ಹೊಟ್ಟೆಯ ಭಾಗದಲ್ಲೇ ಸೇರಿಕೊಂಡಿರುವ ಕೊಬ್ಬನ್ನು ಕರಗಿಸಲು ಬಳಸಿ ಈ ಪಾನೀಯ

ಜನರು ತಮ್ಮ ಬಿಡುವಿಲ್ಲದ ಜೀವನಶೈಲಿಯಿಂದಾಗಿ ವ್ಯಾಯಾಮಕ್ಕೆ ಸಾಕಷ್ಟು ಸಮಯವನ್ನು ವಿನಿಯೋಗಿಸಲು ಸಾಧ್ಯವಾಗುವುದಿಲ್ಲ.  ಕೆಲವು ಸರಳ ಮನೆಮದ್ದುಗಳನ್ನು ಅನುಸರಿಸುವ ಮೂಲಕ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.   

Written by - Ranjitha R K | Last Updated : Jun 2, 2023, 03:20 PM IST
  • ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ದೇಹವನ್ನು ಆಕಾರದಲ್ಲಿಟ್ಟುಕೊಳ್ಳಲು ಬಯಸುತ್ತಾರೆ.
  • ದೇಹಕ್ಕೆ ಸರಿಯಾದ ಆಕಾರ ಸಿಗಬೇಕಾದರೆ ದೇಹ ತೂಕವನ್ನು ಕಾಪಾಡಿಕೊಳ್ಳಬೇಕು.
  • ಸರಳ ಮನೆಮದ್ದುಗಳನ್ನು ಅನುಸರಿಸುವ ಮೂಲಕ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.
ಹೊಟ್ಟೆಯ ಭಾಗದಲ್ಲೇ ಸೇರಿಕೊಂಡಿರುವ ಕೊಬ್ಬನ್ನು ಕರಗಿಸಲು ಬಳಸಿ ಈ ಪಾನೀಯ  title=

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ದೇಹವನ್ನು ಆಕಾರದಲ್ಲಿಟ್ಟುಕೊಳ್ಳಲು ಬಯಸುತ್ತಾರೆ. ದೇಹಕ್ಕೆ  ಸರಿಯಾದ ಆಕಾರ ಸಿಗಬೇಕಾದರೆ ದೇಹ ತೂಕವನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ  ಹಲವಾರು ಮಾರ್ಗಗಳನ್ನು ಅನುಸರಿಸಬೇಕಾಗುತ್ತದೆ. ಇದಕ್ಕಾಗಿ ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರಿಳಿಸುತ್ತಾರೆ.  ತೂಕ ಇಳಿಸಿಕೊಳ್ಳಲು ಡಯಟ್ ಮಾಡುತ್ತಾರೆ. ಆದರೂ ಅನೇಕ ಸಂದರ್ಭಗಳಲ್ಲಿ, ನಿರೀಕ್ಷಿತ ಫಲಿತಾಂಶ ಸಿಗುವುದಿಲ್ಲ. ಆದರೆ, ಕೆಲವು ಸರಳ ಮನೆಮದ್ದುಗಳನ್ನು ಅನುಸರಿಸುವ ಮೂಲಕ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. 

ನೈಸರ್ಗಿಕವಾಗಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಪಾನೀಯ ಕುಡಿಯಿರಿ: 

ಇಂದಿನ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ, ಬೊಜ್ಜು ಸಾಮಾನ್ಯ ಸಮಸ್ಯೆಯಾಗಿದೆ. ಸ್ಥೂಲಕಾಯತೆಯಿಂದಾಗಿ  ರಕ್ತದೊತ್ತಡ ಮತ್ತು ಮಧುಮೇಹದಂತಹ ಅನೇಕ ಕಾಯಿಲೆಗಳು ನಿಮ್ಮನ್ನು  ಬಾಧಿಸುತ್ತದೆ. ಆಗ ಬೊಜ್ಜು ಕಡಿಮೆ ಮಾಡಿಕೊಳ್ಳಲು ಜಿಮ್, ಯೋಗ, ಡಯಟ್ ಮತ್ತು ವ್ಯಾಯಾಮದ ಮೊರೆ ಹೋಗುವುದು ಅನಿವಾರ್ಯವಾಗುತ್ತದೆ. ಆದರೆ ಹೆಚ್ಚಿನ ಜನರು ತಮ್ಮ ಬಿಡುವಿಲ್ಲದ ಜೀವನಶೈಲಿಯಿಂದಾಗಿ ವ್ಯಾಯಾಮಕ್ಕೆ ಸಾಕಷ್ಟು ಸಮಯವನ್ನು ವಿನಿಯೋಗಿಸಲು ಸಾಧ್ಯವಾಗುವುದಿಲ್ಲ. 

ಇದನ್ನೂ  ಓದಿ : ಈ ಕಾರಣಗಳಿಗಾಗಿ ಸೌತೆಕಾಯಿಯನ್ನು ರಾತ್ರಿ ಹೊತ್ತು ತಿನ್ನಲೇಬಾರದು

ಜನರು ನೈಸರ್ಗಿಕವಾಗಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವ ಮಾರ್ಗಗಳನ್ನು ಹುಡುಕುತ್ತಾರೆ. ಅಂತಹ ನೈಸರ್ಗಿಕ ಪಾನೀಯವನ್ನು ತಯಾರಿಸುವ ವಿಧಾನದ ಬಗ್ಗೆ  ಮಾಹಿತಿ ಈ ಲೇಖನದಲ್ಲಿದೆ.  

ಈ ಪಾನೀಯವನ್ನು ಸೇವಿಸುವುದರಿಂದ, ದೇಹದಲ್ಲಿ ಚಯಾಪಚಯವು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ಹೊಟ್ಟೆಯ ಕೊಬ್ಬು ಬೇಗನೆ ಕರಗುತ್ತದೆ. ಈ ಪಾನೀಯವನ್ನು ಬೇಸಿಗೆಯಲ್ಲಿಯೂ ಸೇವಿಸಬಹುದು ಎಂಬುದು ಗಮನಿಸಬೇಕಾದ ಸಂಗತಿ. ಇದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ. 

ತೂಕವನ್ನು ಕಳೆದುಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕಾಗಿ ಶ್ರಮಿಸಬೇಕಾಗುತ್ತದೆ. ಸರಿಯಾದ ಆಹಾರದ ಕ್ರಮವನ್ನು ಅನುಸರಿಸಬೇಕು. ಆಯುರ್ವೇದದಲ್ಲಿ ದೇಹಕ್ಕೆ ಹೆಚ್ಚು ಪ್ರಯೋಜನಕಾರಿಯಾದ ಹಲವಾರು ಮಸಾಲೆಗಳನ್ನು ಉಲ್ಲೇಖಿಸಲಾಗಿದೆ. ಅವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. 

ಇದನ್ನೂ  ಓದಿ : ಗರ್ಭಾವಸ್ಥೆಯಲ್ಲಿ ಪೇರಳೆ ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳಿವು..!

ನೈಸರ್ಗಿಕವಾಗಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವ ಪಾನೀಯವನ್ನು ತಯಾರಿಸಲು ಬೇಕಾಗುವ ಪದಾರ್ಥಗಳು:
- 1 ಚಮಚ  ಕೊತ್ತಂಬರಿ ಬೀಜಗಳು
- 1 ಚಮಚ ಸೋಂಪು
- 1 ಏಲಕ್ಕಿ
- 200 ಮಿಲಿ ನೀರು

ಈ ಪಾನೀಯವನ್ನು ಹೇಗೆ ತಯಾರಿಸುವುದು?  : 
- ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಪಾನೀಯವನ್ನು ತಯಾರಿಸಲು, ಮೊದಲು ಒಂದು ಪಾತ್ರೆ ತೆಗೆದುಕೊಳ್ಳಿ.
- ನಂತರ ಅದರಲ್ಲಿ ನೀರನ್ನು ಹಾಕಿ ಬಿಸಿ ಮಾಡಿ.
- ಇದರ ನಂತರ, ಮೇಲೆ ಕೊಟ್ಟಿರುವ ಎಲ್ಲಾ ಪದಾರ್ಥಗಳನ್ನು ಬಿಸಿ ನೀರಿನಲ್ಲಿ ಹಾಕಿ.
-ಈ  ನೀರು ಅರ್ಧದಷ್ಟಾಗುವವರೆಗೆ ಕುದಿಸಿ.
- ನಂತರ, ಗ್ಯಾಸ್ ಸ್ಟೌವ್ ಆಫ್ ಮಾಡಿ
- ಈ ಪಾನೀಯದ ರುಚಿ ಹೆಚ್ಚಿಸಬೇಕು ಎಂದಾದರೆ ಈ ಪಾನೀಯಕ್ಕೆ 1 ಟೀಚಮಚ ನಿಂಬೆ ರಸ ಮತ್ತು ಜೇನುತುಪ್ಪವನ್ನು ಸೇರಿಸಬಹುದು.
- ತೂಕವನ್ನು ಕಳೆದುಕೊಳ್ಳಲು ಪ್ರತಿದಿನ ಬೆಳಿಗ್ಗೆ ಈ ಪಾನೀಯವ ನ್ನು ಸೇವಿಸಿ. 
- ಇದನ್ನು ದಿನಕ್ಕೆ ಕನಿಷ್ಠ 2-3 ಬಾರಿ ಕುಡಿಯಿರಿ.

ಇದನ್ನೂ  ಓದಿ : Donkey Milk Benefits: ನಿಮಗೆ ಗೊತ್ತಾ ʼಕತ್ತೆ ಹಾಲಿನʼ ಪ್ರಯೋಜನಗಳು : ಇಲ್ಲಿವೆ ನೋಡಿ.. 

 

 (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News