Shocking News on Tattoos: ರಾಜ್ಯ ಸರ್ಕಾರವು ಟ್ಯಾಟೂ ಹಾಕುವವರಿಗೆ ಮತ್ತು ಟ್ಯಾಟೂ ಹಾಕಿಸಿಕೊಳ್ಳುವವರಿಗೆ ಬಿಗ್ ಶಾಕ್ ಕೊಟ್ಟಿದೆ. ಟ್ಯಾಟೂ ಹಾಕಿಸಿಕೊಳ್ಳುವುದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಟ್ಯಾಟೂ ಸಂಬಂಧ ಹೊಸ ಕಾನೂನು ಜಾರಿಗೆ ತರಲು ಯೋಚಿಸಿದೆ. ಇದರನುಸಾರ ಟ್ಯಾಟೂ ಆರ್ಟಿಸ್ಟ್‌ಗಳಿಗೆ ಕೆಲವು ನಿಯಮಗಳನ್ನು ಹೇರುವ ಮೂಲಕ ಚರ್ಮದ ಕ್ಯಾನ್ಸರ್ ಮತ್ತು ಹೆಚ್ಐವಿಯಂತಹ ಸೋಂಕುಗಳ ಅಪಾಯವನ್ನು ತಡೆಯಲು ಸರ್ಕಾರ ಸೋಂಕು ಹರಡುವುದನ್ನು ತಡೆಯಲು ಹೊಸ ಕಾನೂನು ತರಲು ಯೋಚಿಸಿದೆ.
ಟ್ಯಾಟೂದಿಂದ ಬರುತ್ತಿದೆ ಹೆಚ್ಐವಿ, ಕ್ಯಾನ್ಸರ್..!
ವಾಸ್ತವವಾಗಿ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಚರ್ಮ ಕ್ಯಾನ್ಸರ್, ಹೆಚ್ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್‌ನಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿವೆ. ಇಂತಹ ಸೋಂಕುಗಳು ಹೆಚ್ಚಾಗಳು ಟ್ಯಾಟೂ ಹಾಕಿಸುವುದು ಕೂಡ ಒಂದು ಕಾರಣ ಎಂಬುದು ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಿಂದ ತಿಳಿದುಬಂದಿದೆ. ಅಷ್ಟೆಅಲ್ಲದೆ ಟ್ಯಾಟೂವನ್ನು ಹಾಕುವಾಗ ಬಳಸುವ ಬಣ್ಣದಲ್ಲಿ ಅಪಾಯಕಾರಿ ಮೆಟಲ್ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಇದು ಸಹ ಮನುಷ್ಯನ ದೇಹಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಈ ರೀತಿಯ ಮಹತ್ವದ ಹೆಜ್ಜೆ ಇಡಲು ಸಜ್ಜಾಗುತ್ತಿದೆ.
ಇದನ್ನೂ ಓದಿ- ಹೊರಗಡೆ ‘ಇಡ್ಲಿ’ತಿನ್ನೋ ಮುನ್ನ ಹುಷಾರ್..! ಕ್ಯಾನ್ಸರ್ ರೋಗಕ್ಕೆ ಆಹ್ವಾನ ನೀಡುತ್ತಂತೆ ʻಇಡ್ಲಿʼ..?
ದೇಶದಲ್ಲಿ ಟ್ಯಾಟೂಗೆ ಯಾವುದೇ ನಿಯಂತ್ರಣ ಕಾನೂನುಗಳಿಲ್ಲ. ಮೊದಲ ಬಾರಿಗೆ ರಾಜ್ಯ ಸರ್ಕಾರ ಟ್ಯಾಟೂಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವ ಮತ್ತು ಹಾಕುವವರಮೇಲೆ ಹೊಸ ಕಾನೂನು ಜಾರಿತರಲು ಯೋಜಿಸಿದೆ.
ಟ್ಯಾಟೂ ಪ್ರಿಯರಿಗೂ ಎಚ್ಚರಿಕೆ ನೀಡಿರುವ ಆರೋಗ್ಯ ಇಲಾಖೆ, ಟ್ಯಾಟೂ ಹಾಕಿಸಿಕೊಳ್ಳುವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ಪತ್ರ ಪಡೆದಿರಬೇಕು ಎಂಬ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗುತ್ತಿದೆ. ಇದೇ ವೇಳೆ ಟ್ಯಾಟೂ ಹಾಕುವರು ತಾವು ಬಳಸುವ ಬಣ್ಣ, ಕ್ಯಮಿಕಲ್, ಸೂಜಿ ಮತ್ತು ಸ್ವಚ್ಛತೆ ಕುರಿತಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಹ ಹೊಸ ಮಾರ್ಗಸೂಚಿಗಳನ್ನು ತರಲು ಸರ್ಕಾರ ಸಿದ್ಧತೆ ನಡೆಸಿದೆ.
ಇದನ್ನೂ ಓದಿ- Traffic Rules ಫಾಲೋ ಮಾಡು ಅಂದಿದ್ದಕೆ ಅ*ಶ್ಲೀಲ ಸನ್ನೆ ಮಾಡಿ ಕಾರು ಚಾಲಕ ಕಿರಿಕ್..! ವಿಡಿಯೋ ವೈರಲ್... ದೂರು ದಾಖಲು
ಟ್ಯಾಟೂ ಹಾಕುವ ಮತ್ತು ಹಾಕಿಸಿಕೊಳ್ಳುವ ವಿಷಯದ ಕುರಿತು ಹೊಸ ಕಾನೂನು ಮಾಡವ ಯೋಜನೆಯಲ್ಲಿದೆ. ಇನ್ನು ಮುಂದೆ ರಸ್ತೆಬದಿ, ಪುಟ್‌ಪಾಟ್, ಜಾತ್ರೆಗಳು ಸೇರಿದಂತೆ ಎಲ್ಲೆಂದರಲ್ಲಿ ಅವೈಜ್ಞಾನಿಕ ವಿಧಾನದಲ್ಲಿ ಹಚ್ಚೆ ಹಾಕುವವರಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









