Health Tips: ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಶೀತ ವಾತಾವರಣದಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಡುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನಮ್ಮ ಆರೋಗ್ಯದ ಬಗ್ಗೆ ನಾವೇ ನಿಗಾವಹಿಸಿಬೇಕಾಗುತ್ತದೆ. ಅದರಲ್ಲೂ ವಿಶೇಷವಾಗಿ ಮಕ್ಕಳ ಆರೋಗ್ಯದ ಕಡೆ ಹೆಚ್ಚಾಗಿ ನಿಗಾವಹಿಸಬೇಕು. ಇನ್ನೂ ಚಳಿಗಾಲ ಆರಂಭವಾಗುತ್ತಿದ್ದಂತೆ ಮಕ್ಕಳನ್ನು ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ಬೆನ್ನತ್ತುತ್ತಲೇ ಇರುತ್ತವೆ. ಹಾಗದ್ರೆ ಚಳಿಗಾಲದಲ್ಲಿ ಮಕ್ಕಳನ್ನು ಕಾಡುವ ಸಮಸ್ಯೆಗಳು ಯಾವುವು? ಇಂತಹ ಆರೋಗ್ಯ ಸಮಸ್ಯೆಗಳಿಂದ ಮಕ್ಕಳನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ...
ಈ ಋತುವಿನಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾತಾವರಣ ತುಂಬಾ ಶೀತಯುಕ್ತವಾಗಿರುತ್ತದೆ. ಹಾಗಾಗಿಯೇ, ಮಕ್ಕಳಲ್ಲಿ ಶೀತ, ಅತಿಯಾದ ಸೀನುವಿಕೆ, ಮೂಗು ಸೋರಿಕೆ, ಕೆಮ್ಮು ಮತ್ತು ಜ್ವರದಂತಹ ಅನಾರೋಗ್ಯದ ಲಕ್ಷಣಗಳು ಕಂಡುಬರುತ್ತದೆ. ಇದರ ಜೊತೆಗೆ ಮಕ್ಕಳಲ್ಲಿ ಅಸ್ವಸ್ಥತೆ , ದೇಹದ ಭಾಗಗಳಲ್ಲಿ ನೋವು ಮತ್ತು ತೀವ್ರ ಆಯಾಸ ಕೂಡ ಉಂಟಾಗುತ್ತೆ. ಇಂತಹ ಸೋಂಕುಗಳು ಹೆಚ್ಚು ಸಾಂಕ್ರಾಮಿಕ ಕಾಯಿಲೆಗಳಾಗಿರುತ್ತದೆ. ಆರಂಭಿಕದಲ್ಲೇ ರೋಗ ಲಕ್ಷಣಗಳನ್ನು ಮೇಲ್ವಿಚಾರಣೆ ಮಾಡಿ ಅದನ್ನು ತಡೆಗಟ್ಟುವುದು ತುಂಬಾ ಮುಖ್ಯ. ಇದಕ್ಕಾಗಿ ಕೆಲವು ಮನೆಮದ್ದುಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಚಳಿಗಾಲದಲ್ಲಿ ಮಕ್ಕಳನ್ನು ಅನಾರೋಗ್ಯದಿಂದ ರಕ್ಷಿಸಲು ತಾಯಂದಿರಿಗೆ ಇಲ್ಲಿದೆ ಕೆಲವು ಸಿಂಪಲ್ ಸಲಹೆಗಳು:
* ಬಿಸಿ ನೀರು ಸೇವನೆ:
ಚಳಿಗಾಲದಲ್ಲಿ ಮಕ್ಕಳಿಗೆ ಕುಡಿಯಲು ತಣ್ಣೀರು ನೀಡುವ ಬದಲಿಗೆ ಸಾಧ್ಯವಾದಷ್ಟು ಚೆನ್ನಾಗಿ ಕಾಯಿಸಿ ಆರಿಸಿದ ನೀರನ್ನು ಕುಡಿಸಿ. ಈ ಋತುವಿನಲ್ಲಿ ಮಕ್ಕಳಿಗೆ ದಿನಕ್ಕೆ ಕನಿಷ್ಟ ಅಂದ್ರೂ 6 ಲೋಟ ನೀರು ಕುಡಿಸುವುದು ಬಹಳ ಒಳ್ಳೆಯದು.
ಇದನ್ನೂ ಓದಿ- ಲಿಪಿಡ್ ಪ್ರೊಫೈಲ್ ಟೆಸ್ಟ್ ಮಾಡಿಸುವಾಗ ಈ 5 ವಿಷಯಗಳ ಬಗ್ಗೆ ಇರಲಿ ವಿಶೇಷ ಗಮನ
* ಉತ್ತಮ ನೈರ್ಮಲ್ಯ:
ಮಕ್ಕಳು ಓಡಾಡುವ ಸುತ್ತಮುತ್ತಲಿನ ಪರಿಸರ ಹಾಗೂ ಮಕ್ಕಳ ಆಟಿಕೆಗಳನ್ನು ಸ್ವಚ್ಛವಾಗಿ ಇಡುವಂತೆ ನೋಡಿಕೊಳ್ಳಿ. ಜೊತೆಗೆ ಆಗಾಗ್ಗೆ, ಮಕ್ಕಳ ಕೈಕಾಲುಗಳನ್ನು ಸ್ವಚ್ಛಗೊಳಿಸಿ. ಇದರಿಂದ ಸೋಂಕಿನ ಅಪಾಯವನ್ನು ತಪ್ಪಿಸಬಹುದು.
* ಪೌಷ್ಟಿಕ ಆಹಾರ ಸೇವನೆ:
ಯಾವುದೇ ಋತುಮಾನದಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರೋಟೀನ್, ಫೈಬರ್ಗಳಿರುವ ಹಣ್ಣುಗಳು ಹಾಗೂ ತರಕಾರಿಗಳಿರುವ ಆಹಾರವನ್ನು ನೀಡುವುದು ಬಹಳ ಮುಖ್ಯ. ಇದರೊಂದಿಗೆ ಫ್ರಿಜ್ಡ್ನಲ್ಲಿರುವ ಸಂಸ್ಕರಿಸಿದ ಆಹಾರಗಳು,ಎಣ್ಣೆ ಅಂಶವಿರುವ ಪದಾರ್ಥಗಳು ಮತ್ತು ಜಂಕ್ ಫುಡ್ ಕೊಡುವುದುನ್ನು ತಪ್ಪಿಸಿದರೆ ಒಳಿತು.
* ಸೋಂಕಿತರಿಂದ ಅಂತರ:
ಮಕ್ಕಳು ಶಾಲೆಗೆ ಹೋದರೆ ಅಥವಾ ಆಟದ ಮೈದಾನಕ್ಕೆ ಹೋಗುವ ಸಂದರ್ಭದಲ್ಲಿ ಸೋಂಕಿತ ಮಕ್ಕಳೊಂದಿಗಿನ ಸಂಪರ್ಕಿಸುವುದನ್ನು ತಪ್ಪಿಸಿ. ಕೆಮ್ಮುವಾಗ, ಸೀನುವಾಗ ಕೈಗಳಿಂದ ಬಾಯಿ ಮತ್ತು ಮೂಗು ಮುಚ್ಚಿಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಂತೆ ಮಕ್ಕಳಿಗೆ ಸಲಹೆ ನೀಡಿ.
* ವೈರಲ್ ಜ್ವರದ ಬಗ್ಗೆ ಗಮನವಿರಲಿ :
ಚಳಿಗಾಲದಲ್ಲಿ ಮಕ್ಕಳಲ್ಲಿ ವೈರಲ್ ಜ್ವರಗಳು ಕಾಣಿಸಿಕೊಳ್ಳುವುದು ಹೆಚ್ಚು. ಇದನ್ನು ನಿಯಂತ್ರಿಸಲು ಸರಿಯಾದ ಸಮಯಕ್ಕೆ ವೈದ್ಯರನ್ನು ಸಂಪರ್ಕಿಸಿ ಔಷಧಿಯನ್ನು ಪಡೆಯುವುದು ಉತ್ತಮ.
ಇದನ್ನೂ ಓದಿ- ಮಧುಮೇಹ ರೋಗಿಗಳು ಎಳನೀರನ್ನು ಕುಡಿಯಬಹುದೇ..? ಸಂದೇಹ ಬಗೆಹರಿಸಿಕೊಳ್ಳಿ
ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?
ನಮ್ಮಲ್ಲಿ ಕೆಲವರು ಸಾಮಾನ್ಯ ಶೀತ, ನೆಗಡಿಯಿದ್ದಾಗ ಮನೆಮದ್ದುಗಳಿಂದಲೇ ಹುಷಾರಾಗುತ್ತೇವೆ ಎಂದು ಆಸ್ಪತ್ರೆಗೆ ಹೋಗುವುದೇ ಇಲ್ಲ. ಆದರೆ, ಮೂರ್ನಾಲ್ಕು ದಿನಗಳಲ್ಲಿ ನಿಮ್ಮಲ್ಲಿ ಈ ಲಕ್ಷಣಗಳು ಕಡಿಮೆ ಆಗದಿದ್ದರೆ, ಸ್ವಯಂ ಔಷಧಿಗಳನ್ನು ತೆಗೆದುಕೊಳ್ಳುವ ಬದಲಿಗೆ ತಪ್ಪದೇ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಸಲಹೆ ಪಡೆದು ಚಿಕಿತ್ಸೆ ಪಡೆದುಕೊಳ್ಳವುದು ಉತ್ತಮ.
ಮಕ್ಕಳ ಆರೋಗ್ಯ:
ಒಂದೊಮ್ಮೆ ನಿಮ್ಮ ಮಗುವಿನಲ್ಲಿ ಅನಾರೋಗ್ಯದ ಲಕ್ಷಣಗಳನ್ನು ಕಂಡು ಬಂದಾಗ ಆರಂಭಿಕ ಹಂತದಲ್ಲಿಯೇ ವೈದ್ಯರನ್ನು ಸಂಪರ್ಕಿಸುವುದು ಮತ್ತು ಸಲಹೆ ಪಡೆದುಕೊಳ್ಳುವುದು ಬಹಳ ಮುಖ್ಯ. ಈ ರೀತಿ ಕ್ರಮವನ್ನು ನೀವು ಪಾಲಿಸಿದಲ್ಲಿ ಸಾಂಕ್ರಮಿಕ ರೋಗಕ್ಕೆ ಬೇಡಿ ಹಾಕಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.