‌ಹಠಾತ್ ಹಾರ್ಟ್‌ ಅಟ್ಯಾಕ್‌ಗೆ ಬಲಿಯಾಗುತ್ತಿರುವ ಜನರು; ಹೃದಯಾಘಾತದ ಅಪಾಯ ಕಡಿಮೆ ಮಾಡುವುದು ಹೇಗೆ?

Heart attack symptoms: ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು, ಸಾಧ್ಯವಾದಷ್ಟು ಬೇಗ ಧೂಮಪಾನ ಮತ್ತು ಮದ್ಯಪಾನದಂತಹ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲು ಪ್ರಯತ್ನಿಸಿ. ಇದಲ್ಲದೆ ಪ್ರತಿ ರಾತ್ರಿ 7-8 ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಮಾಡಿ.

Written by - Puttaraj K Alur | Last Updated : Jun 1, 2025, 11:05 PM IST
  • ಪ್ರತಿದಿನ ಮನೆಯಲ್ಲಿ ನಿಯಮಿತವಾಗಿ ಯೋಗ ಮಾಡುವುದನ್ನ ರೂಢಿಸಿಕೊಳ್ಳಬೇಕು
  • ಪೌಷ್ಟಿಕಾಂಶಯುಕ್ತ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸಬೇಕು
  • ಅತಿಯಾದ ಒತ್ತಡವು ಹೃದಯಾಘಾತಕ್ಕೆ ಕಾರಣವಾಗಬಹುದು ಎಚ್ಚರ ವಹಿಸಿ
‌ಹಠಾತ್ ಹಾರ್ಟ್‌ ಅಟ್ಯಾಕ್‌ಗೆ ಬಲಿಯಾಗುತ್ತಿರುವ ಜನರು; ಹೃದಯಾಘಾತದ ಅಪಾಯ ಕಡಿಮೆ ಮಾಡುವುದು ಹೇಗೆ?

Heart attack prevention tips: ಕಳೆದ ಕೆಲವು ವರ್ಷಗಳಲ್ಲಿ, ವಯಸ್ಸಾದವರು ಮಾತ್ರವಲ್ಲದೆ ಕಿರಿಯರು ಸಹ ಹೃದಯಾಘಾತದಿಂದ ಬಳಲುತ್ತಿದ್ದಾರೆ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಹಠಾತ್ ಹಾರ್ಟ್‌ ಅಟ್ಯಾಕ್‌ಗೆ ಬಲಿಯಾಗುತ್ತಿದ್ದಾರೆ. ನೀವು ಹೃದಯಾಘಾತದ ಅಪಾಯವನ್ನ ಕಡಿಮೆ ಮಾಡಲು ಬಯಸಿದರೆ, ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು.

Add Zee News as a Preferred Source

ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ನೀವು ನಿಮ್ಮ ಹೃದಯದ ಆರೋಗ್ಯವನ್ನು ಬಲಪಡಿಸಿಕೊಳ್ಳಬೇಕು. ಇದಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡುವುದು ಬಹಳ ಮುಖ್ಯ. ನೀವು ಜಿಮ್‌ಗೆ ಹೋಗಲು ಸಾಧ್ಯವಾಗದಿದ್ದರೆ ಯಾವುದೇ ತೊಂದರೆ ಇಲ್ಲ, ಪ್ರತಿದಿನ ಮನೆಯಲ್ಲಿ ನಿಯಮಿತವಾಗಿ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ: ಮಧುಮೇಹ ರೋಗಿಗಳು ಪ್ರತಿದಿನ ಎಷ್ಟು ಹೊತ್ತು ನಡೆಯಬೇಕು? ಶುಗರ್‌ ಕಂಟ್ರೋಲ್‌ಗೆ ಈ ಕೆಲಸ ಮಾಡಿ

ಅತಿಯಾದ ಒತ್ತಡವು ಹೃದಯಾಘಾತಕ್ಕೆ ಕಾರಣವಾಗಬಹುದು. ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ನೀವು ಬಯಸಿದರೆ, ಒತ್ತಡವನ್ನು ನಿರ್ವಹಿಸಲು ಕಲಿಯಬೇಕು. ಒತ್ತಡ ನಿರ್ವಹಣೆಗಾಗಿ ನೀವು ಧ್ಯಾನದ ಸಹಾಯವನ್ನು ಸಹ ಪಡೆಯಬಹುದು. ಅನಾರೋಗ್ಯಕರ ಆಹಾರ ಪದ್ಧತಿಯನ್ನ ಅನುಸರಿಸುವುದರಿಂದ ನಿಮ್ಮ ಹೃದಯದ ಆರೋಗ್ಯ ದುರ್ಬಲಗೊಳ್ಳಬಹುದು. ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಬಯಸಿದರೆ, ಹೊರಗೆ ಕರಿದ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಪೌಷ್ಟಿಕಾಂಶಯುಕ್ತ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸಬೇಕು.

ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು, ಸಾಧ್ಯವಾದಷ್ಟು ಬೇಗ ಧೂಮಪಾನ ಮತ್ತು ಮದ್ಯಪಾನದಂತಹ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲು ಪ್ರಯತ್ನಿಸಿ. ಇದಲ್ಲದೆ ಪ್ರತಿ ರಾತ್ರಿ 7-8 ಗಂಟೆಗಳ ಕಾಲ ಚೆನ್ನಾಗಿ ನಿದ್ರೆ ಮಾಡಿ. ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಪದ್ಧತಿಯಿಂದ ನೀವು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಬಹುದು.

ಇದನ್ನೂ ಓದಿ: ಲಿವರ್ ಹಾನಿಗೊಳಗಾದಾಗ ಈ ಲಕ್ಷಣಗಳನ್ನು ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..!

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News