ಬೆಂಗಳೂರು: ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ನ ಮಟ್ಟವು ಹೆಚ್ಚಾಗುವುದರಿಂದ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಎದುರಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾದಾಗ, ಅದು ಅಪಧಮನಿಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಹೃದಯಾಘಾತದ ಸಾಧ್ಯತೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದ್ದರಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ತುಂಬಾ ಮುಖ್ಯ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ನೀವು ಅಡುಗೆಮನೆಯಲ್ಲಿ ಇರಿಸಲಾಗಿರುವ ಮಸಾಲೆಗಳನ್ನು ಬಳಸಬಹುದು. ಹಸಿ ಶುಂಠಿಯು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಇದರಲ್ಲಿ ಜಿಂಜರಾಲ್ ಮತ್ತು ಶೋಗಾಲ್ ಎಂಬ ಉತ್ಕರ್ಷಣ ನಿರೋಧಕ ಅಂಶಗಳಿವೆ, ಇದರ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಹಸಿ ಶುಂಠಿಯನ್ನು ಹೇಗೆ ಹೇಗೆ ಬಳಸಬೇಕು ತಿಳಿದುಕೊಳ್ಳೋಣ ಬನ್ನಿ, (Health News In Kannada)


COMMERCIAL BREAK
SCROLL TO CONTINUE READING

ಹಸಿ ಶುಂಠಿ ಮತ್ತು ನಿಂಬೆ ಚಹಾ
ಹಸಿ ಶುಂಠಿ ಮತ್ತು ನಿಂಬೆಯಿಂದ ತಯಾರಿಸಿದ ಚಹಾವನ್ನು ಕುಡಿಯುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕ್ರಮೇಣ ನಿಮ್ಮ ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದನ್ನು ತಯಾರಿಸಲು, 1 ಕಪ್ ನೀರನ್ನು ತೆಗೆದುಕೊಂಡು ಅದಕ್ಕೆ ಶುಂಠಿ ಮತ್ತು ನಿಂಬೆ ರಸವನ್ನು ಬೆರೆಸಿ ಕುದಿಸಿ. ನಂತರ ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಹಸಿ ಶುಂಠಿಯನ್ನು ಖಾಲಿ ಹೊಟ್ಟೆಯಲ್ಲಿ ಅಗಿಯಿರಿ
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಹಸಿ ಶುಂಠಿಯನ್ನು ಖಾಲಿ ಹೊಟ್ಟೆ ಅಗಿಯಬಹುದು. ಇದರಿಂದ ನಿಮಗೆ ಸಾಕಷ್ಟು ಪ್ರಯೋಜನ ಸಿಗಲಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಬೆಳ್ಳುಳ್ಳಿ ಮತ್ತು ಹಸಿ ಶುಂಠಿ ಕಷಾಯ
ಬೆಳ್ಳುಳ್ಳಿ ಮತ್ತು ಶುಂಠಿಯನ್ನು ಸ್ಮ್ಯಾಶ್ ಮಾಡಿ, ಅದನ್ನು 1 ಕಪ್ ನೀರಿಗೆ ಸೇರಿಸಿ ಮತ್ತು ಚೆನ್ನಾಗಿ ಕುದಿಸಿ. ಇದರ ನಂತರ ಈ ನೀರನ್ನು ಬಿಸಿಯಾಗಿ ಕುಡಿಯಿರಿ. ಇದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಾಕಷ್ಟು ಕಡಿಮೆ ಮಾಡಬಹುದು. ಇದಲ್ಲದೆ, ರಕ್ತನಾಳಗಳನ್ನು ತೆರೆಯಲು ಇದು ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ-Taming Diabetes: ಸಕ್ಕರೆ ಕಾಯಿಲೆಯನ್ನು ಹತ್ತಿರಕ್ಕೂ ಸುಳಿದಾಡಲು ಬಿಡುವುದಿಲ್ಲ ಈ ಅಕ್ಕಿಯ ಚಹಾ, ಇಲ್ಲಿದೆ ತಯಾರಿಕೆಯ ಸರಿಯಾದ ವಿಧಾನ!

ಶುಂಠಿ ಪುಡಿಯನ್ನು ಆಹಾರದಲ್ಲಿ ಬಳಸಿ
ನೀವು ಶುಂಠಿಯನ್ನು ನೇರವಾಗಿ ಬಳಸಲು ಇಷ್ಟಪಡದಿದ್ದರೆ, ನಿಮ್ಮ ಆಹಾರದಲ್ಲಿ ಲಘುವಾಗಿ ಬೆರೆಸುವ ಮೂಲಕ ನೀವು ಶುಂಠಿ ಪುಡಿಯನ್ನು ಸೇವಿಸಬಹುದು. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ. 

ಇದನ್ನೂ ಓದಿ-High Cholesterol ನಿಯಂತ್ರಣಕ್ಕೆ ನಿಯಮಿತವಾಗಿ ಸೇವಿಸಿ ಈ ಎರಡು ಪದಾರ್ಥಗಳಿಂದ ತಯಾರಿಸಿದ ಚಹಾ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ