ಗರ್ಭಕಂಠದ ಕ್ಯಾನ್ಸರ್‌ನ ಈ ಆರಂಭಿಕ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..! ಇಲ್ಲವೇ ಪ್ರಾಣಕ್ಕೆ ಕಂಟಕ..!

Women Health: ವಿಶ್ವದಾದ್ಯಂತ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಕಳವಳ ಹೆಚ್ಚಿಸಿದೆ. 

Written by - Yashaswini V | Last Updated : Mar 7, 2025, 10:21 AM IST
  • ಮಾನವ ಪ್ಯಾಪಿಲೋಮ ವೈರಸ್ (HPV) ಸೋಂಕಿನಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ.
  • ಗರ್ಭಕಂಠದ ಕ್ಯಾನ್ಸರ್‌ನ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಸಮಸ್ಯೆ ಉಲ್ಬಣಿಸುವುದನ್ನು ತಡೆಯಬಹುದು.
  • ಆದರೆ, ಇವುಗಳನ್ನು ನಿರ್ಲಕ್ಷಿಸಿದರೆ ಭವಿಷ್ಯದಲ್ಲಿ ಇದು ಪ್ರಾಣಕ್ಕೆ ಕಂಟಕವಾಗಬಹುದು.
ಗರ್ಭಕಂಠದ ಕ್ಯಾನ್ಸರ್‌ನ ಈ ಆರಂಭಿಕ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..! ಇಲ್ಲವೇ ಪ್ರಾಣಕ್ಕೆ ಕಂಟಕ..!

Cervical Cancer: ಭಾರತದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಮಾನವ ಪ್ಯಾಪಿಲೋಮ ವೈರಸ್ (HPV) ಸೋಂಕಿನಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ. ಗರ್ಭಕಂಠದ ಕ್ಯಾನ್ಸರ್‌ನ ಲಕ್ಷಣಗಳನ್ನು (Cervical Cancer Symptoms) ಆರಂಭದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಸಮಸ್ಯೆ ಉಲ್ಬಣಿಸುವುದನ್ನು ತಡೆಯಬಹುದು. ಆದರೆ, ಇವುಗಳನ್ನು ನಿರ್ಲಕ್ಷಿಸಿದರೆ ಭವಿಷ್ಯದಲ್ಲಿ ಇದು ಪ್ರಾಣಕ್ಕೆ ಕಂಟಕವಾಗಬಹುದು.

Add Zee News as a Preferred Source

ಗರ್ಭಕಂಠದ ಕ್ಯಾನ್ಸರ್‌ನ ಲಕ್ಷಣಗಳನ್ನು (Cervical Cancer Symptoms) ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಆದಾಗ್ಯೂ, ಕೆಲವು ಲಕ್ಷಣಗಳು ಲಕ್ಷಣಗಳನ್ನು ಸರ್ವೈಕಲ್ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ- ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದೆರಡು ಸಿಹಿ ಬೇವನ್ನು ಜಗಿದು ತಿಂದ್ರೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ..!

ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣಗಳು (Causes Of Cervical Cancer): 
ಎಚ್‌ಪಿ‌ವಿ ಹೊರತಾಗಿ ದುರ್ಬಲ ರೋಗನಿರೋಧಕ ಶಕ್ತಿ, ಧೂಮಪಾನ, ಗರ್ಭಾವಸ್ಥೆಯಲ್ಲಿ ಹಾರ್ಮೋನುಗಳ ಅಸಮತೋಲನ, ಗರ್ಭನಿರೋಧಕ ಮಾತ್ರೆಗಳ ಅತಿಯಾದ ಬಳಕೆ ಗರ್ಭಕಂಠದ ಕ್ಯಾನ್ಸರ್‌ಗೆ ಕೆಲವು ಪ್ರಮುಖ ಕಾರಣಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ- ಯಾವ ಟ್ರೀಟ್‌ಮೆಂಟ್‌ ಅವಶ್ಯಕತೆಯಿಲ್ಲ.. ಈ ವ್ಯಾಯಾಮ ಮಾಡಿದ್ರೆ ಸಾಕು ವೃದ್ದಾಪ್ಯದಲ್ಲೂ ಹೃದಯಾಘಾತವಾಗಲ್ಲ!

ಗರ್ಭಕಂಠದ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳು (Early Symptoms Of Cervical Cancer): 
ಮಾನವ ಪ್ಯಾಪಿಲೋಮ ವೈರಸ್ (ಎಚ್‌ಪಿ‌ವಿ) ಸೋಂಕಿನಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್‌ನ ಕೆಲವು ಪ್ರಮುಖ ಲಕ್ಷಣಗಳನ್ನು ಕೆಳಕಂಡಂತೆ ಗುರುತಿಸಲಾಗಿದೆ... 
>> ಹೊಟ್ಟೆಯ ಕೆಳಭಾಗದಲ್ಲಿ ಅಸಹನೀಯ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತದೆ. 
>> ಪೀರಿಯಡ್ಸ್ ಬಳಿಕವೂ ಅತಿಯಾದ ರಕ್ತರಾವ. 
>> ಸಂಭೋಗ ಸಮಯದಲ್ಲಿ ರಕ್ತಸ್ರಾವ. 
>> ಯೋನಿಯಿಂದ ಬಿಳಿ ಅಥವಾ ಕೆಂಪು ಬಣ್ಣದ ಸ್ರಾವದ ಜೊತೆಗೆ ಕೆಟ್ಟ ವಾಸನೆ. 
>> ಮೂತ್ರ ವಿಸರ್ಜನೆ ವೇಳೆ ಸುಡುವ ಸಂವೇದನೆ ಮತ್ತು ಉರಿ. 
>> ಮೂತ್ರದಲ್ಲಿ ರಕ್ತ. 
>> ತ್ವರಿತ ತೂಕನಷ್ಟ ಹಾಗೂ ಕಾಲುಗಳಲ್ಲಿ ಊತದಂತಹ ಸಮಸ್ಯೆಗಳು ಕಾಣಿಸಿಕೊಂಡರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

Yashaswini V

ಯಶಸ್ವಿನಿ ವಿ. Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017ರಿಂದ Zee ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ರಾಜಕೀಯ, ಎಂಟರ್ಟೈನ್ಮೆಂಟ್, ಬ್ಯುಸಿನೆಸ್, ಲೈಫ್ ಸ್ಟೈಲ್, ವರ್ಲ್ಡ್, ಸೈನ್ಸ್ ಅಂಡ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಇವರು ಸದ್ಯ ಅಸಿಸ್ಟೆಂಟ್ ನ್ಯೂಸ್ ಎಡಿಟರ್ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

...Read More

Trending News