LDL cholesterol Control Tips: ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿರುವ  ಮೇಣದಂತಹ ಜಿಗುಟಾದ ವಸ್ತುವಾಗಿದೆ. ಇದು ದೇಹದ ಎಲ್ಲಾ ಜೀವಕೋಶಗಳಲ್ಲಿ ಕಂಡುಬರುತ್ತದೆ.ಹಾರ್ಮೋನುಗಳು,ವಿಟಮಿನ್ ಡಿ ಮತ್ತು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುವ ವಸ್ತುಗಳನ್ನು ತಯಾರಿಸಲು ನಮ್ಮ ದೇಹಕ್ಕೆ ಇದು ಅಗತ್ಯವಾಗಿರುತ್ತದೆ.ನಮ್ಮ ದೇಹಕ್ಕೆ ಸ್ವಲ್ಪ ಪ್ರಮಾಣದ ಕೊಲೆಸ್ಟ್ರಾಲ್ ಅವಶ್ಯಕವಾಗಿದೆ.ಆದರೆ ಹೆಚ್ಚಿನ ಕೊಲೆಸ್ಟ್ರಾಲ್ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ.ಹೆಚ್ಚು ಕೊಲೆಸ್ಟ್ರಾಲ್ ಹೊಂದಿರುವ ಕಾರಣ, ಇದು ಪ್ಲೇಕ್‌ಗಳ ರೂಪದಲ್ಲಿ ದೇಹದಲ್ಲಿ ಸಂಗ್ರಹವಾಗಲು ಪ್ರಾರಂಭವಾಗುತ್ತದೆ. ಇದು ಅಪಧಮನಿಗಳ ಗೋಡೆಗಳಿಗೆ ಅಂಟಿಕೊಂಡು ರಕ್ತ ಪರಿಚಲನೆ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ.


COMMERCIAL BREAK
SCROLL TO CONTINUE READING

ಈ ಬೀಜಗಳನ್ನು ಚಪಾತಿ ಹಿಟ್ಟಿನೊಂದಿಗೆ ಬೆರೆಸಿ ಚಪಾತಿ ಮಾಡಿ ಸೇವಿಸುವ ಮೂಲಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣಕ್ಕೆ ತರಬಹುದು. 


ಇದನ್ನೂ ಓದಿ : ನಿಂಬೆ ಹಣ್ಣಿಗೆ ಈ ಬೀಜ ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಕರಗಿ ಕೀಲು ನೋವು ಕಡಿಮೆಯಾಗುವುದು!ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದು


ಎಳ್ಳು : 
ಎಳ್ಳನ್ನು ಹಿಟ್ಟಿನೊಂದಿಗೆ ಬೆರೆಸಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.ಎಳ್ಳು ಆಕ್ಸಿಡೇಟಿವ್ ಒತ್ತಡ,ಉರಿಯೂತ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ.ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತುಂಬಾ ಪ್ರಯೋಜನವಾಗುತ್ತದೆ.  


ಕುಂಬಳಕಾಯಿ ಬೀಜಗಳು :
ಚಪಾತಿ ಹಿಟ್ಟು ಕಲಸುವಾಗ ಕುಂಬಳಕಾಯಿ ಬೀಜವನ್ನು ಹಿಟ್ಟಿನೊಂದಿಗೆ ಬೆರೆಸಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಒಮೆಗಾ-6 ಕೊಬ್ಬಿನಾಮ್ಲಗಳು,ಸ್ಯಾಚುರೇಟೆಡ್ ಕೊಬ್ಬು,ಇದರಲ್ಲಿ ಕಂಡುಬರುತ್ತವೆ. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಅಗಸೆ ಬೀಜ :
ಅಗಸೆ ಬೀಜಗಳನ್ನು ಬೆರೆಸಿ ತಯಾರಿಸಿದ ಚಪಾತಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಅಗಸೆ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳು,ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಉತ್ತಮ ಮೂಲವಾಗಿದೆ.ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.ಇದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿದೆ. 


ಇದನ್ನೂ ಓದಿ : ಆಲ್ಕೋಹಾಲ್ ಮಾತ್ರವಲ್ಲ ಈ 5 ಆಹಾರಗಳು ಸಹ ಲಿವರ್ ಡ್ಯಾಮೇಜ್‌ಗೆ ಕಾರಣವಾಗಬಹುದು!


ಚಿಯಾ ಬೀಜ : 
ಹಿಟ್ಟು ಕಲಸುವಾಗ ಚಿಯಾ ಬೀಜಗಳನ್ನು ಮಿಶ್ರಣ ಮಾಡಬೇಕು. ಇದರಿಂದ ತಯಾರಿಸಿದ ಚಪಾತಿ ಸೇವಿಸುವ ಮೂಲಕ ರಕ್ತದಲ್ಲಿನ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.ಇದು ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳ ಉತ್ತಮ ಮೂಲವಾಗಿದೆ,ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  

https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.