Ridge Gourd for weight loss: ಹೀರೆಕಾಯಿ ಫೈಬರ್‌ನಲ್ಲಿ ಸಮೃದ್ಧವಾದ ತರಕಾರಿಯಾಗಿದೆ. ಹೀರೆಕಾಯಿಯಲ್ಲಿ ವಿಟಮಿನ್ ಸಿ, ಕಬ್ಬಿಣಾಂಶ ಮತ್ತು ಇತರ ಖನಿಜಗಳು ಕಂಡುಬರುತ್ತವೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಹೀರೆಕಾಯಿ ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೆ ಹೀರೆಕಾಯಿ ಸಾಕಷ್ಟು ಪ್ರಯೋಜನಕಾರಿಯಾಗಿದೆ. 


COMMERCIAL BREAK
SCROLL TO CONTINUE READING

ತೂಕ ಇಳಿಕೆ : 


ಹೀರೆಕಾಯಿ ಕಡಿಮೆ ಕ್ಯಾಲೋರಿ, ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಇದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಆಹಾರದ ಫೈಬರ್‌ನಲ್ಲಿ ಸಮೃದ್ಧವಾಗಿದೆ. ಹೀರೆಕಾಯಿ ತಿಂದರೆ ಬಹಳ ಹೊತ್ತಿನ ವರೆಗೆ ಹಸಿವಾಗುವುದಿಲ್ಲ. ಇದರಿಂದ ತೂಕ ಕೂಡ ಸುಲಭವಾಗಿ ಕಡಿಮೆಯಾಗುತ್ತದೆ.


ಇದನ್ನೂ ಓದಿ: Oral health: ಹಲ್ಲು ಮತ್ತು ವಸಡುಗಳ ಆರೋಗ್ಯಕ್ಕಾಗಿ ಈ ಆಹಾರಗಳನ್ನು ಸೇವಿಸಿ!


ರೋಗನಿರೋಧಕ ಶಕ್ತಿ ವೃದ್ಧಿ: 


ಹೀರೆಕಾಯಿ ಯಲ್ಲಿ ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಸತುವು ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇವು ಸಹಾಯ ಮಾಡುತ್ತವೆ. ಹೀರೆಕಾಯಿ ಕಣ್ಣು, ಯಕೃತ್ತು, ಹೊಟ್ಟೆ ಮತ್ತು ಮೂತ್ರಪಿಂಡದ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.  


ಹೃದಯದ ಆರೋಗ್ಯವನ್ನು ಕಾಪಾಡುತ್ತದೆ:


ಹೀರೆಕಾಯಿ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿದೆ. ಇದು ಹೃದಯರಕ್ತನಾಳದ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಹೀರೆಕಾಯಿ ಹೆಚ್ಚಿನ ಶೇಕಡಾವಾರು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. 


ಮಲಬದ್ಧತೆಗೆ ಮನೆಮದ್ದು : 


ಹೀರೆಕಾಯಿಯಲ್ಲಿ ನಾರಿನಂಶ ಹೇರಳವಾಗಿರುತ್ತದೆ. ಇದು ಆಹಾರದ ಫೈಬರ್ ಅನ್ನು ಹೊಂದಿರುತ್ತದೆ. ಇದರಿಂದ ಮಲಬದ್ಧತೆ ಉಂಟಾಗುವುದಿಲ್ಲ. ಇದು ಉತ್ತಮ ಕರುಳಿನ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಹೀರೆಕಾಯಿ ಮಲಬದ್ಧತೆಗೆ ಕಾರಣವಾಗುವ ಜೀರ್ಣಕಾರಿ ಸಮಸ್ಯೆಗಳನ್ನು ತಪ್ಪಿಸುತ್ತದೆ.


ಇದನ್ನೂ ಓದಿ: ಸೌತೆಕಾಯಿ ರಸಕ್ಕೆ ಇದನ್ನು ಬೆರೆಸಿ ಕುಡಿದರೆ ಸಾಕು.. ಬ್ಲಡ್‌ ಶುಗರ್‌ ಕೂಡಲೇ ಕಂಟ್ರೋಲ್‌ ಆಗುವುದು 


ಮಧುಮೇಹ ನಿಯಂತ್ರಣ : 


ಮಧುಮೇಹ ಹೊಂದಿರುವ ಜನರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬೇಕು. ಇದಕ್ಕಾಗಿ ವಿಶೇಷ ಆಹಾರ ಪದ್ಧತಿ ಅನುಸರಿಸಬೇಕು. ಹೀರೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೀರೆಕಾಯಿ ಮಧುಮೇಹಿಗಳಲ್ಲಿ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ. ದೇಹದ ಚಯಾಪಚಯ ದರವನ್ನು ಹೆಚ್ಚಿಸುತ್ತದೆ.


ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.