ಕಿವಿ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಅದ್ಭುತ ಪ್ರಯೋಜನ

Kiwi Fruit: ವಿವಿಧ ಪೋಷಕಾಂಶಗಳಿಂದ ಸಮೃದ್ಧವಾದ ಕಿವಿ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಈ ಹಣ್ಣು ನೋಡಲು ಸಾಮಾನ್ಯ ಅನಿಸಿದರೂ ಅದರ ಪ್ರಯೋಜನಗಳ ಪಟ್ಟಿ ಮಾತ್ರ ಅಪಾರ.  

Written by - Yashaswini V | Last Updated : Apr 12, 2025, 05:09 PM IST
  • ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿವಿ ಹಣ್ಣಿನಲ್ಲಿ ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಸಿ, ಫೋಲಿಕ್ ಆಮ್ಲ, ವಿಟಮಿನ್ ಇ ಮತ್ತು ಪಾಲಿಫಿನಾಲ್‌ಗಳು ಸಮೃದ್ಧವಾಗಿವೆ.
  • ಕಿವಿ ಹಣ್ಣಿನಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ.
  • ಹಾಗಾಗಿ ಈ ಹಣ್ಣು ತೂಕ ಇಳಿಸಲು ಅಮೃತವಿದ್ದಂತೆ ಎನ್ನಲಾಗುತ್ತದೆ.
ಕಿವಿ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಅದ್ಭುತ ಪ್ರಯೋಜನ

Kiwi Fruit Benefits: 'ಕಿವಿ' ಹಣ್ಣು ಮೂಲತಃ ವಿದೇಶಿ ಹಣ್ಣು. ನೋಡಲು ತುಂಬಾ ಸರಳವಾಗಿ ಕಾಣುವ ಈ ಹಣ್ಣು ಖನಿಜಾಂಶ ಮತ್ತು ಜೀವಸತ್ವಗಳ ಗಣಿ. ಅತ್ಯಾಧಿಕ ಪೋಷಕಾಂಶವಿರುವ ಹಣ್ಣು ಕತ್ತರಿಸಿದರೆ ನೋಡಲು ಕೂಡ ಬಲು ಆಕರ್ಷಕವಾಗಿರುತ್ತದೆ. ಕಡಿಮೆ ಕ್ಯಾಲೋರಿಗಳನ್ನು ಹೆಚ್ಚಿನ ಫೈಬರ್ ಅನ್ನು ಹೊಂದಿರುವ ಈ ಹಣ್ಣು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿದ ಪೋಷಕಾಂಶ-ದಟ್ಟವಾದ ಹಣ್ಣಾಗಿದೆ. 

Add Zee News as a Preferred Source

ಕಿವಿ ಹಣ್ಣಿನಲ್ಲಿ ಹತ್ತಾರು ವಿಟಮಿನ್‌ಗಳಿದ್ದು ಇದರ ಸೇವನೆಯಿಂದ ಆರೋಗ್ಯಕ್ಕೂ ಹಲವು ಪ್ರಯೋಜನಗಳಿವೆ. 

ಪ್ರತಿರಕ್ಷಣಾ ವ್ಯವಸ್ಥೆ: 
ಬೇರೆಲ್ಲಾ ಹಣ್ಣುಗಳಿಗೆ ಹೋಲಿಸಿದರೆ ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಳಪಡಿಸುತ್ತದೆ. ಈ ಹಣ್ಣಿನ ಸೇವನೆಯಿಂದ ಜೀವಕೋಶಗಳಿಗೆ ಹಾನಿ ಮಾಡುವ ಮತ್ತು ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‌ಗಳ ಕಾರ್ಯಕ್ಕೆ ಕಡಿವಾಣ ಹಾಕಲು ಸಹಕಾರಿ ಆಗಿದೆ. 

ಉತ್ತಮ ಜೀರ್ಣಾಂಗ ವ್ಯವಸ್ಥೆ: 
ಕಿವಿಯಲ್ಲಿ ಕಂಡುಬರುವ ಫೈಬರ್, ಕಿಣ್ವಗಳು ಹೀರಿಕೊಳ್ಳುವಿಕೆಯಲ್ಲಿ ಸಹಾಯ ಮಾಡುವ ಮೂಲಕ ಜೀರ್ಣಕ್ರಿಯೆಯನ್ನು ಬೆಂಬಲಿಸುತ್ತದೆ. 

ಇದನ್ನೂ ಓದಿ- ಹಾಲಿನೊಂದಿಗೆ ಮಖಾನಾ ಬೆರೆಸಿ ತಿಂದ್ರೆ ಸುಲಭವಾಗಿ ಕರಗುತ್ತೆ ಹೊಟ್ಟೆ ಬೊಜ್ಜು, ಜಿಮ್, ವ್ಯಾಯಾಮ ಇಲ್ಲದೆಯೂ ಇಳಿಯುತ್ತೆ ತೂಕ

ಮಲಬದ್ದತೆ: 
ಕಿವಿ ಹಣ್ಣಿನಲ್ಲಿ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದಲೂ ಪರಿಹಾರ ನೀಡುತ್ತದೆ. 

ಮಧುಮೇಹಿಗಳಿಗೆ ಸಹಕಾರಿ: 
ಕಿವಿ ಹಣ್ಣಿನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿ ಆಗಿರುವುದರಿಂದ ಮಧುಮೇಹಿಗಳಿಗೆ ಲಾಭದಾಯಕವಾಗಿದೆ. 

ಹೃದಯದ ಆರೋಗ್ಯ: 
ಕಿವಿ ಹಣ್ಣಿನಲ್ಲಿರುವ ಅಧಿಕ ಪ್ರಮಾಣದ ಫೈಬರ್, ಪೊಟ್ಯಾಸಿಯಮ್, ಪಾಲಿಫಿನಾಲ್‌ಗಳಂತಹ ಉತ್ಕರ್ಷಣ ನಿರೋಧಕಗಳು ದೇಹದಲ್ಲಿ ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲದೆ, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಆಗಿದೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುವಲ್ಲಿಯೂ ಪರಿಣಾಮಕಾರಿ ಆಗಿದೆ. 

ಕಣ್ಣಿನ ದೃಷ್ಟಿ ಸುಧಾರಣೆ: 
ಕಿವಿ ಹಣ್ಣಿನಲ್ಲಿ ಸಮೃದ್ಧ ವಿಟಮಿನ್ ಕಾರಕಗಳಾದ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಗಳಿವೆ. ಇವು ಹಾನಿಕಾರಕ ಯುವಿ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಲು ಹಾಗೂ ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಮತ್ತು ಕಣ್ಣಿನ ಪೊರೆಯಂತಹ ಅಪಾಯವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿ ಕಾರ್ಯನಿರ್ವಹಿಸುತ್ತವೆ. 

ಇದನ್ನೂ ಓದಿ- ತಲೆನೋವಿಗೆ ತಕ್ಷಣ ಪರಿಹಾರ ನೀಡಬಲ್ಲ ಸೂಪರ್‌ಫುಡ್‌ಗಳಿವು... ಇವನ್ನು ತಿಂದ್ರೆ ಕೆಲವೇ ನಿಮಿಷಗಳಲ್ಲಿ ನೋವು ಮಂಗಮಾಯ...! 

ಚರ್ಮದ ಆರೋಗ್ಯಕ್ಕೂ ಇದು ಮದ್ದು:  
ಕಿವಿಯಲ್ಲಿರುವ ವಿಟಮಿನ್ ಸಿ, ವಿಟಮಿನ್ ಇ ಮತ್ತು ಇತರ ಉತ್ಕರ್ಷಣ ನಿರೋಧಕಗಳ ಸಂಯೋಜನೆಯು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಚರ್ಮದ ಸುಕ್ಕುಗಳು, ಬೇಸಿಗೆಯಲ್ಲಿ ಚರ್ಮಕ್ಕಾಗುವ ಹಾನಿಯಿಂದ ರಕ್ಷಣೆ ನೀಡಲಿದೆ. 

ತೂಕ ನಿಯಂತ್ರಣ: 
ಮೊದಲೇ ತಿಳಿಸಿದಂತೆ ಕಡಿಮೆ ಕ್ಯಾಲೋರಿ, ಹೆಚ್ಚಿನ ಫೈಬರ್ ನಿಂದ ಕೂಡಿರುವ ಕಿವಿ ಹಣ್ಣು ಅತಿಯಾದ ಕ್ಯಾಲೋರಿ ಸೇವನೆಯನ್ನು ತಪ್ಪಿಸಲು, ಹಸಿವನ್ನು ನಿಯಂತ್ರಿಸಲು ಸಹಕಾರಿ ಆಗಿದೆ. ಈ ಮೂಲಕ ತೂಕ ಇಳಿಕೆಗೆ ಉತ್ತಮ ಕೊಡುಗೆಯನ್ನು ನೀಡುತ್ತದೆ.  ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿವಿ ಹಣ್ಣಿನಲ್ಲಿ ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಸಿ, ಫೋಲಿಕ್ ಆಮ್ಲ, ವಿಟಮಿನ್ ಇ ಮತ್ತು ಪಾಲಿಫಿನಾಲ್‌ಗಳು ಸಮೃದ್ಧವಾಗಿವೆ. ಕಿವಿ ಹಣ್ಣಿನಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ. ಹಾಗಾಗಿ ಈ ಹಣ್ಣು ತೂಕ ಇಳಿಸಲು ಅಮೃತವಿದ್ದಂತೆ ಎನ್ನಲಾಗುತ್ತದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News