ಹೃದಯಾಘಾತ ಮತ್ತು ಕ್ಯಾನ್ಸರ್ ನಂತಹ ರೋಗಗಳನ್ನು ದೂರ ಸರಿಸುತ್ತದೆ ಈ ಒಂದು ಧಾನ್ಯ

Health Benefits of Quinoa:ನಮ್ಮ ದೈನಂದಿನ ಆಹಾರದಲ್ಲಿ ಸಿರಿಧಾನ್ಯಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ.  ಆರೋಗ್ಯವಾಗಿರಲು ಬಯಸುವುದಾದರೆ ದೈನಂದಿನ ಆಹಾರದಲ್ಲಿ ಕೆಲವು ಧಾನ್ಯಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. 

Written by - Ranjitha R K | Last Updated : Jan 10, 2023, 11:12 AM IST
  • ಆಹಾರ, ಪಾನೀಯ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ.
  • ಕ್ವಿನೋವಾ ಚಳಿಗಾಲದ ಸೂಪರ್ ಫುಡ್
  • ಇದು ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ತಡೆಯುತ್ತದೆ.
ಹೃದಯಾಘಾತ ಮತ್ತು ಕ್ಯಾನ್ಸರ್ ನಂತಹ ರೋಗಗಳನ್ನು ದೂರ ಸರಿಸುತ್ತದೆ ಈ ಒಂದು ಧಾನ್ಯ  title=

Health Benefits of Quinoa : ಯಾವುದೇ ಆಹಾರವಾಗಲೀ  ಪಾನೀಯವಾಗಲಿ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ನಮ್ಮ ದೈನಂದಿನ ಆಹಾರದಲ್ಲಿ ಸಿರಿಧಾನ್ಯಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ.  ಆರೋಗ್ಯವಾಗಿರಲು ಬಯಸುವುದಾದರೆ ದೈನಂದಿನ ಆಹಾರದಲ್ಲಿ ಕೆಲವು ಧಾನ್ಯಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಕ್ವಿನೋವಾ ಅಂತಹ ಪೋಷಕಾಂಶ-ಭರಿತ ಧಾನ್ಯಗಳಲ್ಲಿ ಒಂದು. ಇದನ್ನು ಚಳಿಗಾಲದ ಸೂಪರ್ ಫುಡ್ ಎಂದು ಕೂಡಾ ಕರೆಯಲಾಗುತ್ತದೆ. ಕ್ವಿನೋವಾದಲ್ಲಿ ಫೈಬರ್, ವಿಟಮಿನ್ ಬಿ , ವಿಟಮಿನ್ ಇ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ರಂಜಕದಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿರುವ ಪೋಷಕಾಂಶಗಳು ಹೃದಯಾಘಾತ ಮತ್ತು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ತಡೆಯುತ್ತದೆ. 

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ : 
ಒಮೆಗಾ 3 ಕೊಬ್ಬಿನಾಮ್ಲಗಳು ಮತ್ತು ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕ್ವಿನೋವಾದಲ್ಲಿವೆ. ಕ್ವಿನೋವಾ ಹೃದ್ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇವು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

ಇದನ್ನೂ ಓದಿ : Health Tips: ಬಿಪಿ-ಶುಗರ್ ಅಷ್ಟೇ ಅಲ್ಲ ಕ್ಯಾನ್ಸರ್ ರೋಗಿಗಳಿಗೂ ತುಂಬಾ ಲಾಭಕಾರಿ ಈ ಹಸಿರು ತರಕಾರಿ

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ :
ಕ್ವಿನೋವಾ ಜೀರ್ಣಕ್ರಿಯೆಗೆ ಪ್ರಯೋಜನಕಾರಿ. ಇದರಲ್ಲಿ ಫೈಬರ್ ಅಂಶ ಹೇರಳವಾಗಿರುತ್ತದೆ. ಇದನ್ನು ಸೇವಿಸುವುದರಿಂದ ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳು ದೂರವಾಗುತ್ತವೆ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇದ್ದರೆ, ನಿಮ್ಮ ಆಹಾರದ ಮೆನುವಿನಲ್ಲಿ ಕ್ವಿನೋವಾಕ್ಕೆ ಒಂದು ಜಾಗವಿರಲಿ.

ಕ್ಯಾನ್ಸರ್ ಗೆ ಪರಿಹಾರ ಕ್ವಿನೋವಾ :
ಕ್ವಿನೋವಾ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳನ್ನು ಗುಣಪಡಿಸುವ ಕೆಲಸ ಮಾಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ವಿನೋವಾ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಪ್ರಯೋಜನಕಾರಿಯಾಗಿದೆ. 

ಮೂಳೆಗಳನ್ನು ಬಲಪಡಿಸುತ್ತದೆ :
ಪ್ರೋಟೀನ್, ಅಮೈನೋ ಆಮ್ಲಗಳು, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ರಂಜಕದಂತಹ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸಲು  ಸಹಾಯ ಮಾಡುತ್ತವೆ. ಕ್ವಿನೋವಾವನ್ನು ತಿನ್ನುವ ಮೂಲಕ ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳ ಅಪಾಯವನ್ನು ತೆಗೆದುಹಾಕುತ್ತದೆ. 

ಇದನ್ನೂ ಓದಿ : Soaked Figs Benefits: ನೆನೆಹಾಕಿದ ಅಂಜೂರ ಸೇವನೆಯಿಂದಾಗುವ ಲಾಭಗಳು ನಿಮಗೆ ತಿಳಿದಿವೆಯೇ?

ರಕ್ತಹೀನತೆಯ ಅಪಾಯವನ್ನು ನಿವಾರಿಸುತ್ತದೆ :
ಈ ಧಾನ್ಯವು ಕಬ್ಬಿಣದ ಅಂಶದಲ್ಲಿ ಸಮೃದ್ಧವಾಗಿದೆ. ಕ್ವಿನೋವಾ ಸೇವನೆಯು ದೇಹದಲ್ಲಿನ ರಕ್ತಹೀನತೆಯನ್ನು ಹೋಗಲಾಡಿಸುತ್ತದೆ. ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಕಬ್ಬಿಣದ ಅಂಶದ ಕೊರತೆಯಿದ್ದರೆ ಕ್ವಿನೋವಾ ಸೇವನೆ ಪರಿಹಾರ ನೀಡುತ್ತದೆ.  

 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News