ಬೆಳಗ್ಗೆ ಖಾಲಿ ಹೊಟ್ಟೆ ಈ ಪದಾರ್ಥದ ನೀರು ಕುಡಿದರೆ, ಔಷಧಿ ಇಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತೆ!
Taming Diabetes: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಪ್ಪು ಕಡಲೆಬೇಳೆ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬನ್ನಿ, ಅದರ ಪ್ರಯೋಜನಗಳು ಮತ್ತು ಅದನ್ನು ಹೇಗೆ ತಯಾರಿಸಬೇಕು ಎಂಬುದನು ತಿಳಿದುಕೊಳ್ಳೋಣ ಬನ್ನಿ, (Health News In Kannada)
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಧುಮೇಹದ ಸಮಸ್ಯೆ ಜನರಲ್ಲಿ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಹಿಂದೆ ಈ ರೋಗವು ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡುಬರುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಮತ್ತು ಯುವಜನರು ಸಹ ಈ ರೋಗಕ್ಕೆ ಗುರಿಯಾಗುತ್ತಿದ್ದಾರೆ. ಮಧುಮೇಹದಲ್ಲಿ, ಮೇದೋಜ್ಜೀರಕ ಗ್ರಂಥಿಯು ಇನ್ಸುಲಿನ್ ಅನ್ನು ಸಾಕಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಗಮನಾರ್ಹ ಹೆಚ್ಚಾಗುತ್ತದೆ. ಇದನ್ನು ಸಮಯಕ್ಕೆ ನಿಯಂತ್ರಿಸದಿದ್ದರೆ, ದೇಹದ ಇತರ ಭಾಗಗಳಿಗೆ ಅದು ಹಾನಿಯನ್ನುಂಟು ಮಾಡುತ್ತದೆ. ಆದಾಗ್ಯೂ, ಆರೋಗ್ಯಕರ ಆಹಾರ ಮತ್ತು ಜೀವನಶೈಲಿಯ ಬದಲಾವಣೆಯಿಂದ ಮಧುಮೇಹವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೆಲವು ಆರೋಗ್ಯಕರ ವಸ್ತುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇಂದಿನ ಲೇಖನದಲ್ಲಿ ನಾವು ನಿಮಗೆ ಒಂದು ವಿಶೇಷ ಪಾನೀಯದ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಅದು ದಿನವಿಡೀ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. (Health News In Kannada)
ಮಧುಮೇಹ ನಿಯಂತ್ರಣಕ್ಕೆ ಕಪ್ಪು ಕಡಲೆ ನೀರು
ಕೆಲವು ಮನೆಮದ್ದುಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ ಎಂದು ಸಾಬೀತಾಗುತ್ತವೆ. ಈ ಮನೆಮದ್ದುಗಳಲ್ಲಿ ಕಪ್ಪು ಕಡಲೆ ಬೇಳೆಯೂ ಸೇರಿದೆ. ಹೌದು, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಪ್ಪು ಕಡಲೆಬೇಳೆ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಅದು ಸಹಾಯ ಮಾಡುತ್ತದೆ. ವಿಟಮಿನ್ಗಳು, ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್ಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳು ಈ ಕಾಳುಗಳಲ್ಲಿ ಕಂಡುಬರುತ್ತವೆ. ಇದಲ್ಲದೆ, ಇದು ಹೇರಳ ಪ್ರಮಾಣದಲ್ಲಿ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಕಪ್ಪು ಕಡಲೆಬೇಳೆಯ ಸೇವನೆಯು ದೇಹದಲ್ಲಿ ಹೆಚ್ಚುವರಿ ಗ್ಲೂಕೋಸ್ನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದೆ ವೇಳೆ, ಇದರಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಪಿಷ್ಟ ಮತ್ತು ಅಮೈಲೋಸ್ ಅಂಶಗಳನ್ನು ಒಳಗೊಂಡಿದೆ, ಇದು ಇನ್ಸುಲಿನ್ ಚಟುವಟಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಡಲೆಬೇಳೆ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ನೀವು ಔಷಧಿಗಳಿಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದಲ್ಲದೆ, ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು.
ಕಡಲೆ ಬೇಳೆ ನೀರು ಹೇಗೆ ತಯಾರಿಸಬೇಕು?
ರಾತ್ರಿ ಮಲಗುವ ಮುನ್ನ ಒಂದು ಹಿಡಿ ಕಡಲೆ ಬೇಳೆಯನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಮರುದಿನ ಬೆಳಗ್ಗೆ, ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ ಮತ್ತು ಕಾಳುಗಳನ್ನು ಅಗಿಯಿರಿ. ಕಡಲೆಬೇಳೆ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಕಡಲೆಬೇಳೆ ನೀರು ಕುಡಿಯುವ ಇತರ ಪ್ರಯೋಜನಗಳು
>> ಕಡಲೆ ಬೇಳೆಯಲ್ಲಿ ವಿಟಮಿನ್ ಗಳು, ಖನಿಜಾಂಶಗಳು ಮತ್ತು ಆ್ಯಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿವೆ. ನಿಯಮಿತವಾಗಿ ಕಡಲೆಬೇಳೆ ನೀರನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
>> ನೆನೆಸಿದ ಕಡಲೆಬೇಳೆ ತಿನ್ನುವುದು ಮತ್ತು ಅದರ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲವಾಗುತ್ತದೆ. ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
>> ಕಡಲೆಬೇಳೆ ನೀರನ್ನು ಸೇವಿಸುವುದರಿಂದ ತೂಕ ಇಳಿಕೆ ಮಾಡಲು ಅದು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ, ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.
ಇದನ್ನೂ ಓದಿ-ತೆಂಗಿನ ಎಣ್ಣೆ ಸೇವನೆಯಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆಯಾ? ಇಲ್ಲಿ ತಿಳಿದುಕೊಳ್ಳಿ!
>> ಕಡಲೆಬೇಳೆ ಬಿ-ಕ್ಯಾರೋಟಿನ್ ಅನ್ನು ಹೊಂದಿರುತ್ತದೆ, ಇದು ಕಣ್ಣಿನ ಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ನಿಯಮಿತವಾಗಿ ಕಡಲೆ ಬೇಳೆ ನೀರನ್ನು ಕುಡಿಯುವುದರಿಂದ ದೃಷ್ಟಿ ಸುಧಾರಿಸಬಹುದು.
ಇದನ್ನೂ ಓದಿ-ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಹೊರಹಾಕಲು ಚಳಿಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಈ ಉಂಡೆ ಸೇವಿಸಿ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ