Spinach Benifits: ನಿಮ್ಮ ದೈನಂದಿನ ಆಹಾರದಲ್ಲಿ ಈ ಸೊಪ್ಪನ್ನು ಸೇರಿಸುವುದರಿಂದ ರೋಗದ ವಿರುದ್ಧ ಹೋರಾಡಲು ಮತ್ತು ನಿಮ್ಮ ಯೋಗಕ್ಷೇಮವನ್ನು ಹಲವು ವಿಧಗಳಲ್ಲಿ ಸುಧಾರಿಸಲು ಸಹಾಯ ಮಾಡುತ್ತದೆ. ಹಾಗಾದರೆ ಯಾವುದು ಆ ಸೊಪ್ಪು ಅಂತೀರಾ.. ಅದೇ ಪಾಲಕ್ ಸೊಪ್ಪು..
ಹೌದು ಪಾಲಕ್ ಸೊಪ್ಪು ದೇಹದ ಆರೋಗ್ಯವನ್ನು ಹೆಚ್ಚಿಸುವ ಅಗತ್ಯ ಪೋಷಕಾಂಶಗಳಿಂದ ಕೂಡಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ಮತ್ತು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುಲು ಸಹಾಯ ಮಾಡುತ್ತದೆ.. ಹಾಗಾದರೆ ಈ ಪಾಲಕ್ ಸೊಪ್ಪಿನಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ..
ಇದನ್ನೂ ಓದಿ-Diabetes: ಭಾರತದ ಯುವಜನರಲ್ಲಿ ಹೆಚ್ಚುತ್ತಿರುವ ಮಾರಕ ಸಕ್ಕರೆ ಕಾಯಿಲೆ!
ತೂಕವನ್ನು ನಿಯಂತ್ರಿಸುತ್ತದೆ: ಪಾಲಕ್ ಕಡಿಮೆ ಕ್ಯಾಲೋರಿ ಅಂಶ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿರುವುದರಿಂದ, ಆರೋಗ್ಯಕ್ಕೆ ಅತ್ಯಗತ್ಯವಾಗಿದೆ.. ಅತ್ಯಧಿಕ ಹಾರ್ಮೋನುಗಳನ್ನು ನಿಯಂತ್ರಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ..
ಕ್ಯಾನ್ಸರ್ ವಿರುದ್ಧ ರಕ್ಷಿಸುತ್ತದೆ: ಪಾಲಕ್ ಕ್ಯಾನ್ಸರ್ ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.. ಏಕೆಂದರೆ ಇದು ಡಿಎನ್‌ಎ ಸಂಶ್ಲೇಷಣೆ ಮತ್ತು ಸುಧಾರಣೆಯಲ್ಲಿ ಪಾತ್ರವಹಿಸುವ ಫೋಲೇಟ್‌ನಂತಹ ಸಂಭಾವ್ಯ ಆಂಟಿ-ಕಾರ್ಸಿನೋಜೆನಿಕ್ ಗುಣಲಕ್ಷಣಗಳಿಂದ ಕೂಡಿದೆ..
ಇದನ್ನೂ ಓದಿ-ಮಧುಮೇಹ ನಿಯಂತ್ರಣಕ್ಕೆ ನಿತ್ಯ ಬೆಳಗ್ಗೆ ಹೂವಿನ ಚಹಾ ಸೇವಿಸಿ, ಔಷಧಿ ಇಲ್ಲದೆ ಮಧುಮೇಹ ನಿಯಂತ್ರಣಕ್ಕೆ ಬರುತ್ತೆ!
ಶುಗರ್ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುತ್ತದೆ: ನೀವು ಮಧುಮೇಹ ಸಮಸ್ಯೆಯನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಪಾಲಕವನ್ನು ಸೇರಿಸಿ.. ಈ ಸೊಪ್ಪಿನಲ್ಲಿರುವ ಮೆಗ್ನೀಸಿಯಮ್ ಮನುಷ್ಯನ ಚಯಾಪಚಯ ಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ಕೊಲೆಸ್ರ್ಟಾಲ್ ಮಟ್ಟವನ್ನು ನಿಯಂತ್ರಿಸುತ್ತದೆ..
ಮೂಳೆಗಳನ್ನು ಬಲಪಡಿಸುತ್ತದೆ: ಪಾಲಕದಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ, ಇದು ಮೂಳೆಯ ಆರೋಗ್ಯಕ್ಕೆ ಪ್ರಮುಖ ಅಂಶವಾಗಿದೆ. ಈ ವಿಟಮಿನ್ ಕೆ ಯಿಂದ ಮೂಳೆಗಳ ಮುರಿತವನ್ನು ತಪ್ಪಿಸಬಹುದಾಗಿದೆ.. ಹೀಗಾಗಿ ದಿನನಿತ್ಯದ ನಿಮ್ಮ ಆಹಾರದಲ್ಲಿ ಪಾಲಕ್ ಸೇವಿಸುವುದು ಆರೋಗ್ಯವಾಗಿರಲು ಉತ್ತಮ ಮಾರ್ಗವಾಗಿದೆ..
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.