Summer Protection: ಬೆಂಗಳೂರು: ಭಾರತ ಹವಾಮಾನ ಇಲಾಖೆ (ಐಎಂಡಿ) ಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ತಾಪಮಾನದ (heat wave) ಮುನ್ಸೂಚನೆ ನೀಡಿದ್ದು, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಟ ತಾಪಮಾನವನ್ನು ಸೂಚಿಸಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು 2024 ರ ಏಪ್ರಿಲ್ 01 ರಂದು ಬಿಡುಗಡೆ ಮಾಡಿದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್-2024ರ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿದೆ.
ಇದನ್ನೂ ಓದಿ- "ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ"
ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಹವಾಮಾನ ಇಲಾಖೆಯು ಸಲಹೆ ಮತ್ತು ಸೂಚನೆಗಳನ್ನು ನೀಡಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಮಾಹಿತಿ ಮತ್ತು ಪಾಲನೆಗಾಗಿ ಹವಾಮಾನ ಇಲಾಖೆಯ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಪ್ರಾಧಿಕಾರವು, ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12 ಗಂಟೆ ಯಿಂದ 3 ಗಂಟೆಯ ರವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು, ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು,
ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು, ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಒಆರ್‍ಎಸ್ ಗಳನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‍ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸುವುದು ಸೂಕ್ತವೆಂದು ತಿಳಿಸಲಾಗಿದೆ.
ಆಗಿಂದಾಗೆ ತಣ್ಣೀರು ಸ್ನಾನ ಮಾಡುವುದು, ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ನವರ್, ಹ್ಯಾಂಡ್ನವೆಲ್, ಹ್ಯಾಂಡ್ಯಾನ್, ಎಲೆಕ್ಯೂಲೈಟ್, ಗ್ಲೋಕೋಸ್, ಒಆರ್‍ಎಸ್‍ಗಳನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heat wave) ತಡೆಗಟ್ಟುವ ಕಿಟ್‍ಅನ್ನು ಹೊಂದಿರಬೇಕೆಂದು ತಿಳಿಸಲಾಗಿದೆ.
ಅತೀ ಹೆಚ್ಚು ತಾಪಮಾನದಿಂದ (heat wave) ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:
ಅತೀ ಹೆಚ್ಚು ತಾಪಮಾನದಿಂದ (heat wave) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (sun stroke) ಆರೋಗ್ಯದ ದುಷ್ಟರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು,
ಶಾಖ ಸಳೆತಗಳಿಂದ (Heat cramps): ಊತ ಮತ್ತು ಮೂರ್ಛೆ ಕಾಣಿಸುತ್ತದೆ, ಸಾಮಾನ್ಯವಾಗಿ 390 ಸಿ ಅಂದರೆ 1020 ಎಫ್ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ. ಶಾಖದ ಬಳಲಿಕೆಯಿಂದ ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು ಉಂಟಾಗುತ್ತದೆ.
ಶಾಖಾಘಾತ (sun stroke): ದೇಹದ ಉಷ್ಣತೆಯು 400 ಸಿ ಅಂದರೆ 1040 ಎಫ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞ ತಪ್ಪುವುದು ಉಂಟಾಗುತ್ತದೆ.
ಇದನ್ನೂ ಓದಿ- ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ನಮ್ಮ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿಎಂ
ಅತೀ ಹೆಚ್ಚು ತಾಪಮಾನ (heat wave) ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:
ಅತೀ ಹೆಚ್ಚು ತಾಪಮಾನದಿಂದ (heat wave) ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು, ಒದ್ದೆಯಾದ ಬಟ್ಟೆಯಿಂದ ಮೈ ಒರಸುವುದು, ತಂಪಾದ ಒದ್ದೆ ಬಟ್ಟಿಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‍ಎಸ್, ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ). ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪುಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು ಎಂದು ಹೇಳಲಾಗಿದೆ.
ಅತೀ ಹೆಚ್ಚು ತಾಪಮಾನಕ್ಕೆ (heat wave)ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು:
ಅತೀ ಹೆಚ್ಚು ತಾಪಮಾನಕ್ಕೆ (heat wave) ಸಂಬಂಧಿಸಿದಂತೆ ಐಎಂಡಿ ಮತ್ತು ಕೆಎಸ್‍ಎನ್‍ಡಿಎಂಸಿ ಯಿಂದ ನೀಡಿದ ಮುನ್ಸೂಚನೆ, ಎಚ್ಚರಿಕೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು, ಅತೀ ಹೆಚ್ಚು ತಾಪಮಾನದ (heat wave) ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ (heat wave) ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಐಇಸಿ ಕಾರ್ಯ ಚಟುವಟಿಕೆಗಳನ್ನು ಜಾರಿಮಾಡಬೇಕು.
ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ (heat wave) ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ, ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು. ಮಾರುಕಟ್ಟೆಗಳು, ಬಸ ನಿಲ್ದಾಣಗಳು, ಬಸ್ ಟರ್ಮಿನಲ್‍ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸುವುದು. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು, ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ಜಿಲ್ಲೆಯ ಅತೀ ಹೆಚ್ಚು ತಾಪಮಾನದ (heat wave) ಪರಿಸ್ಥಿತಿಗಳ ಬಗ್ಗೆ, ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು.
ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸುವುದು. ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ಒಆರ್ ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ (heat wave) ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್, ಏರ್‍ರ್ಕೂಲರ್‍ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ, ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಿಗ್ಗೆ ಅಥವಾ ಸಂಜೆ) ಸಮಯದಲ್ಲಿ ನಡೆಸಬೇಕು ಎಂದು ತಿಳಿಸಲಾಗಿದೆ.
ಅತೀ ಹೆಚ್ಚು ತಾಪಮಾನ (heat wave)ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ:
ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು, ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು, ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ನಡೆಸಲು ಸೂಚಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.