಲ್ಲ ಎನ್ನಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.