Bad Cholesterol: ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ಸಾಮಾನ್ಯ ಸ್ಥಿತಿಗೆ ತರಲು ಇಂದಿನಿಂದಲೇ ಈ ತರಕಾರಿಗಳ ಸೇವನೆ ಆರಂಭಿಸಿ!

Vegetables To Control Bad Cholesterol - ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಅನೇಕ ಕಾಯಿಲೆಗಳು ನಮ್ಮನ್ನು ಸುತ್ತುವರೆಯುತ್ತವೆ. ಹೀಗಾಗಿ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಯಾವ ತರಕಾರಿಗಳನ್ನು ಸೇರಿಸಬೇಕು  ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಲು ಪ್ರಯತ್ನಿಸೋಣ ಬನ್ನಿ,  

Written by - Nitin Tabib | Last Updated : Apr 30, 2023, 09:42 PM IST
  • ನಾವು ಸೇವಿಸುವ ಅನೇಕ ಆಹಾರ ಪದಾರ್ಥಗಳಲ್ಲಿ ಎಣ್ಣೆಯ ಪ್ರಮಾಣವು ಅಧಿಕವಾಗಿರುತ್ತದೆ.
  • ಈ ಕಾರಣದಿಂದಾಗಿ, ರಕ್ತನಾಳಗಳಲ್ಲಿ ಕೊಬ್ಬು ಬೆಳೆಯಲು ಪ್ರಾರಂಭಿಸುತ್ತದೆ.
  • ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕೆಲ ಸಂಗತಿಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬೇಕು.
Bad Cholesterol: ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ಸಾಮಾನ್ಯ ಸ್ಥಿತಿಗೆ ತರಲು ಇಂದಿನಿಂದಲೇ ಈ ತರಕಾರಿಗಳ ಸೇವನೆ ಆರಂಭಿಸಿ! title=
ಕೊಲೆಸ್ಟ್ರಾಲ್ ನಿಯಂತ್ರಿಸುವ ತರಕಾರಿಗಳು!

Cholesterol Control Vegetables: ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಹಲವು ಕಾಯಿಲೆಗಳು ನಮ್ಮನ್ನು ಸುತ್ತುವರೆಯುತ್ತವೆ. ಕೊಲೆಸ್ಟ್ರಾಲ್ ಹೆಚ್ಚಾದ ತಕ್ಷಣ, ಅಧಿಕ ರಕ್ತದೊತ್ತಡ, ಮಧುಮೇಹದಂತಹ ಸಮಸ್ಯೆಗಳು ಮನುಷ್ಯರನ್ನು ತಮ್ಮ ಹಿಡಿತದಲ್ಲಿ ತೆಗೆದುಕೊಳ್ಳಲು ಪ್ರಾರಂಭಿಸುತ್ತವೆ. ಹೀಗಾಗಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ತುಂಬಾ ಮುಖ್ಯ. ಇದೇ ವೇಳೆ ನಾವು ಸೇವಿಸುವ ಅನೇಕ ಆಹಾರ ಪದಾರ್ಥಗಳಲ್ಲಿ ಎಣ್ಣೆಯ ಪ್ರಮಾಣವು ಅಧಿಕವಾಗಿರುತ್ತದೆ. ಈ ಕಾರಣದಿಂದಾಗಿ, ರಕ್ತನಾಳಗಳಲ್ಲಿ ಕೊಬ್ಬು ಬೆಳೆಯಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕೆಲ ಸಂಗತಿಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬೇಕು. ನಿಮ್ಮ ಆಹಾರದಲ್ಲಿ ಯಾವ ತರಕಾರಿಗಳನ್ನು ಶಾಮೀಲುಗೊಳಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣಕ್ಕೆ ತರಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಈ ತರಕಾರಿಗಳನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ.
1. ಬದನೆಕಾಯಿ ಸೇವಿಸಿ 

ನಮ್ಮಲ್ಲಿ ಹಲವು ಜನರಿಗೆ ಬದನೆಕಾಯಿ ಅಂದರೆ ತುಂಬಾ ಇಷ್ಟದ ತರಕಾರಿಯಾಗಿದೆ. ಇನ್ನೊಂದೆಡೆ ಬದನೆಕಾಯಿ  ಆರೋಗ್ಯಕ್ಕೆ ಆರೋಗ್ಯದ ದೃಷ್ಟಿಯಿಂದಲೂ ಕೂಡ  ಪ್ರಯೋಜನಕಾರಿಯಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ. ಇದರಿಂದಾಗಿ ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಕೆಲಸ ಇದು ಮಾಡುತ್ತದೆ. ಆದ್ದರಿಂದ, ನಿಮ್ಮಲ್ಲಿಯೂ ಕೂಡ  ಕೊಲೆಸ್ಟ್ರಾಲ್ ಹೆಚ್ಚಾಗಿದ್ದಾರೆ, ನೀವು ಬದನೆಕಾಯಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.

2. ಬೆಂಡೆಕಾಯಿ ಸೇವನೆ
ಬೆಂಡೆಕಾಯಿ  ಎಂದರೆ ಎಲ್ಲರಿಗೂ ಇಷ್ಟವಾಗುವ ಮತ್ತೊಂದು ತರಕಾರಿ. ಇದರಲ್ಲಿ ಹೇರಳ ಪ್ರಮಾಣದಲ್ಲಿ ಫೈಬರ್ ಕಂಡುಬರುತ್ತದೆ. ಈ ಕಾರಣದಿಂದಾಗಿ, ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಬೆಂಡೆಕಾಯಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.

3. ಬೆಳ್ಳುಳ್ಳಿ ಸೇವನೆ
ಬೆಳ್ಳುಳ್ಳಿಯು ಆಂಟಿ ಹೈಪರ್ಲಿಪಿಡೆಮಿಯಾವನ್ನು ಹೊಂದಿದೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಹೀಗಾಗಿ, ನೀವು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಲು ಬಯಸಿದರೆ, ಖಂಡಿತವಾಗಿಯೂ ಬೆಳ್ಳುಳ್ಳಿ ಸೇವಿಸಿ.

ಇದನ್ನೂ ಓದಿ-Fennel Syrup Benefits: ಬೇಸಿಗೆ ಕಾಲದಲ್ಲಿ ಸೌಂಫ್ ಶರ್ಬತ್ ಎಂದಾದರೂ ಟ್ರೈ ಮಾಡಿದ್ದೀರಾ?

4. ಸಲಾಡ್ ರೂಪದಲ್ಲಿ ಈರುಳ್ಳಿ ಸೇವಿಸಿ
ಅನೇಕ ಕರ್ರಿಗಳನ್ನು ತಯಾರಿಸಲು ಈರುಳ್ಳಿ ಬಳಸಲಾಗುತ್ತದೆ. ಆದರೆ ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಇದು ಫೈಬರ್ ಅನ್ನು ಹೊಂದಿರುತ್ತದೆ, ಆದ್ದರಿಂದ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ನಿಮಗೂ ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ ಖಂಡಿತಾ ಈರುಳ್ಳಿಯನ್ನು ಆಹಾರದಲ್ಲಿ ಸೇರಿಸಿ.

ಇದನ್ನೂ  ಓದಿ-holesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ನಿರ್ಮೂಲನೆಗೆ ಇಲ್ಲಿವೆ ಕೆಲ ಸೂಪರ್ ಡ್ರಿಂಕ್ ಗಳು!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News