Health Tips: ದಾಳಿಂಬೆ ಒಂದು ಅದ್ಭುತ ಹಣ್ಣು. ಇದು ರುಚಿಯಲ್ಲಿ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಲ್ಲಿಯೂ ಅದ್ಭುತವಾಗಿದೆ. ಇದರಲ್ಲಿ ಹಲವು ಪೋಷಕಾಂಶಗಳು ಅಡಗಿವೆ. ಇವುಗಳನ್ನು ಏಳು ದಿನಗಳ ಕಾಲ ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೇ ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ದಾಳಿಂಬೆ ಹಣ್ಣು ಸಹಕಾರಿ.. ಜೊತೆಗೆ ದಾಳಿಂಬೆಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ದಾಳಿಂಬೆ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುವುದಲ್ಲದೇ, ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಒಳ್ಳೆಯದು. ಇದರಲ್ಲಿ ಅಡಗಿರುವ ನಾರು ಹೊಟ್ಟೆ ತುಂಬಿದ ಭಾವನೆಯನ್ನು ಮೂಡಿಸಲು ಸಹಾಯ ಮಾಡುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ತೂಕವನ್ನೂ ಇಳಿಸಿಕೊಳ್ಳಬಹುದು.. ಈ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಒಳ್ಳೆಯದು. ಇವು ಸುಕ್ಕುಗಳು ಮತ್ತು ಮೊಡವೆಗಳನ್ನು ತಡೆಯುತ್ತವೆ ಮತ್ತು ಚರ್ಮವನ್ನು ಯೌವ್ವನದಿಂದ ಇಡುತ್ತವೆ.
ಇದನ್ನೂ ಓದಿ : ರಾಜ್ಯ ಚಾಂಪಿಯನ್‌ಶಿಪ್ ಸುತ್ತಿನ ಏಳನೇ ಸಂಚಿಕೆ.. 4 ಬಲಿಷ್ಟ ತಂಡಗಳ ಮುಖಾಮುಖಿ!
ಈ ಕೆಂಪಾದ ಹಣ್ಣಿನಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಕೂದಲಿನ ಆರೋಗ್ಯಕ್ಕೆ ಒಳ್ಳೆಯದು. ಮತ್ತು ಇದರಲ್ಲಿರುವ ಕಬ್ಬಿಣವು ರಕ್ತಹೀನತೆಯನ್ನು ತಡೆದು, ಮೆದುಳಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ. ದಾಳಿಂಬೆಯಲ್ಲಿರುವ ಪೊಟ್ಯಾಸಿಯಮ್ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮತ್ತು ಇದರಲ್ಲಿರುವ ಮೆಗ್ನೀಸಿಯಮ್ ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು. ವಿಶೇಷವಾಗಿ ದಾಳಿಂಬೆ ಹಣ್ಣು ಪೋಷಕಾಂಶಗಳ ನಿಧಿಯಾಗಿದ್ದು, ಮಕ್ಕಳಾಗದೇ ಇದ್ದವರು ಈ ಹಣ್ಣನ್ನು ದಿನಕ್ಕೊಂದು ತಿಂದರೇ ಪೋಷಕರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.
ದಾಳಿಂಬೆ ತಿನ್ನುವಾಗ ನೆನಪಿಡಬೇಕಾದ ವಿಷಯಗಳು:
* ದಾಳಿಂಬೆಯನ್ನು ಅತಿಯಾಗಿ ತಿನ್ನುವುದರಿಂದ ಅಜೀರ್ಣ ಮತ್ತು ಅತಿಸಾರದಂತಹ ಸಮಸ್ಯೆಗಳು ಉಂಟಾಗಬಹುದು.
* ದಾಳಿಂಬೆ ರಸವನ್ನು ಅತಿಯಾಗಿ ಕುಡಿಯುವುದರಿಂದ ಹಲ್ಲು ಹುಳುಕಾಗಬಹುದು.
* ಮಧುಮೇಹ ಇರುವವರು ದಾಳಿಂಬೆ ತಿನ್ನುವಾಗ ಜಾಗರೂಕರಾಗಿರಬೇಕು.
ಇದನ್ನೂ ಓದಿ : ರಾಜ್ಯ ಚಾಂಪಿಯನ್‌ಶಿಪ್ ಸುತ್ತಿನ ಏಳನೇ ಸಂಚಿಕೆ.. 4 ಬಲಿಷ್ಟ ತಂಡಗಳ ಮುಖಾಮುಖಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









