Side effects of milk : ಈ ಆರೋಗ್ಯ ಸಮಸ್ಯೆಗಳಿದ್ದರೆ ಹಾಲನ್ನು ಮುಟ್ಟಿಯೂ ನೋಡಬಾರದು
ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಅನುಕೂಲಗಳಿದ್ದರೂ, ಇದರಿಂದ ಅನಾನುಕುಳತೆಗಳು ಕೂಡಾ ಇವೆ. ಕೆಲವೊಂದು ಆರೋಗ್ಯ ಸಮಸ್ಯೆಯ ಸಂದರ್ಭಗಳಲ್ಲಿ ಹಾಲು ಕುಡಿಯಲೇ ಬಾರದು.
ಬೆಂಗಳೂರು : ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದಲೇ , ವಯಸ್ಕರು, ಗರ್ಭಿಣಿಯರು ಮತ್ತು ವೃದ್ಧರಿಗೆ ಇದು ಉತ್ತಮ ಆಹಾರವೆಂದೇ ಹೇಳಲಾಗುತ್ತದೆ. ಅದೇ ಸಮಯದಲ್ಲಿ, ಹಾಲು ಮತ್ತು ಡೈರಿ ಉತ್ಪನ್ನಗಳು ಸಸ್ಯಾಹಾರಿಗಳಿಗೆ ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಇದರೊಂದಿಗೆ, ಆರೋಗ್ಯಕರ ಕೊಬ್ಬುಗಳು ಮತ್ತು ವಿಟಮಿನ್ ಗಳು ಹಾಲಿನಲ್ಲಿ ಕಂಡುಬರುತ್ತವೆ. ಆದ್ದರಿಂದ, ಹಾಲು ಕುಡಿಯುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಸಿಗುತ್ತವೆ. ಇದರಿಂದಾಗಿ ದೇಹದ ಕಾರ್ಯನಿರ್ವಹಣೆಯು ಉತ್ತಮ ರೀತಿಯಲ್ಲಿ ಆಗುತ್ತದೆ. ಹಾಲು ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ, ಕೂದಲಿನ ಆರೋಗ್ಯ ಸುಧಾರಿಸುತ್ತದೆ. ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಅನುಕೂಲಗಳಿದ್ದರೂ, ಇದರಿಂದ ಅನಾನುಕುಳತೆಗಳು ಕೂಡಾ ಇವೆ. ಕೆಲವೊಂದು ಆರೋಗ್ಯ ಸಮಸ್ಯೆಯ ಸಂದರ್ಭಗಳಲ್ಲಿ ಹಾಲು ಕುಡಿಯಲೇ ಬಾರದು.
1.ಯಕೃತ್ತಿನ ಸಮಸ್ಯೆಗಳು ಹೆಚ್ಚಾಗಬಹುದು :
ಹಾಲು ಜೀರ್ಣಿಸಿಕೊಳ್ಳಲು ಕಷ್ಟವಾಗುವುದರಿಂದ ಯಕೃತ್ತಿನ ಸಮಸ್ಯೆಗಳಿದ್ದವರು ಹಾಲಿನ ಸೇವನೆಯನ್ನು ತಪ್ಪಿಸಬೇಕು. ಹಾಲು ಕುಡಿಯುವುದರಿಂದ ಯಕೃತ್ತಿನ ಊತ ಹೆಚ್ಚಾಗುತ್ತದೆ. ಆದ್ದರಿಂದ, ಫ್ಯಾಟಿ ಲಿವರ್ ಕಾಯಿಲೆಯ ಲಕ್ಷಣಗಳು ಹೆಚ್ಚಾಗಬಹುದು. ಅದೇ ರೀತಿ ಫೈಬ್ರಾಯ್ಡ್ ಸಮಸ್ಯೆಗಳೂ ಹೆಚ್ಚಾಗಬಹುದು.
ಇದನ್ನೂ ಓದಿ : Weight Loss Mistakes: ಪ್ರತಿದಿನ 5000 ಹೆಜ್ಜೆ ನಡೆದರೂ ತೂಕ ಕಡಿಮೆಯಾಗುತ್ತಿಲ್ಲವೇ? ನೀವೂ ಈ ತಪ್ಪು ಮಾಡುತ್ತೀದ್ದೀರಾ!
2. ಜೀರ್ಣಕಾರಿ ಸಮಸ್ಯೆಗಳು :
ಹಾಲು ಕುಡಿಯುವುದರಿಂದ ಜೀರ್ಣಕ್ರಿಯೆಯ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ. ಹಾಲು ಕುಡಿಯುವುದರಿಂದ ವಾಯು ಮತ್ತು ಅಜೀರ್ಣದಂತಹ ಸಮಸ್ಯೆಗಳು ಉಂಟಾಗಬಹುದು. ಆಗಾಗ ಉದರದ ಸಮಸ್ಯೆ ಕಾಣಿಸಿಕೊಳ್ಳುವವರು ಹಾಲು ಕುಡಿಯದಂತೆ ವೈದ್ಯರು ಕೂಡಾ ಸಲಹೆ ನೀಡುತ್ತಾರೆ. ಇನ್ನು ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುವ ಅಭ್ಯಾಸವಿರುತ್ತದೆ. ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುವುದರಿಂದ ವಾಯು ಅಥವಾ ಆಸಿಡಿಟಿ ಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
3.ಮೊಡವೆಗಳು :
ಹಾಲಿನಲ್ಲಿರುವ ಲ್ಯಾಕ್ಟೋಸ್‌ನಿಂದಾಗಿ ಕೆಲವೊಮ್ಮೆ ಚರ್ಮದ ಸಮಸ್ಯೆಗಳು ಉಂಟಾಗಬಹುದು. ಹಾಲು ಕುಡಿಯುವುದರಿಂದ ಮೊಡವೆ ಸಮಸ್ಯೆಗಳು ಗಂಭೀರವಾಗಿರುತ್ತವೆ. ಕೆಲವೊಮ್ಮೆ ಈ ಸಮಸ್ಯೆಯು ತುಂಬಾ ಹೆಚ್ಚಾಗುತ್ತದೆ. ಹಾಗಾಯಿ ಮುಖದಲ್ಲಿ ಮೊಡವೆಗಳಿದ್ದರೆ ಹಾಲು ಕುಡಿಯುವ ಮುನ್ನ ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳುವುದು ಸೂಕ್ತ.
ಇದನ್ನೂ ಓದಿ : Roasted Garlic Benefits:ಅಡುಗೆಮನೆಯಲ್ಲಿ ಸಿಗೋ ಈ ವಸ್ತು ಪುರುಷರ ಆರೋಗ್ಯಕ್ಕೆ ಉತ್ತಮ!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.