ಚಳಿಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಈ ರೋಗಗಳಿಂದ ದೂರವಿರಿ!

ಪ್ರತಿಯೊಬ್ಬರೂ ಚಳಿಗಾಲದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಏಕೆಂದರೆ ಚಳಿಗಾಲದಲ್ಲಿ ಸ್ವಲ್ಪ ಅಜಾಗರೂಕತೆಯಿಂದ ಇದ್ದರೂ ಅದು ನಿಮಗೆ ಅಪಾಯ ತಂದೊಡ್ಡಬಹುದು.

Last Updated : Dec 24, 2019, 12:25 PM IST
ಚಳಿಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಈ ರೋಗಗಳಿಂದ ದೂರವಿರಿ! title=

ಬೆಂಗಳೂರು: ಕಳೆದ ಕೆಲವು ದಿನಗಳಿಂದ, ಶೀತ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ಪ್ರತಿಯೊಬ್ಬರೂ ಚಳಿಗಾಲದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಏಕೆಂದರೆ ಚಳಿಗಾಲದಲ್ಲಿ ಸ್ವಲ್ಪ ಅಜಾಗರೂಕತೆಯಿಂದ ಇದ್ದರೂ ಅದು ನಿಮಗೆ ಅಪಾಯ ತಂದೊಡ್ಡಬಹುದು. ಅಂತಹ ಪರಿಸ್ಥಿತಿಯಲ್ಲಿ, ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರ ಮೂಲಕ ಮತ್ತು ವೈದ್ಯರ ಸಲಹೆಯನ್ನು ಅನುಸರಿಸುವ ಮೂಲಕ ಮಾತ್ರ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ.

ಚಳಿಗಾಲದಲ್ಲಿ ಆರೋಗ್ಯ ರಕ್ಷಣೆಗಾಗಿ ವೈದ್ಯರು ಕೆಲವು ಸಲಹೆಗಳನ್ನು ಸೂಚಿಸಿದ್ದಾರೆ. ಇವುಗಳು ಕೆಳಕಂಡಂತಿವೆ: -
1. ನಿಮ್ಮ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ: 
ಈ ಸಮಯದಲ್ಲಿ, ಕಡಿಮೆ ಪ್ರಮಾಣದ ಉಪ್ಪನ್ನು ತೆಗೆದುಕೊಳ್ಳಿ, ಏಕೆಂದರೆ ಹೆಚ್ಚಿನ ಉಪ್ಪು ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

2. ಆಹಾರ ಪದ್ಧತಿ:
ಧಾನ್ಯಗಳು, ಓಟ್ ಮೀಲ್ ಇತ್ಯಾದಿಗಳು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ತೂಕವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಹುರಿದ ಮತ್ತು ಸ್ಯಾಚುರೇಟೆಡ್ ಆಹಾರವನ್ನು ಸೇವಿಸಬೇಡಿ. ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಅವುಗಳಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಈ ಋತುವಿನಲ್ಲಿ ರೋಗಗಳ ವಿರುದ್ಧ ಹೋರಾಡಲು ಬಹಳ ಪ್ರಯೋಜನಕಾರಿ.

3. ಕುಡಿಯುವ ನೀರಿನ ಅಭ್ಯಾಸ:
ಚಳಿಗಾಲದಲ್ಲಿ ಸಾಕಷ್ಟು ನೀರು ಕುಡಿಯಿರಿ. ಹರ್ಬಲ್-ಟೀ ಕುಡಿಯುವುದರಿಂದ ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ.

4. ನಿಮ್ಮ ತೂಕವನ್ನು ನಿಯಂತ್ರಿಸಿ:
ಸದೃಢವಾಗಿರಲು ನಿಯಮಿತವಾಗಿ ವ್ಯಾಯಾಮ ಮಾಡಿ. ವಾಕ್ ಮಾಡುವುದು ಕೂಡ ಇದು ಉತ್ತಮ ವ್ಯಾಯಾಮ. ಅಲ್ಲದೆ, ವಾಕಿಂಗ್ ಮಾಡುವುದರಿಂದ ದೇಹದಲ್ಲಿ ಉಷ್ಣತೆ ಹೆಚ್ಚಾಗುತ್ತದೆ. ದಿನಕ್ಕೆ 6-8 ಗಂಟೆಗಳ ನಿದ್ರೆ ಮಾಡಿರಿ. ಪ್ರತಿದಿನ ಕನಿಷ್ಠ 15 ನಿಮಿಷಗಳ ಕಾಲ ನಡೆಯಿರಿ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪರಿಣಾಮಕಾರಿಯಾಗಿದೆ.

5. ಹೃದ್ರೋಗಗಳನ್ನು ತಪ್ಪಿಸಲು ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ.

6. ಸಾಧ್ಯವಾದಷ್ಟು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ವಿಶೇಷವಾಗಿ ಪಾದಗಳು, ತಲೆ ಮತ್ತು ಕಿವಿಗಳಿಗೆ ಶೀತ ಆಗದಂತೆ ಎಚ್ಚರವಹಿಸಿ.
 

Trending News