ಚಳಿಗಾಲದಲ್ಲಿ ಹೃದಯಾಘಾತಕ್ಕೆ ಕಾರಣವಾಗುತ್ತವೆ ಈ ಆಹಾರಗಳು.!

ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಅನೇಕ ಮಂದಿ ಬಳಲುತ್ತಿದ್ದಾರೆ. ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ನಾವು ಸೇವಿಸುವ ಆಹಾರ ಮತ್ತು ಪಾನೀಯವೇ ಕಾರಣ.   

Written by - Ranjitha R K | Last Updated : Dec 21, 2022, 10:07 AM IST
  • ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಅತಿಯಾದ ಕಾಳಜಿ ವಹಿಸಬೇಕಾಗುತ್ತದೆ.
  • ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು
  • ಚಳಿಗಾಲದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿಸುವ ಆಹಾರಗಳಿಂದ ದೂರ ಇರಲೇಬೇಕು.
 ಚಳಿಗಾಲದಲ್ಲಿ ಹೃದಯಾಘಾತಕ್ಕೆ ಕಾರಣವಾಗುತ್ತವೆ ಈ ಆಹಾರಗಳು.!  title=
Cholesterol In Winter

ಬೆಂಗಳೂರು : ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಅತಿಯಾದ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲವಾದರೆ ಕಾಯಿಲೆಗಳು ಮುತ್ತಿಕೊಳ್ಳುತ್ತವೆ. ಅದರಲ್ಲೂ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಅನೇಕ ಮಂದಿ ಬಳಲುತ್ತಿದ್ದಾರೆ. ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ನಾವು ಸೇವಿಸುವ ಆಹಾರ ಮತ್ತು ಪಾನೀಯವೇ ಕಾರಣ.  ಇದೇ ಕಾರಣಕ್ಕೆ ಚಳಿಗಾಲದಲ್ಲಿ ನಾವು ಸೇವಿಸುವ  ಆಹಾರದಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಅದರಲ್ಲೂ ಕೊಲೆಸ್ಟ್ರಾಲ್ ಹೆಚ್ಚಿಸುವ ಆಹಾರಗಳಿಂದ ದೂರ ಇರಲೇಬೇಕು. 

ಹುರಿದ-ಕರಿದ ಆಹಾರ :
ಚಳಿಗಾಲದಲ್ಲಿ, ಮಸಾಲೆಯುಕ್ತ ಆಹಾರವನ್ನು ತಿನ್ನಬೇಕು ಎಂದು ಅನ್ನಿಸುತ್ತಿರುತ್ತದೆ. ಈ ಕಾರಣದಿಂದಾಗಿ ಚಳಿ ಹೆಚ್ಚಾಗುತ್ತಿದ್ದಂತೆಯೇ ಕರಿದ ಆಹಾರಗಳ ಬೇಡಿಕೆ ಕೂಡಾ ಹೆಚ್ಚುತ್ತದೆ.  ಹೀಗೆ ಹೆಚ್ಚು ಹೆಚ್ಚು ಕರಿದ ಆಹಾರ ಪದಾರ್ಥಗಳನ್ನು, ಎನ್ನೆಯುಕ್ತ ಆಹಾರಗಳನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. 

ಇದನ್ನೂ ಓದಿ : ಈ ಮಸಾಲೆಗಳನ್ನು ಆಹಾರದಲ್ಲಿ ಬಳಸಿ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಬಹುದು

ಸಿಹಿ ವಸ್ತುಗಳು :
ಚಳಿಗಾಲದಲ್ಲಿ ಸಿಹಿ ಪದಾರ್ಥಗಳನ್ನು ಕೂಡಾ ಹೆಚ್ಚಾಗಿ ಸೇವಿಸಲಾಗುತ್ತದೆ.   ಅದರಲ್ಲೂ ಕಾಫಿ, ಟೀಗೆ ಸ್ವಲ್ಪ ಹೆಚ್ಚೇ ಬೇಡಿಕೆ.  ಇವುಗಳಲ್ಲಿ ಸಕ್ಕರೆಯನ್ನು ಬಳಸಲಾಗುತ್ತದೆ. ಹಾಗಾಗಿ ಈ ಆಹಾರ ಪಾನೀಯಗಳಲ್ಲಿ ಸ್ಯಾಚುರೇಟೆಡ್ ಕೊಬ್ಬು ಹೆಚ್ಚು ಕಂಡುಬರುತ್ತದೆ. ಇದು ಹೃದಯಕ್ಕೆ ಹಾನಿ  ಉಂಟು  ಮಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಸಿಹಿ ತಿಂಡಿಗಳನ್ನು ದೂರವಿಟ್ಟರೆ ಒಳ್ಳೆಯದು.  

ಕೆಂಪು ಮಾಂಸ : 
ಮಾಂಸಾಹಾರಿಗಳು ಚಳಿಗಾಲದಲ್ಲಿ ಹೆಚ್ಚು ಹೆಚ್ಚು ಮಾಂಸವನ್ನು ಸೇವಿಸುತ್ತಾರೆ. ಇದು ಕೊಲೆಸ್ಟ್ರಾಲ್‌ಗೆ ಒಳ್ಳೆಯದಲ್ಲ. ಮಾಂಸದಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕವಾಗಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಮಾಂಸದ ಬದಲು ಕೋಳಿ ಅಥವಾ ಮೀನು ತಿನ್ನುವುದು  ಒಳ್ಳೆಯದು. 

ಇದನ್ನೂ ಓದಿ : Weight Loss Drink: ರಾತ್ರಿ ಮಲಗುವ ಮುನ್ನ ಈ ಪೇಯ ಸೇವಿಸಿ, ಕೆಲವೇ ದಿನಗಳಲ್ಲಿ ಚಮತ್ಕಾರ ನೋಡಿ

ಇನ್ಸ್ಟಂಟ್  ಫುಡ್ :
ಇನ್ಸ್ಟಂಟ್  ಫುಡ್ ಬಾಯಿ ರುಚಿಯನ್ನು ಹೆಚ್ಚಿಸುತ್ತದೆ ನಿಜ. ಆದರೆ ಈ ಆಹಾರವು ಆರೋಗ್ಯಕ್ಕೆ ಒಳ್ಳೆಯದಲ್ಲ. ಸಾಮಾನ್ಯವಾಗಿ ಇವುಗಳಲ್ಲಿ  ಮೈದಾವನ್ನು ಬಳಸಲಾಗುತ್ತದೆ. ಇದು ಹೃದಯ ಮತ್ತು ರಕ್ತ ಪರಿಚಲನೆಗೆ ಹಾನಿ ಉಂಟು ಮಾಡುತ್ತದೆ. 

ಚೀಸ್ ಮತ್ತು ಪನೀರ್ :
ಚೀಸ್‌ ಮತ್ತು ಪನೀರ್ ನಲ್ಲಿ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತವೆ.  ಆದರೆ ಅದರಲ್ಲಿ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೂ ಹೆಚ್ಚಾಗಿರುತ್ತದೆ. ಚಳಿಗಾಲದಲ್ಲಿ ಹೆಚ್ಚು ಚೀಸ್ ಮತ್ತು ಪನೀರ್ ತಿನ್ನುವುದು ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. 

 

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News