Orange Peel Benefits: ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಡಗಿದೆ ಆರೋಗ್ಯದ ನಿಧಿ
Orange Peel Benefits: ಕಿತ್ತಳೆ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಕಸಕ್ಕೆ ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆಯ ಈ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅದನ್ನು ಬಿಸಾಡುವುದಿಲ್ಲ.
Orange Peel Benefits: ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳ ಸಮೃದ್ಧ ಮೂಲವಾಗಿರುವ ಕಿತ್ತಳೆ ಹಣ್ಣು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ. ಸಾಮಾನ್ಯವಾಗಿ ನಾವು ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆ ತ್ಯಾಜ್ಯವಲ್ಲ, ಅದು ಪೋಷಕಾಂಶಗಳ ಖಜಾನೆ ಎಂದು ನಿಮಗೆ ತಿಳಿದಿದೆಯೇ?
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ನಮ್ಮ ಆರೋಗ್ಯಕ್ಕೆ ಅಗತ್ಯವಾದ ಹಲವು ಪೋಷಕಾಂಶಗಳಿವೆ. ಕಿತ್ತಳೆ ಸಿಪ್ಪೆಯು ವಿಟಮಿನ್ ಸಿ, ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ಇತರ ಪೋಷಕಾಂಶಗಳನ್ನು ಹೊಂದಿದ್ದು, ಇದು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳನ್ನು ನೀಡಲಿದೆ ಎಂದು ತಿಳಿಯೋಣ...
ಕಿತ್ತಳೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳು:
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ ಮತ್ತು ಫೈಬರ್ ಹೇರಳವಾಗಿದೆ. ಇದರಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ, ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಅತ್ಯಗತ್ಯ ಮತ್ತು ವಿಟಮಿನ್ ಇ ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಫೈಬರ್ ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಇದನ್ನೂ ಓದಿ- Ghee Benefits: ತೂಕ ಹೆಚ್ಚಳ, ತೂಕ ಇಳಿಕೆ ಎರಡರಲ್ಲೂ ತುಂಬಾ ಪ್ರಯೋಜನಕಾರಿ ತುಪ್ಪ
ಆಂಟಿಆಕ್ಸಿಡೆಂಟ್‌ಗಳ ಪವರ್‌ಹೌಸ್:
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಕಂಡು ಬರುತ್ತವೆ. ಇವು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುವಲ್ಲಿ ಪರಿಣಾಮಕಾರಿ ಪಾತ್ರವನ್ನು ವಹಿಸುವ ಮೂಲಕ ಜೀವಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ಈ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿವೆ.
ಕೊಲೆಸ್ಟ್ರಾಲ್ ನಿಯಂತ್ರಣ:
ಕಿತ್ತಳೆ ಹಣ್ಣಿನ ಸಿಪ್ಪೆಯು ಪೆಕ್ಟಿನ್ ಎಂಬ ಫೈಬರ್ ಅನ್ನು ಹೊಂದಿದ್ದು, ಇದು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚಿನ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
ಡಯಾಬಿಟಿಸ್:
ಕಿತ್ತಳೆ ಸಿಪ್ಪೆಯಲ್ಲಿ ನರಿಂಗೆನಿನ್ ಎಂಬ ಫ್ಲೇವನಾಯ್ಡ್ ಇದ್ದು ಇದು ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ.
ಚರ್ಮದ ಆರೋಗ್ಯ:
ಕಿತ್ತಳೆ ಸಿಪ್ಪೆಯಲ್ಲಿ ಕಂಡು ಬರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಕಿತ್ತಳೆ ಸಿಪ್ಪೆಯ ಪೇಸ್ಟ್ ಹಚ್ಚುವುದರಿಂದ ಮುಖದಲ್ಲಿ ಮೂಡುವ ಮೊಡವೆ, ಸುಕ್ಕುಗಳು ಮತ್ತು ಕಲೆಗಳನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಇದನ್ನೂ ಓದಿ- Diabetes ನಿಂದ ಹಿಡಿದು ಹೃದಯದ ಆರೋಗ್ಯ ರಕ್ಷಣೆಯವರೆಗೆ ಅದ್ಭುತ ಕೆಲಸ ಮಾಡುತ್ತೆ ಈ ಮ್ಯಾಜಿಕಲ್ ರೈಸ್
ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಳಸುವ ವಿಧಾನ:
* ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ, ಪುಡಿ ಮಾಡಿ ಇಡಿ. ಈ ಪುಡಿಯನ್ನು ಸ್ಮೂಥಿಗಳು, ಚಹಾ ಅಥವಾ ಇತರ ಭಕ್ಷ್ಯಗಳಲ್ಲಿ ಬೆರೆಸಿ ಬಳಸಬಹುದು.
* ಚರ್ಮ ಸಮಸ್ಯೆಗಳ ನಿವಾರಣೆಗೆ ಈ ಪುಡಿಯನ್ನು ಪೇಸ್ಟ್ ಮಾಡಿ ಹಚ್ಚಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.