ಬೆಂಗಳೂರು : ಹುಟ್ಟಿನಿಂದಲೇ ಹೃದ್ರೋಗ ಸಮಸ್ಯೆ ಹೊಂದಿದ್ದ ಅಸ್ಸಾಂ ರಾಜ್ಯದ ಯುವತಿಯೊಬ್ಬರಿಗೆ  ಅನಸ್ತೇಷಿಯಾ ನೀಡದೇ ಕೇವಲ ಐ ವಿ ಸೆಡೇಷನ್ ಮೂಲಕ ಕ್ಲಿಷ್ಟಕರ ಕಿಡ್ನಿ ಕಲ್ಲು ನಿವಾರಣೆ ಶಸ್ತ್ರಚಿಕಿತ್ಸೆಯನ್ನ ಜಯನಗರದ ಖಾಸಗೀ ಆಸ್ಪತ್ರೆಯ ವೈದ್ಯರು ನೆರವೇರಿಸುವ ಮೂಲಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಹುಟ್ಟಿನಿಂದಲೇ ಹೃದ್ರೋಗ ಸಮಸ್ಯೆ ಹೊಂದಿದ್ದ ಯುವತಿಯೊಬ್ಬಳು ಅತಿಯಾದ ಹೊಟ್ಟೆನೋವಿನೊಂದಿಗೆ ಜಯನಗರದಲ್ಲಿರುವ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆನೋವಿಗೆ ಮೂತ್ರಪಿಂಡದಲ್ಲಿ ಬೆಳೆದಿರುವ ಕಲ್ಲು ಕಾರಣ ಎಂದು ತಿಳಿಯಿತು. ಆದರೆ ಅವರು ಹೃದ್ರೋಗಿ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅರಿವಳಿಕೆ ಚುಚ್ಚುಮದ್ದನ್ನು ಅವರಿಗೆ ನೀಡುವಂತಿರಲಿಲ್ಲ. 


ಇದನ್ನೂ ಓದಿ : ಈ ಸಿಹಿ ಪದಾರ್ಥವನ್ನು ಸೇವಿಸುವುದರಿಂದ ಚಮತ್ಕಾರಿ ವೇಗದಲ್ಲಿ ಕಡಿಮೆಯಾಗುವುದು ತೂಕ.!


ಹೀಗಾಗಿ ಆಸ್ಪತ್ರೆಯ ಪ್ರಧಾನ ಮೂತ್ರಶಾಸ್ತ್ರಜ್ಞ ಹಾಗೂ ಆಸ್ಪತ್ರೆಯ ಕ್ಲಿನಿಕಲ್‌ ಎಕ್ಸಲೆನ್ಸ್‌ನ ನಿರ್ದೇಶಕರಾಗಿರುವ ಡಾ.ರಾಜೀವ್‌ ಬಾಶೆಟ್ಟಿ ನೇತೃತ್ವದಲ್ಲಿ ವಿಶೇಷವಾದ ESWL ಪ್ರಕ್ರಿಯೆಯನ್ನು ಬಳಸಿ ಮೂತ್ರದ ಕಲ್ಲನ್ನು ತೆಗೆಯುವುದು ಎಂದು ನಿರ್ಧರಿಸಲಾಯಿತು. ಆದರೆ ಇಲ್ಲಿ ಎದುರಾದ ಸವಾಲೆಂದರೆ ಆಕೆಯ ಮೂತ್ರಕೋಶದಲ್ಲಿದ್ದ ಕಲ್ಲು ದೊಡ್ಡ ಗಾತ್ರದ್ದಾಗಿತ್ತು. ಹೀಗಾಗಿ ಮೂತ್ರನಾಳದಲ್ಲಿ ಸ್ಟಂಟ್‌ ಹಾಕಲೇ ಬೇಕಾದ ಪರಿಸ್ಥಿತಿ ಇತ್ತು. ಹೃದಯ ಸಂಬಂಧಿ ಸಮಸ್ಯೆ ಈಗಾಗಲೇ ಇರುವುದರಿಂದ ಈ ಎಲ್ಲಾ  ಪ್ರಕ್ರಿಯೆಗೆ ಅವಶ್ಯವಾದ ಯಾವುದೇ ರೀತಿಯ ಅರಿವಳಿಕೆಯನ್ನು ನೀಡುವಂತಿಲ್ಲ ಎಂದು ಹೃದ್ರೋಗ ತಜ್ಞರು ಮುನ್ನೆಚ್ಚರಿಕೆ ನೀಡಿದ್ದರು. 


ಅಲ್ಲದೆ, ಹೈ ರಿಸ್ಕ್‌ ಕೇಸ್‌ ಆಗಿದ್ದರಿಂದ ಈ ರೋಗಿಯ ಮೂತ್ರಪಿಂಡದ ಕಲ್ಲನ್ನು ತಗೆಯಲು ಬೇರೆ ಆಸ್ಪತ್ರೆಗಳಲ್ಲಿ ನಿರಾಕರಿಸಲಾಗಿತ್ತು.  ಇದನ್ನು ಸವಾಲಾಗಿ ಸ್ವೀಕರಿಸಿದ ಯುನೈಟೆಡ್‌ ಆಸ್ಪತ್ರೆಯ ವೈದ್ಯರು, ಅತಿಯಾದ ಹೊಟ್ಟೆ ನೋವು, ಸೋಂಕು ಹಾಗೂ ದೊಡ್ಡ ಕಲ್ಲಿನಿಂದ ಉಂಟಾಗುವ ಮೂತ್ರನಾಳದ ಹಾನಿಯನ್ನು ಪತ್ತೆಹಚ್ಚಿದರು. ಆಸ್ಪತ್ರೆಯ ಪ್ರಧಾನ ಅರಿವಳಿಕೆ ತಜ್ಞರಾದ ಡಾ. ಸಾಗರ್ ಶ್ರೀನಿವಾಸ್‌ ಈ ಸಮಸ್ಯೆಯ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿದರು. ಅತಿಯಾದ ಹಾಗೂ ಅಪಾಯಕಾರಿಯಾದ ಈ ಪ್ರಕರಣವನ್ನು ನಿರ್ವಹಿಸಲು ಒಪ್ಪಿಕೊಂಡ ವೈದ್ಯರು ಕೇವಲ ಐ ವಿ ಸೆಡೇಷನ್, ನಿದ್ರೆಗೆ ಜಾರುವ  ಔಷಧಿಯನ್ನು ನೀಡಿ ನಿರಂತರವಾಗಿ ಹೃದಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಾ ಚಿಕಿತ್ಸೆಗೆ ಅನುವು ಮಾಡಿಕೊಟ್ಟರು. 


ಇದನ್ನೂ ಓದಿ : Fenugreek Side Effects: ಈ 4 ಕಾಯಿಲೆ ಇರುವವರಿಗೆ ಮೆಂತೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ


ನಂತರ ಡಾ.ರಾಜೀವ್‌ ಬಾ ಶೆಟ್ಟಿ ಅವರು ಡಿಜೆ ಸ್ಟೆಂಟಿಂಗ್‌ ಹಾಗೂ ESWL ಪ್ರಕ್ರಿಯೆಯ ಮೂಲಕ ರೋಗಿಯ ಮೂತ್ರಕೋಶದಲ್ಲಿದ್ದ ಕಲ್ಲನ್ನು ಯಶಸ್ವಿಯಾಗಿ ಹೊರತೆಗೆದರು. ಹಾಗೂ ಚಿಕಿತ್ಸೆಯುದ್ದಕ್ಕೂ ರೋಗಿಯ ಹೃದಯ ಸ್ಥಿತಿ ಸ್ಥಿರವಾಗಿರುವಂತೆ ನೋಡಿಕೊಳ್ಳಲಾಯಿತು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.