Medicine After Drinking Alcohol : ಪ್ರಸ್ತುತ ಮದ್ಯ ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅತಿಯಾಗಿ ಆಲ್ಕೋಹಾಲ್ ಸೇವನೆಯು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ, ಮದ್ಯಪಾನ ಮಾಡಿದ ನಂತರ ಮಾಡಬಾರದ ಕೆಲವು ಕೆಲಸಗಳಿವೆ. ಇದರಿಂದ ದೇಹಕ್ಕೆ ಹಾನಿಯಾಗುತ್ತದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..


COMMERCIAL BREAK
SCROLL TO CONTINUE READING

ಮದ್ಯಪಾನದಿಂದ ಆರೋಗ್ಯ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲೂ ಯುವಕರು ಕೂಡ ಈ ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ. ಹೀಗಿರುವಾಗ ಕೆಲವರು ಮದ್ಯ ಸೇವಿಸಿದ ನಂತರ ಕೆಲವು ತಪ್ಪುಗಳನ್ನು ಮಾಡುತ್ತಿದ್ದು, ಆರೋಗ್ಯ ಕಾಳಜಿ ಮರೆಯುತ್ತಿದ್ದಾರೆ.. ವಿಶೇಷವಾಗಿ ಮದ್ಯ ಸೇವನೆ ನಂತರ ಕೆಲವರು ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಹೀಗೆ ಮಾಡುವುದರಿಂದ ಆಗುವ ಅನನುಕೂಲಗಳೇನು ಎಂಬುದನ್ನು ತಿಳಿದುಕೊಳ್ಳೋಣ.


ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಮೂಲಂಗಿ ತಿಂದ್ರೆ ಸಿಗುತ್ತೆ ಈ ಅದ್ಭುತ ಆರೋಗ್ಯ ಪ್ರಯೋಜನಗಳು..!


ಕುಡಿದ ನಂತರ ಔಷಧಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ. ಇದು ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಯಾವುದೇ ರೀತಿಯ ಆಲ್ಕೋಹಾಲ್ ಸೇವಿಸಿದ ನಂತರ ಮಾತ್ರೆ ಸೇವನೆ ಅಪಾಯಕಾರಿ. ಕುಡಿದ ನಂತರ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಮದ್ಯ ಸೇವಿಸಿದರೆ ಅದು ನಮ್ಮ ದೇಹದಲ್ಲಿ ಕನಿಷ್ಠ 25 ಗಂಟೆಗಳ ಕಾಲ ಇರುತ್ತದೆ ಎನ್ನುತ್ತಾರೆ ತಜ್ಞರು. 


ಒಂದು ವೇಳೆ ಮಾತ್ರೆ ತೆಗೆದುಕೊಂಡರೆ, ದೇಹ ದುರ್ಬಲವಾಗುತ್ತದೆ. ಇದಲ್ಲದೆ, ಇದು ವಾಂತಿ, ತಲೆತಿರುಗುವಿಕೆ, ತಲೆನೋವು, ಹೊಟ್ಟೆ ನೋವು ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಲ್ಲದೆ, ಯಕೃತ್ತಿನ ಕಾಯಿಲೆ ಮತ್ತು ಹುಣ್ಣುಗಳಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ನೀವು ಕುಡಿದ ತಕ್ಷಣ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರೆ ಇದನ್ನು ನಿಲ್ಲಿಸಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.