ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸರಿಯಾದ ಪ್ರಮಾಣದಲ್ಲಿ ಕಬ್ಬಿಣದಂಶದ ಅಗತ್ಯವಿದೆ. ಆದರೆ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ ದೇಹವು ಸಾಕಷ್ಟು ಕೆಂಪು ರಕ್ತ ಕಣಗಳನ್ನ ಉತ್ಪಾದಿಸುವುದಿಲ್ಲ. ಇದು ರಕ್ತಹೀನತೆಗೆ ಕಾರಣವಾಗುತ್ತದೆ.

Signs of Anemia: ನಿಮ್ಮ ದೇಹದಲ್ಲಿ ರಕ್ತದ ಕೊರತೆ ಇದ್ದಾಗ ಯಾವ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮ ದೇಹದಲ್ಲಿ ಕೆಲವು ಲಕ್ಷಣಗಳು ಕಂಡುಬಂದರೆ, ತಡಮಾಡದೆ ನಿಮ್ಮ ಆರೋಗ್ಯವನ್ನ ತಪಾಸಣೆ ಮಾಡಿಸಿಕೊಳ್ಳಬೇಕು. ನೀವು ತುಂಬಾ ದಣಿದಿದ್ದರೆ ಮತ್ತು ದುರ್ಬಲರಾಗಿದ್ದರೆ, ನಿಮ್ಮ ದೇಹದಲ್ಲಿ ರಕ್ತದ ಕೊರತೆ ಇರುವ ಸಾಧ್ಯತೆಯಿದೆ. ರಕ್ತದ ಕೊರತೆಯು ನಿಮ್ಮ ದೇಹದ ಶಕ್ತಿಯ ಮಟ್ಟದ ಮೇಲೆ ಕೆಟ್ಟದಾಗಿ ಪರಿಣಾಮ ಬೀರುತ್ತದೆ.
ನೀವು ಉಸಿರಾಟದ ತೊಂದರೆಯ ಸಮಸ್ಯೆಯನ್ನ ಎದುರಿಸುತ್ತಿದ್ದೀರಾ? ಹೌದು ಎಂದಾದರೆ, ಈ ರೋಗಲಕ್ಷಣದ ಬಗ್ಗೆ ನಿರ್ಲಕ್ಷಿಸದೆ ತಕ್ಷಣವೇ ಎಚ್ಚರಿಕೆ ವಹಿಸಬೇಕು. ರಕ್ತದ ಕೊರತೆಯಿಂದ ಉಸಿರಾಟದ ವ್ಯವಸ್ಥೆಯ ಮೇಲೂ ಪರಿಣಾಮ ಬೀರಬಹುದು. ದೇಹದಲ್ಲಿ ರಕ್ತದ ಕೊರತೆಯಿದ್ದರೆ, ನಿಮಗೆ ತಲೆತಿರುಗುವಿಕೆ ಉಂಟಾಗಬಹುದು. ರಕ್ತದ ಕೊರತೆಯಿಂದ ಮೆದುಳಿಗೆ ಆಮ್ಲಜನಕವನ್ನ ತಲುಪಿಸುವಲ್ಲಿ ಸಮಸ್ಯೆ ಉಂಟಾಗುತ್ತದೆ ಮತ್ತು ತಲೆನೋವು ಮತ್ತು ತಲೆತಿರುಗುವಿಕೆ ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ರಕ್ತದ ಕೊರತೆಯಿಂದ ನಿಮ್ಮ ಚರ್ಮವು ಹಳದಿ ಬಣ್ಣಕ್ಕೆ ತಿರುಗಬಹುದು. ಇಂತಹ ಲಕ್ಷಣಗಳು ಏಕಕಾಲದಲ್ಲಿ ಕಾಣಿಸಿಕೊಂಡಾಗ ದೇಹದಲ್ಲಿ ರಕ್ತಹೀನತೆಯ ಸಾಧ್ಯತೆಗಳು ಹೆಚ್ಚಾಗುತ್ತವೆ. ಹೀಗಾಗಿ ಈ ಲಕ್ಷಣಗಳು ಕಂಡುಬಂದರೆ ಕೂಡಲೇ ನೀವು ಹತ್ತಿರ ವೈದ್ಯರ ಹತ್ತಿರ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.
(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)