ಬ್ಲಡ್ ಶುಗರ್ ಜಾಸ್ತಿಯಾಗಲು ಬೆಳಿಗ್ಗೆ ಮಾಡುವ ಈ ತಪ್ಪುಗಳೇ ಕಾರಣ !

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸುವುದು ನೀವು ನಿಮ್ಮ ದಿನವನ್ನು ಹೇಗೆ ಪ್ರಾರಂಭಿಸುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.  

Written by - Ranjitha R K | Last Updated : Jul 11, 2025, 05:46 PM IST
  • ಮಧುಮೇಹ ರೋಗವು ಪ್ರಪಂಚದಾದ್ಯಂತ ಕಳವಳ ಉಂಟು ಮಾಡುತ್ತಿದೆ.
  • ಮಧುಮೇಹ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ವೇಗವಾಗಿ ಹೆಚ್ಚುತ್ತಿದೆ.
  • ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದೆ
ಬ್ಲಡ್ ಶುಗರ್ ಜಾಸ್ತಿಯಾಗಲು ಬೆಳಿಗ್ಗೆ ಮಾಡುವ ಈ ತಪ್ಪುಗಳೇ ಕಾರಣ !

ಮಧುಮೇಹ ರೋಗವು ಪ್ರಪಂಚದಾದ್ಯಂತ ಕಳವಳ ಉಂಟು ಮಾಡುತ್ತಿದೆ.  ಮಧುಮೇಹ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ವೇಗವಾಗಿ ಹೆಚ್ಚುತ್ತಿದೆ. ಅದರಲ್ಲಿಯೂ ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದೆ. ಜನರ ಜೀವನಶೈಲಿ ಮತ್ತು ಅಭ್ಯಾಸಗಳು ಮಧುಮೇಹದ ಅಪಾಯ ಹೆಚ್ಚಾಗುವುದಕ್ಕೆ ಕಾರಣವಾಗಿವೆ. ಜನರು ಬೆಳಿಗ್ಗೆ ಮಾಡುವ ಅನೇಕ ತಪ್ಪುಗಳೇ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗಿದೆ. 

Add Zee News as a Preferred Source

ಹೈ ಬ್ಲಡ್ ಶುಗರ್ ಗೆ ಕಾರಣವಾಗುವ ಅಂಶಗಳು : 
ಬೆಳಗಿನ ಉಪಹಾರ ಬಿಟ್ಟುಬಿಡುವುದು : 

ಬೆಳಿಗ್ಗೆ ಉಪಾಹಾರ ಸೇವಿಸದಿರುವುದು ಅಥವಾ ಉಪಾಹಾರ ಬಿಟ್ಟುಬಿಡುವ ಅಭ್ಯಾಸವು ಚಯಾಪಚಯ ಕ್ರಿಯೆಗೆ ಹಾನಿ ಮಾಡುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅನಿಯಂತ್ರಿತಗೊಳ್ಳುವುದು. 

ಇದನ್ನೂ ಓದಿ : ಮಧುಮೇಹ ರೋಗಿಗಳು ಹಸಿ ಈರುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ?

ಸಂಸ್ಕರಿಸಿದ ಆಹಾರ ಸೇವನೆ : 
ಉಪಹಾರದಲ್ಲಿ ಸಂಸ್ಕರಿಸಿದ ಸಕ್ಕರೆ, ಬಿಳಿ ಬ್ರೆಡ್ ಮತ್ತು ಪ್ಯಾಕ್ಡ್ ಜ್ಯೂಸ್   ಸೇವಿಸುವವರ ರಕ್ತದಲ್ಲಿನ ಸಕ್ಕರೆ ಮಟ್ಟವು ವೇಗವಾಗಿ ಹೆಚ್ಚಾಗುತ್ತದೆ.

ಖಾಲಿ ಹೊಟ್ಟೆಯಲ್ಲಿ ಚಹಾ-ಕಾಫಿ ಕುಡಿಯುವುದು : 
ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಅಭ್ಯಾಸದಿಂದಾಗಿ, ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗಬಹುದು. 

ಇದನ್ನೂ ಓದಿ : ಏನಿದು ನಗುವ ಕಾಯಿಲೆ? ಕನ್ನಡದ ಖ್ಯಾತ ನಟಿಗೂ ಇತ್ತು ಈ ರೋಗ..!  ಇದರ ಲಕ್ಷಣಗಳು ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿ...!

ಹೆಚ್ಚಿನ ಸಕ್ಕರೆ ಪಾನೀಯ ಸೇವನೆ : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸಕ್ಕರೆ ಬೆರೆಸಿದ ಪ್ಯಾಕ್ಡ್ ಜ್ಯೂಸ್, ಸೋಡಾ ಅಥವಾ ಚಹಾ ಮತ್ತು ಕಾಫಿಯನ್ನು ಕುಡಿಯುವ ಹವ್ಯಾಸ ಅನೇಕರಿಗೆ ಇರುತ್ತದೆ. ಇದು ತ್ವರಿತ ಶಕ್ತಿಯನ್ನು ನೀಡುತ್ತದೆ ನಿಜ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. 

ಸರಿಯಾದ ಸಮಯದಲ್ಲಿ ಉಪಾಹಾರ ಸೇವಿಸದಿರುವುದು : 
ಕೆಲವರು ಬೆಳಿಗ್ಗೆ ಎದ್ದ ನಂತರ ಬಹಳ ತಡವಾಗಿ ಉಪಾಹಾರ ಸೇವಿಸುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಅಸಮತೋಲನವನ್ನು ಉಂಟುಮಾಡಬಹುದು. ಆದ್ದರಿಂದ, ಉಪಾಹಾರಕ್ಕಾಗಿ ಸಮಯವನ್ನು ನಿರ್ಧರಿಸಿ ಮತ್ತು ಪ್ರತಿದಿನ ಅದೇ ಸಮಯದಲ್ಲಿ ಉಪಾಹಾರ ಸೇವಿಸಿ. 

 

(ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News