Home remedies for bad cholesterol: ಇಂದಿನ ಆಧುನಿಕ ಜೀವನಶೈಲಿಯಲ್ಲಿ ಹೆಚ್ಚಿನ ಜನರು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು.ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿ ಇರುವ ಜಿಗುಟಾದ ವಸ್ತುವಾಗಿದೆ.ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಇದೆ, ಒಂದು ಒಳ್ಳೆಯ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಮತ್ತು ಇನ್ನೊಂದು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್).ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾದಾಗ,ಅದು ರಕ್ತನಾಳಗಳನ್ನು ನಿರ್ಬಂಧಿಸುತ್ತದೆ.ಈ ಕಾರಣದಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ರೋಗಗಳ ಅಪಾಯವು ಹೆಚ್ಚಾಗುತ್ತದೆ. ಹಾಗಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ಬಹಳ ಮುಖ್ಯ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಬೇಕು.  ಇದಲ್ಲದೆ,ಕೆಲವು ಮನೆಮದ್ದುಗಳ ಸಹಾಯದಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದು ಸಾಧ್ಯವಾಗುತ್ತದೆ. 


COMMERCIAL BREAK
SCROLL TO CONTINUE READING

ಅಂಥಹ ಒಂದು ಮನೆಮದ್ದು ಎಂದರೆ ಅದು ಓಟ್ಸ್. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಹಾಗಾದರೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಓಟ್ಸ್ ಅನ್ನು ಹೇಗೆ ಬಳಸುವುದು ನೋಡೋಣ . 


ಇದನ್ನೂ ಓದಿ : ಈ ರುಚಿಕರ ತರಕಾರಿಯನ್ನು ಸೇವಿಸಿದರೆ ಶಾಶ್ವತವಾಗಿ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ ! ನಿಮಗಿಷ್ಟ ಬಂದಂತೆ ತಿನ್ನಬಹುದು !


ಓಟ್ಸ್ ನೀರು ಹೇಗೆ ಪ್ರಯೋಜನಕಾರಿ ? :
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಲ್ಲಿ ಓಟ್ಸ್ ನೀರು ತುಂಬಾ ಪ್ರಯೋಜನಕಾರಿಯಾಗಿರಲಿದೆ.ಇದು ಹೇರಳವಾಗಿ ಕರಗುವ ಫೈಬರ್ ಅನ್ನು ಹೊಂದಿರುತ್ತದೆ.ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಓಟ್ಸ್ ನೀರು ದೇಹದಲ್ಲಿನ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಅಂಶ ಅನೇಕ ಅಧ್ಯಯನಗಳಲ್ಲಿ ಕೂಡಾ ಸಾಬೀತಾಗಿದೆ. ಓಟ್ಸ್ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನೂ ಕಡಿಮೆ ಮಾಡಬಹುದು.


ಓಟ್ಸ್ ನೀರನ್ನು ಹೇಗೆ ತಯಾರಿಸುವುದು? :
ಓಟ್ಸ್ ನೀರನ್ನು ತಯಾರಿಸಲು,ಒಂದು ಲೋಟ ನೀರಿನಲ್ಲಿ 3-4 ಚಮಚ ಓಟ್ಸ್ ಸೇರಿಸಿ ರಾತ್ರಿಯಿಡೀ ಬಿಡಿ.ಬೆಳಗ್ಗೆ ಇದನ್ನು ಮಿಕ್ಸಿಯಲ್ಲಿ ನೀರಿನೊಂದಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಅದನ್ನು ಸೇವಿಸಿ.ಬೇಕಾದರೆ ಇದಕ್ಕೆ ಸ್ವಲ್ಪ ಜೇನುತುಪ್ಪ ಮತ್ತು ಚಕ್ಕೆ ಪುಡಿಯನ್ನು ಸೇರಿಸಬಹುದು.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಇದನ್ನೂ ಓದಿ : Soaked Dry Fruits Benefits: ತೂಕ ಇಳಿಕೆಯಿಂದ ಕೊಲೆಸ್ಟ್ರಾಲ್ ನಿಯಂತ್ರಣದವರೆಗೆ ಸಹಾಯಕ ನೆನೆಸಿಟ್ಟ ಡ್ರೈ ಫ್ರೂಟ್ಸ್


ಓಟ್ಸ್ ನೀರನ್ನು ಕುಡಿಯುವುದರಿಂದ ಇತರ ಪ್ರಯೋಜನಗಳು :
೧.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಓಟ್ಸ್ ನೀರನ್ನು ಕುಡಿಯುವ ಮೂಲಕ  ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ.
೨.ಓಟ್ಸ್ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
೩.ಓಟ್ಸ್ ನೀರನ್ನು ಕುಡಿಯುವುದರಿಂದ ಹಸಿವನ್ನು ನಿಯಂತ್ರಿಸಬಹುದು. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
೪. ಓಟ್ಸ್ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು.
೫. ಓಟ್ಸ್ ನೀರು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.