ನಾರ್ಮಲ್ ನಂತೆಯೇ ಕಾಣಿಸಬಹುದು, ಆದರೆ ಇದು ಹಾರ್ಟ್ ನಲ್ಲಿ ಬ್ಲೋಕೆಜ್ ಇರುವ ಲಕ್ಷಣ
ಹೃದಯಾಘಾತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹುವಾಗಿ ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಕಿರಿಯ ವಯಸ್ಸಿನಲ್ಲಿಯೇ ಅದೆಷ್ಟೂ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೃದಯಾಘಾತಕ್ಕೆ ಮುಖ್ಯ ಕಾರಣ ಹಾರ್ಟ್ ಬ್ಲಾಕೆಜ್.
ಬೆಂಗಳೂರು : ಹಾರ್ಟ್ ಬ್ಲಾಕೇಜ್ ಆದಾಗ ಹೃದಯಾಘಾತದ ಅಪಾಯ ಜಾಸ್ತಿ. ಈ ಹಾರ್ಟ್ ಬ್ಲಾಕ್ ಎನ್ನುವುದು ಮೂರೂ ಹಂತಗಳಲ್ಲಿ ಕಾಣಿಸಿಕೊಳ್ಳುತ್ತದೆ. ಮೊದಲನೆಯ ಹಂತ ಅಪಾಯಕಾರಿಯಲ್ಲ, ಆದ್ರೆ ಮೂರನೇ ಹಂತ ಪ್ರಾಣ ತೆಗೆಯುವ ಹಂತ. ಹಾಗಾಗಿ ಹಾರ್ಟ್ ಬ್ಲಾಕ್ ಸಂಕೇತವನ್ನು ನಾವು ಗುರುತಿಸಿಕೊಳ್ಳಬೇಕು.ಹೃದಯದ ಅಪ್ಪರ್ ಚೇಂಬರ್ ನಿಂದ ವಿದ್ಯುತ್ ಸಂಕೇತಗಳು ಹೃದಯದ ಕೆಳಗಿನ ಚೇಂಬರ್ ಗೆ ಸರಿಯಾಗಿ ತಲುಪದಿದ್ದಾಗ ಹಾರ್ಟ್ ಬ್ಲಾಕ್ ಆಗುತ್ತದೆ. ಹಾರ್ಟ್ ಬ್ಲಾಕೇಜ್ ಲಕ್ಷಣಗಳನ್ನು ನಾವು ನಿರ್ಲಕ್ಷಿಸಿದರೆ ನಂತರ ಹೃದಯಾಘಾತದ ಅಪಾಯವನ್ನು ಎದುರಿಸಬೇಕಾಗುತ್ತದೆ.
ಉಸಿರಾಟದ ಸಮಸ್ಯೆ :
ಕೆಲವರಿಗೆ ಪದೇ ಪದೇ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ಉಸಿರು ತೆಗೆದುಕೊಳ್ಳುವುದು ಬಹಳ ಕಷ್ಟವಾಗುತ್ತದೆ. ಇದು ಸಾಮಾನ್ಯ ಸಮಸ್ಯೆ ಅಂದುಕೊಂಡು ಸುಮ್ಮನಾಗುವ ಬದಲು ತಕ್ಷಣ ವೈದ್ಯರನ್ನು ಭೇಟಿ ಮಾಡಿ.
ಇದನ್ನೂ ಓದಿ : ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಅನ್ನು ರಕ್ತನಾಳಗಳಿಂದ ಹೊರ ಹಾಕುತ್ತದೆ ಈ ತರಕಾರಿ
ಮೂರ್ಛೆ ಹೋಗುವುದು :
ಪದೇ ಪದೇ ಮೂರ್ಛೆ ಹೋಗುತ್ತಿದ್ದರೆ, ಅದು ಹೃದಯದಲ್ಲಿ ಬ್ಲೋಕೆಜ್ ಇರುವ ಸಂಕೇತವಾಗಿರಬಹುದು.ಹೃದಯಾಘಾತವಾದಾಗಲೂ ಈ ಸಂಕೇತ ಕಂಡು ಬರುತ್ತದೆ.ಇದರೊಂದಿಗೆ,ನಿಮ್ಮ ಹೃದಯ ಬಡಿತಡ ವೇಗ ವಿಪರೀತ ಹೆಚ್ಚಾಗುತ್ತದೆ.ಈ ಸಂದರ್ಭದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಎದೆ ನೋವು :
ಹೃದಯದಲ್ಲಿ ಬ್ಲೋಕೆಜ್ ಇದ್ದರೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ಹೆಚ್ಚಿನವರು ಈ ಲಕ್ಷಣವನ್ನು ಗ್ಯಾಸ್ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ.ಆದರೆ, ಈ ಸಮಸ್ಯೆ ದೀರ್ಘಕಾಲದವರೆಗೆ ಕಾಡುತ್ತಿದ್ದರೆ ಸ್ಥಿತಿ ಗಂಭೀರವಾಗಬಹುದು.
ಇದನ್ನೂ ಓದಿ : ಕಫದಿಂದ ಉಪಶಮನ, ದೃಷ್ಟಿ ಸುಧಾರಣೆ ಕರಿಬೇವಿನ ಸೊಪ್ಪಿನಿಂದ ಆರೋಗ್ಯಕ್ಕಿರುವ ಲಾಭಗಳ ಬಗ್ಗೆ ನಿಮಗೆ ಗೊತ್ತೇ?
ತಲೆಸುತ್ತುವುದು :
ತಲೆ ಸುತ್ತುವುದು ಹೃದಯದ ಬ್ಲೋಕೆಜ್ ನ ಸಂಕೇತವಾಗಿರಬಹುದು. ಯಾವುದೇ ಕಾರಣವಿಲ್ಲದೆ ಆಗಾಗ ತಲೆಸುತ್ತುತ್ತಿದ್ದರೆ ಅದು ಹೃದಯದ ಬ್ಲೋಕೆಜ್ ನಿಂದಲೇ ಆಗಿರುತ್ತದೆ.
ವಾಕರಿಕೆ :
ಯಾವುದೇ ಕಾರಣವಿಲ್ಲದೆ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಳ್ಳುವುದು ಕೂಡಾ ಹೃದಯದ ಬ್ಲೋಕೆಜ್ ಅನ್ನು ಸೂಚಿಸುತ್ತದೆ. ಜನರು ಸಾಮಾನ್ಯವಾಗಿ ಇಂಥಹ ಚಿಹ್ನೆಗಳ ಬಗ್ಗೆ ನಿರ್ಲಕ್ಷ್ಯ ತೋರಿ ಬಿಡುತ್ತಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.