Milk And Honey Benefits: ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಗಳು ಹೇರಳವಾಗಿ ದೊರೆಯುತ್ತವೆ. ನೀವು ಹಾಲಿಗೆ ಜೇನುತುಪ್ಪವನ್ನು ಬೆರೆಸಿ ಕುಡಿದರೆ ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಏಕೆಂದರೆ ಜೇನು ಕೂಡಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುವಂಥಹ ಹಲವು ಗುಣಗಳನ್ನು ಹೊಂದಿದೆ. ಹಾಲು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸಿದರೆ ಅದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳು :
ತ್ವರಿತ ತೂಕ ಹೆಚ್ಚಳ :
ತೂಕವನ್ನು ಹೆಚ್ಚಿಸಿಕೊಳ್ಳಬೇಕು ಅಂದುಕೊಳ್ಳುವವರು ಹಾಲಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿಯಬಹುದು. ಹಾಲು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇರಿಸಿ ಕುಡಿಯುವುದು ತೂಕವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಏಕೆಂದರೆ ಹಾಲು ಮತ್ತು ಜೇನುತುಪ್ಪವು ತೂಕವನ್ನು ಹೆಚ್ಚಿಸಲು ಒಟ್ಟಿಗೆ ಕೆಲಸ ಮಾಡುತ್ತದೆ.
ಇದನ್ನೂ ಓದಿ : ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆಯೇ ಪಾದದಲ್ಲಿ ಕಾಣಿಸಿಕೊಳ್ಳುತ್ತದೆ ಈ ಲಕ್ಷಣಗಳು
ಜೀರ್ಣಕ್ರಿಯೆ :
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಲು ಹಾಲಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ. ಹಾಲಿಗೆ ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ. ಇದರಿಂದ ಮಲಬದ್ಧತೆಯಿಂದಲೂ ಪರಿಹಾರ ಸಿಗುತ್ತದೆ. ಆದ್ದರಿಂದ ಹೊಟ್ಟೆಯ ಸಮಸ್ಯೆಯಿಂದ ತೊಂದರೆಯಾಗಿದ್ದರೆ ಪ್ರತಿದಿನ ರಾತ್ರಿ ಜೇನುತುಪ್ಪ ಬೆರೆಸಿದ ಹಾಲನ್ನು ಕುಡಿಯಬಹುದು.
ಎನರ್ಜಿ ಸಿಗುತ್ತದೆ :
ಕೆಲವರಿಗೆ ಏನೇ ಕೆಲಸ ಮಾಡಿದರೂ ಆಯಾಸವಾಗುತ್ತದೆ. ಅಂಥವರು ಜೇನುತುಪ್ಪದೊಂದಿಗೆ ಹಾಲನ್ನು ಕುಡಿಯಬಹುದು. ಪ್ರತಿದಿನ ಹಾಲು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಕುಡಿಯುವುದರಿಂದ, ದೇಹವು ಸಾಕಷ್ಟು ಶಕ್ತಿಯನ್ನು ಪಡೆಯುತ್ತದೆ. ಅದಕ್ಕಾಗಿಯೇ ಪ್ರತಿದಿನ ರಾತ್ರಿ ಮಲಗುವ ಮುನ್ನ ಜೇನುತುಪ್ಪ ಬೆರೆಸಿದ ಹಾಲನ್ನು ಕುಡಿಯಬೇಕು. ಹೀಗೆ ಮಾಡುವುದರಿಂದ ಆಯಾಸ ಮತ್ತು ಆಲಸ್ಯ ದೂರವಾಗುತ್ತದೆ.
ಇದನ್ನೂ ಓದಿ : ಉಪ್ಪು ತಿಂದರೆ ನೀರು ಕುಡಿಯಲೇ ಬೇಕು..ಅತಿಯಾದರೇ ಈ ಸಮಸ್ಯೆಗಳನ್ನು ಎದುರಿಸಲೇಬೇಕು..!
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.