Green Leaves For Diabetes: ಮಧುಮೇಹಿಗಳಿಗೆ ಪರಿಹಾರ ನೀಡಲಿವೆ ಈ ಮೂರು ಹಸಿರು ಎಲೆಗಳು
Green Leaves For Diabetes: ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಅವರ ಆರೋಗ್ಯವು ಹದಗೆಡದಂತೆ ಹೆಚ್ಚು ಕಾಳಜಿ ವಹಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಕೆಲವು ಹಸಿರು ತರಕಾರಿಗಳನ್ನು ಸೇರಿಸುವುದು ಹೆಚ್ಚು ಪ್ರಯೋಜನಕಾರಿ ಆಗಿದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಹಸಿರು ಎಲೆಗಳ ತರಕಾರಿಗಳು: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಫಿಟ್ನೆಸ್ ಬಹಳ ಮುಖ್ಯ. ಅದರಲ್ಲೂ ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ, ಹಾಗೆಯೇ ಅವರು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವಂತಹ ಆಹಾರ ಪದಾರ್ಥಗಳಿಂದ ದೂರ ಉಳಿಯುವುದು ಕೂಡ ಅಗತ್ಯ. ಆರೋಗ್ಯ ತಜ್ಞರ ಪ್ರಕಾರ, ಮಧುಮೇಹ ರೋಗಿಗಳು ಹೆಚ್ಚಿನ ಫೈಬರ್ ಆಹಾರಗಳು, ಕಾರ್ಬೋಹೈಡ್ರೇಟ್ಗಳು ಮತ್ತು ಪ್ರೋಟೀನ್ಗಳಂತಹ ಪೋಷಕಾಂಶಗಳನ್ನು ಸಮತೋಲಿತ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು.
ಪ್ರಪಂಚದಾದ್ಯಂತ ಮಧುಮೇಹದ ಅಪಾಯ:
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, 2030 ರ ಹೊತ್ತಿಗೆ, ಮಧುಮೇಹವು ವಿಶ್ವದ 7 ನೇ ಅತ್ಯಂತ ಮಾರಣಾಂತಿಕ ಕಾಯಿಲೆಯಾಗಲಿದೆ. ಲೀಸೆಸ್ಟರ್ ವಿಶ್ವವಿದ್ಯಾನಿಲಯವು ಕೆಲವು ವರ್ಷಗಳ ಹಿಂದೆ ಒಂದು ಸಂಶೋಧನೆ ನಡೆಸಿತು. ಅದರ ಪ್ರಕಾರ ನೀವು ದೈನಂದಿನ ಆಹಾರದಲ್ಲಿ ಹಸಿರು ಎಲೆಗಳ ತರಕಾರಿಗಳನ್ನು ಸೇವಿಸಿದರೆ, ನಂತರ ಟೈಪ್ 2 ಮಧುಮೇಹದ ಅಪಾಯವು 14% ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲೂ ಮುಖ್ಯ್ಯವಾಗಿ ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಈ ಮೂರು ಹಸಿರು ಎಲೆಗಳನ್ನು ಅಂದರೆ ಸೊಪ್ಪುಗಳನ್ನು ತಮ್ಮ ಡಯಟ್ನಲ್ಲಿ ಸೇರಿಸುವುದರಿಂದ ಹೆಚ್ಚು ಪ್ರಯೋಜನ ಪಡೆಯಬಹುದು ಎನ್ನಲಾಗುವುದು. ಅಂತಹ ಸೊಪ್ಪುಗಳು ಯಾವುವು ಎಂದು ತಿಳಿಯೋಣ...
ಇದನ್ನೂ ಓದಿ- Lung Cancer: ಮಾಲಿನ್ಯದಿಂದ ದೇಹದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಬೆಳೆಯುತ್ತಿದೆಯೇ?
ಈ 3 ಹಸಿರು ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ:
1. ಪಾಲಕ:
ಹಸಿರು ಎಲೆಗಳ ತರಕಾರಿಗಳಲ್ಲಿ ಪಾಲಕವು ಔಷಧೀಯ ಗುಣಗಳಲ್ಲಿ ಸಮೃದ್ಧವಾಗಿದೆ ಎಂದು ಪರಿಗಣಿಸಲಾಗಿದೆ. ಇದು ಫೈಬರ್‌ನ ಸಮೃದ್ಧ ಮೂಲವಾಗಿದೆ, ಇದು ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ತಡೆಯುತ್ತದೆ. ಇದರಲ್ಲಿರುವ ಮೆಗ್ನೀಸಿಯಮ್ ಮಧುಮೇಹದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಪಾಲಕದಲ್ಲಿ ಕಂಡುಬರುತ್ತವೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
2. ಎಲೆಕೋಸು:
ಎಲೆಕೋಸು ಅಥವಾ ಕ್ಯಾಬೇಜ್ ಹೆಚ್ಚಿನ ಫೈಬರ್ ಆಹಾರವಾಗಿದ್ದು ಅದು ಮಧುಮೇಹ ರೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಈ ಎಲೆಗಳನ್ನು ಅಡುಗೆ ಮಾಡುವ ಮೊದಲು ಚೆನ್ನಾಗಿ ತೊಳೆಯಬೇಕು ಮತ್ತು ಎಣ್ಣೆಯಲ್ಲಿ ಹುರಿಯುವ ಬದಲು ಸೂಪ್ ಆಗಿ ಸೇವಿಸುವುದು ಉತ್ತಮ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ- ಹೈ BP ನಿಯಂತ್ರಣಕ್ಕೆ ತಪ್ಪದೆ ಕುಡಿಯಿರಿ ಈ 4 ಹರ್ಬಲ್ ಚಹಾ!
3. ಕರಿಬೇವು:
ಭಾರತೀಯ ಭಕ್ಷ್ಯಗಳಲ್ಲಿ ಕರಿಬೇವಿನ ಎಲೆಗಳನ್ನು ಬಳಸಲಾಗುತ್ತದೆ. ಡಯಾಬಿಟಿಸ್ ರೋಗಿಗಳು ಕರಿಬೇವಿನ ಎಲೆಗಳನ್ನು ಸೇವಿಸುವುದರಿಂದ ಬ್ಲಡ್ ಶುಗರ್ ಲೆವೆಲ್ ನಿಯಂತ್ರಣದಲ್ಲಿರುತ್ತದೆ. ಮಾತ್ರವಲ್ಲ, ಕರಿಬೇವಿನ ಎಲೆಗಳಲ್ಲಿರುವ ಸಾರಗಳು ಮಧುಮೇಹ ಸಂಬಂಧಿತ ಜೀವರಾಸಾಯನಿಕ ಸೂಚ್ಯಂಕಗಳನ್ನೂ ಕಂಟ್ರೋಲ್ ಮಾಡುವಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.