ಬೆಂಗಳೂರು : Main Cause of high cholesterol: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ, ಅಪಾಯ ಕಟ್ಟಿಟ್ಟ ಬುತ್ತಿ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ, ಹೃದಯಾಘಾತದ ಸಾಧ್ಯತೆಗಳು ಕೂಡಾ ಹೆಚ್ಚಾಗುತ್ತವೆ. ಈ ಪರಿಸ್ಥಿತಿಯನ್ನು ತಲುಪುವ ಮೊದಲು, ಇದರ ಬಗ್ಗೆ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಸಮಸ್ಯೆ ಕೈ ಮೀರಿ ಹೋಗಬಹುದು. ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದು ಎಷ್ಟು ಮುಖ್ಯವೋ ಸಮಸ್ಯೆಗೆ ಕಾರಣ ತಿಳಿದುಕೊಳ್ಳುವುದು ಕೂಡಾ ಅಷ್ಟೇ ಮುಖ್ಯ. ಹಾಗಿದ್ದರೆ ದೇಹದಲ್ಲಿ ಕೊಲೆಸ್ಟ್ರಾಲ್ ಯಾವ ಕಾರಣಕ್ಕೆ ಹೆಚ್ಚಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಅಧಿಕ ಕೊಲೆಸ್ಟ್ರಾಲ್ ಗೆ ಪ್ರಮುಖ ಕಾರಣಗಳು :
ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಲು ಮುಖ್ಯ ಕಾರಣವೆಂದರೆ ಕಳಪೆ ಆಹಾರ. ಅಧಿಕ ಕೊಬ್ಬಿನ ಅಂಶವಿರುವ ಆಹಾರವನ್ನು ತೆಗೆದುಕೊಂಡಾಗ, ದೇಹದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಅಧಿಕ ಕೊಬ್ಬಿನ ಅಂಶ ಇರುವ ಆಹಾರದಲ್ಲಿ ಡೈರಿ ಉತ್ಪನ್ನಗಳು ಕೂಡಾ ಸೇರಿವೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದಲ್ಲಿ ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಲು ಪ್ರಯತ್ನಿಸಿ. ಸಾಧ್ಯವಾದರೆ, ಹೆಚ್ಚು ಹೆಚ್ಚು ಪ್ರೋಟೀನ್ ಭರಿತ ವಸ್ತುಗಳನ್ನು ತಿನ್ನಿ. ಇದರಿಂದ ಅನೇಕ ರೀತಿಯ ಪ್ರಯೋಜನ ಸಿಗುತ್ತದೆ.
ಇದನ್ನೂ ಓದಿ : ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿಟ್ಟು ತಿನ್ನುವ ಅಭ್ಯಾಸ ನಿಮಗೂ ಇದೆಯೇ? ಎದುರಾಗುತ್ತದೆ ಈ ಸಮಸ್ಯೆಗಳು
ನೀವು ಅಧಿಕ ಕೊಲೆಸ್ಟ್ರಾಲ್ ಹೊಂದಿದ್ದರೆ ಈ ವಸ್ತುಗಳಿಂದ ದೂರವಿರಿ :
ಮೊದಲನೆಯದಾಗಿ, ಹೊರಗಿನ ಆಹಾರದಿಂದ ದೂರ ಇರಬೇಕು. ಇದರೊಂದಿಗೆ ವ್ಯಾಯಾಮದ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ, ನಿರಂತರ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸಾಧ್ಯವಾದಷ್ಟು ಸಂತೋಷವಾಗಿರುವುದು ಕೂಡಾ ಬಹಳ ಮುಖ್ಯ. ಏಕೆಂದರೆ ಒತ್ತಡವನ್ನು ತೆಗೆದುಕೊಳ್ಳುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆ ಕೂಡಾ ಹೆಚ್ಚುತ್ತದೆ. ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮಾಂಸ, ಡೈರಿ ಉತ್ಪನ್ನಗಳಿಂದ ದೂರವಿರಬೇಕು. ಇಲ್ಲದಿದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.
ಇದನ್ನೂ ಓದಿ : Health Care Tips: ಲಾವಂಚ ಬೇರು ಬೆರೆಸಿರುವ ನೀರಿನ ಅದ್ಭುತ ಪ್ರಯೋಜನಗಳು ನಿಮಗೆ ತಿಳಿದಿವೆಯೇ?
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ