ಈ ಸಮಸ್ಯೆ ಇದ್ದರೆ ಒಂದೇ ಒಂದು ಗುಟುಕು ಕುಡಿಯಬಾರದು ಕಬ್ಬಿನ ಹಾಲು ! ಎಷ್ಟೇ ಇಷ್ಟವಾದರೂ ಸರಿ ಈ ಜ್ಯೂಸ್ ನಿಂದ ಮಾತ್ರ ದೂರವಿರಿ

Who Should Not Drink Sugarcane Juice:ಕಬ್ಬಿಣ ಹಾಲು ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರ ಸೇವನೆಯು ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ, ಕೆಲವು ಜನರು ಕಬ್ಬಿನ ರಸವನ್ನು ಕುಡಿಯುವಂತಿಲ್ಲ.     

Written by - Ranjitha R K | Last Updated : Mar 3, 2025, 04:48 PM IST
  • ಕಬ್ಬಿನ ರಸ ಕುಡಿಯಲು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.
  • ಬೇಸಿಗೆಯಲ್ಲಿ ಕಬ್ಬಿನ ರಸ ಸೇವಿಸುವುದರಿಂದ ದೇಹವು ಹೈಡ್ರೇಟೆಡ್ ಆಗಿರುವುದರೊಂದಿಗೆ ತಂಪಾಗಿರುತ್ತದೆ
  • ಆದರೆ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ, ಕೆಲವು ಜನರು ಕಬ್ಬಿನ ರಸವನ್ನು ಕುಡಿಯುವಂತಿಲ್ಲ.
ಈ ಸಮಸ್ಯೆ ಇದ್ದರೆ ಒಂದೇ ಒಂದು ಗುಟುಕು ಕುಡಿಯಬಾರದು ಕಬ್ಬಿನ ಹಾಲು ! ಎಷ್ಟೇ ಇಷ್ಟವಾದರೂ ಸರಿ ಈ ಜ್ಯೂಸ್ ನಿಂದ ಮಾತ್ರ ದೂರವಿರಿ

Sugarcane Juice Side Effects : ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಲು ಮತ್ತು ಹೈಡ್ರೀಕರಿಸಿಟ್ಟುಕೊಳ್ಳಲು, ಜನರು ತಮ್ಮ ಆಹಾರದಲ್ಲಿ ಅನೇಕ ರೀತಿಯ ಪಾನೀಯಗಳನ್ನು ಸೇರಿಸಿಕೊಳ್ಳುತ್ತಾರೆ. ಈ ಪಾನೀಯಗಳಲ್ಲಿ ಕಬ್ಬಿನ ರಸವೂ ಸೇರಿದೆ. ಹೌದು, ಕಬ್ಬಿನ ರಸ ಕುಡಿಯಲು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಬೇಸಿಗೆಯಲ್ಲಿ ಕಬ್ಬಿನ ರಸ ಸೇವಿಸುವುದರಿಂದ ದೇಹವು ಹೈಡ್ರೇಟೆಡ್ ಆಗಿರುವುದರೊಂದಿಗೆ  ತಂಪಾಗಿರುತ್ತದೆ. ಇದು ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರ ಸೇವನೆಯು ಅನೇಕ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ, ಕೆಲವು ಜನರು ಕಬ್ಬಿನ ರಸವನ್ನು ಕುಡಿಯುವಂತಿಲ್ಲ.   

Add Zee News as a Preferred Source

ಶೀತ ಮತ್ತು ಜ್ವರ ಇದ್ದಾಗ : 
ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರೆ, ಕಬ್ಬಿನ ರಸವನ್ನು ಕುಡಿಯಬೇಡಿ. ಕಬ್ಬು ತಂಪಾಗಿಸುವ ಪರಿಣಾಮವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಶೀತ ಮತ್ತು ಕೆಮ್ಮಿನ ಸಮಸ್ಯೆ ಹೆಚ್ಚಾಗುತ್ತದೆ. ಇದಲ್ಲದೆ, ಇದು ಪಾಲಿಸೊಸನಾಲ್ ಎಂಬ ಅಂಶವನ್ನು ಹೊಂದಿದ್ದು, ಇದು ತಲೆನೋವಿಗೆ ಕಾರಣವಾಗಬಹುದು.  

ಇದನ್ನೂ ಓದಿ : ಹಸಿ ಈರುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ: ಉಳ್ಳಾಗಡ್ಡಿ ತಿನ್ನುವ ಸರಿಯಾದ ಸಮಯ ಯಾವುದು?

ಬೊಜ್ಜು ಹೆಚ್ಚಾಗಬಹುದು :
ಬೊಜ್ಜು ಇರುವವರು ಕಬ್ಬಿನ ರಸ ಸೇವಿಸಬಾರದು. ಇದರಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲೋರಿಗಳು ಮತ್ತು ಸಕ್ಕರೆ ಇದ್ದು, ಇದು ನಿಮ್ಮ ತೂಕವನ್ನು ವೇಗವಾಗಿ ಹೆಚ್ಚಿಸುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಬ್ಬಿಣ ಹಾಲನ್ನು ಮುಟ್ಟಿಯೂ ನೋಡಬಾರದು. 

ಜೀರ್ಣಕಾರಿ ಸಮಸ್ಯೆಗಳು : 
ಜೀರ್ಣಕ್ರಿಯೆಯ ಸಮಸ್ಯೆ ಇರುವವರು ಕಬ್ಬಿನ ರಸ ಸೇವಿಸಬಾರದು. ಇದು ಪೋಲಿಕೊಸನಾಲ್ ಎಂಬ ಅಂಶವನ್ನು ಹೊಂದಿದ್ದು, ಇದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದಂತಹ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. 

ಮಧುಮೇಹ ರೋಗಿಗಳು ಸೇವಿಸಲೇಬಾರದು : 
ಮಧುಮೇಹ ರೋಗಿಯಾಗಿದ್ದರೆ, ಕಬ್ಬಿನ ರಸವನ್ನು ಸೇವಿಸಬಾರದು. ಇದರ ಗ್ಲೈಸೆಮಿಕ್ ಸೂಚ್ಯಂಕ ಹೆಚ್ಚಾಗಿದ್ದು, ರಕ್ತದಲ್ಲಿನ ಸಕ್ಕರೆಯನ್ನು ವೇಗವಾಗಿ ಹೆಚ್ಚಿಸುತ್ತದೆ. 

ಇದನ್ನೂ ಓದಿ : ಎಷ್ಟೇ ಆಸೆಯಾಗಿದ್ರೂ ಸರಿ... ಈ ಕಾಯಿಲೆ ಇದ್ದವರು ಪಪ್ಪಾಯಿ ಹಣ್ಣನ್ನು ತಪ್ಪಿಯೂ ತಿನ್ನಬಾರದು!

ನಿದ್ರಾಹೀನತೆಯ ಸಮಸ್ಯೆ : 
ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಕುಡಿಯಬಾರದು.  ಇದರಲ್ಲಿರುವ ಪೋಲಿಕೊಸನಾಲ್ ತಲೆತಿರುಗುವಿಕೆ ಮತ್ತು ನಿದ್ರಾಹೀನತೆಗೆ ಕಾರಣವಾಗಬಹುದು.ಮೊದಲೇ ನಿದ್ರಾಹೀನತೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು.

(ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಇದನ್ನು ಜೀ ನ್ಯೂಸ್ ಕನ್ನಡ ಅನುಮೋದಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News