ಕೊಲೆಸ್ಟ್ರಾಲ್ ಅಧಿಕವಾಗಿದ್ದಾಗ ತುಪ್ಪ ತಿನ್ನಬಹುದೇ ? ವೈದ್ಯರು ಹೇಳುವುದೇನು ?

  Ghee in High Cholesterol:ಆರೋಗ್ಯ ಲಾಭಗಳಿದ್ದರೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿದ್ದರೆ ತುಪ್ಪವನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಜನರಲ್ಲಿ ಸಾಮಾನ್ಯವಾಗಿ ಏಳುತ್ತದೆ. 

Written by - Ranjitha R K | Last Updated : Oct 3, 2022, 02:07 PM IST
  • ತುಪ್ಪವನ್ನು ಆಯುರ್ವೇದದಲ್ಲಿ ಔಷಧವಾಗಿ ಬಳಸಲಾಗುತ್ತದೆ
  • ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದಾಗ ತುಪ್ಪವನ್ನು ತಿನ್ನಬಹುದೇ?
  • ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಗಳಿವೆ
ಕೊಲೆಸ್ಟ್ರಾಲ್  ಅಧಿಕವಾಗಿದ್ದಾಗ ತುಪ್ಪ ತಿನ್ನಬಹುದೇ ? ವೈದ್ಯರು ಹೇಳುವುದೇನು ?  title=
Ghee in Cholesterol (file photo)

Ghee in High Cholesterol : ಅನೇಕ ರೀತಿಯ ವಿಟಮಿನ್‌ಗಳು, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಜೊತೆಗೆ, ಆರೋಗ್ಯಕರ ಕೊಬ್ಬು ತುಪ್ಪದಲ್ಲಿ ಕಂಡುಬರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತುಪ್ಪ ತಿನ್ನುವುದರಿಂದ ದೇಹಕ್ಕೆ ಶಕ್ತಿ ಸಿಗುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯಿಂದ ಚರ್ಮದವರೆಗಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ಇಷ್ಟೆಲ್ಲಾ ಆರೋಗ್ಯ ಲಾಭಗಳಿದ್ದರೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿದ್ದರೆ ತುಪ್ಪವನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಜನರಲ್ಲಿ ಸಾಮಾನ್ಯವಾಗಿ ಏಳುತ್ತದೆ. 

ಆಯುರ್ವೇದದಲ್ಲಿ ಔಷಧವಾಗಿ ಬಳಸಲಾಗುತ್ತದೆ : 
ತುಪ್ಪದಲ್ಲಿರುವ ಪೋಷಕಾಂಶಗಳು ಮತ್ತು ವಿಶಿಷ್ಟ ಗುಣಗಳಿಂದಾಗಿ ಇದನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಲಾಗುತ್ತದೆ. ತುಪ್ಪದಲ್ಲಿರುವ ಆರೋಗ್ಯಕರ ಕೊಬ್ಬು ಹೃದಯಕ್ಕೆ ಮಾತ್ರವಲ್ಲ, ಜೀರ್ಣಕ್ರಿಯೆಯನ್ನು ಉತ್ತಮವಾಗಿಡಲು ಕೂಡಾ ಪ್ರಯೋಜನಕಾರಿಯಾಗಿದೆ. ತುಪ್ಪದ ಸೇವನೆಯು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದಕ್ಕಾಗಿ ತುಪ್ಪವನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸುವುದು ಬಹಳ ಮುಖ್ಯ.

ಇದನ್ನೂ ಓದಿ : Garlic Water Benefits : ಖಾಲಿ ಹೊಟ್ಟೆಯಲ್ಲಿ ಸೇವಿಸಿ ಬೆಳ್ಳುಳ್ಳಿ ನೀರು : ನಿಯಂತ್ರಣದಲ್ಲಿರುತ್ತದೆ BP

ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇದ್ದಾಗ ತುಪ್ಪವನ್ನು ತಿನ್ನಬಹುದೇ?:
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಕೂಡ ತುಪ್ಪವನ್ನು ಸೇವಿಸಬಹುದು. ಆದರೆ, ಸಮತೋಲಿತ ಪ್ರಮಾಣದಲ್ಲಿ ತುಪ್ಪವನ್ನು ತೆಗೆದುಕೊಳ್ಳಬೇಕಾಗುತ್ತದೆ. ಅಧಿಕ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿರುವವರು ದಿನಕ್ಕೆ 2 ರಿಂದ 3 ಚಮಚ ತುಪ್ಪವನ್ನು ತಿನ್ನಬಹುದು. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವುದರ ಜೊತೆಗೆ ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಗಳಿವೆ : 
ಪ್ರತಿಯೊಬ್ಬ ಮನುಷ್ಯನ ದೇಹದಲ್ಲಿ 2 ವಿಧದ ಕೊಲೆಸ್ಟ್ರಾಲ್ ಇರುತ್ತದೆ.   ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ತಜ್ಞರ ಪ್ರಕಾರ, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ (LDL),ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್ (HDL). ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಅಪಧಮನಿಗಳು ಬ್ಲಾಕ್ ಆಗುತ್ತವೆ ಮತ್ತು ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ. ಈ ಕಾರಣದಿಂದಾಗಿ, ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ.

ಇದನ್ನೂ ಓದಿ : Ghee Benefits : ತೂಕ ಇಳಿಕೆಗೆ ಸೇವಿಸ ತುಪ್ಪ, ಅಲ್ಲದೆ, ಈ 15 ಪ್ರಯೋಜನಗಳು!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News