Spinach Benifits: ನಿಮ್ಮ ದೈನಂದಿನ ಆಹಾರದಲ್ಲಿ ಈ ಸೊಪ್ಪನ್ನು ಸೇರಿಸುವುದರಿಂದ ರೋಗದ ವಿರುದ್ಧ ಹೋರಾಡಲು ಮತ್ತು ನಿಮ್ಮ ಯೋಗಕ್ಷೇಮವನ್ನು ಹಲವು ವಿಧಗಳಲ್ಲಿ ಸುಧಾರಿಸಲು ಸಹಾಯ ಮಾಡುತ್ತದೆ. ಹಾಗಾದರೆ ಯಾವುದು ಆ ಸೊಪ್ಪು ಅಂತೀರಾ.. ಅದೇ ಪಾಲಕ್‌ ಸೊಪ್ಪು.. 


COMMERCIAL BREAK
SCROLL TO CONTINUE READING

ಹೌದು ಪಾಲಕ್ ಸೊಪ್ಪು ದೇಹದ ಆರೋಗ್ಯವನ್ನು ಹೆಚ್ಚಿಸುವ ಅಗತ್ಯ ಪೋಷಕಾಂಶಗಳಿಂದ ಕೂಡಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ಮತ್ತು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುಲು ಸಹಾಯ ಮಾಡುತ್ತದೆ.. ಹಾಗಾದರೆ ಈ ಪಾಲಕ್‌ ಸೊಪ್ಪಿನಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ..


ಇದನ್ನೂ ಓದಿ-Diabetes: ಭಾರತದ ಯುವಜನರಲ್ಲಿ ಹೆಚ್ಚುತ್ತಿರುವ ಮಾರಕ ಸಕ್ಕರೆ ಕಾಯಿಲೆ!


ತೂಕವನ್ನು ನಿಯಂತ್ರಿಸುತ್ತದೆ: ಪಾಲಕ್ ಕಡಿಮೆ ಕ್ಯಾಲೋರಿ ಅಂಶ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿರುವುದರಿಂದ, ಆರೋಗ್ಯಕ್ಕೆ ಅತ್ಯಗತ್ಯವಾಗಿದೆ.. ಅತ್ಯಧಿಕ ಹಾರ್ಮೋನುಗಳನ್ನು ನಿಯಂತ್ರಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ.. 


ಕ್ಯಾನ್ಸರ್ ವಿರುದ್ಧ ರಕ್ಷಿಸುತ್ತದೆ: ಪಾಲಕ್ ಕ್ಯಾನ್ಸರ್ ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.. ಏಕೆಂದರೆ ಇದು ಡಿಎನ್‌ಎ ಸಂಶ್ಲೇಷಣೆ ಮತ್ತು ಸುಧಾರಣೆಯಲ್ಲಿ ಪಾತ್ರವಹಿಸುವ ಫೋಲೇಟ್‌ನಂತಹ ಸಂಭಾವ್ಯ ಆಂಟಿ-ಕಾರ್ಸಿನೋಜೆನಿಕ್ ಗುಣಲಕ್ಷಣಗಳಿಂದ ಕೂಡಿದೆ..


ಇದನ್ನೂ ಓದಿ-ಮಧುಮೇಹ ನಿಯಂತ್ರಣಕ್ಕೆ ನಿತ್ಯ ಬೆಳಗ್ಗೆ ಹೂವಿನ ಚಹಾ ಸೇವಿಸಿ, ಔಷಧಿ ಇಲ್ಲದೆ ಮಧುಮೇಹ ನಿಯಂತ್ರಣಕ್ಕೆ ಬರುತ್ತೆ!


ಶುಗರ್ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುತ್ತದೆ: ನೀವು ಮಧುಮೇಹ ಸಮಸ್ಯೆಯನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಪಾಲಕವನ್ನು ಸೇರಿಸಿ.. ಈ ಸೊಪ್ಪಿನಲ್ಲಿರುವ ಮೆಗ್ನೀಸಿಯಮ್ ಮನುಷ್ಯನ ಚಯಾಪಚಯ ಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ಕೊಲೆಸ್ರ್ಟಾಲ್‌ ಮಟ್ಟವನ್ನು ನಿಯಂತ್ರಿಸುತ್ತದೆ..


ಮೂಳೆಗಳನ್ನು ಬಲಪಡಿಸುತ್ತದೆ: ಪಾಲಕದಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ, ಇದು ಮೂಳೆಯ ಆರೋಗ್ಯಕ್ಕೆ ಪ್ರಮುಖ ಅಂಶವಾಗಿದೆ. ಈ ವಿಟಮಿನ್‌ ಕೆ ಯಿಂದ ಮೂಳೆಗಳ ಮುರಿತವನ್ನು ತಪ್ಪಿಸಬಹುದಾಗಿದೆ.. ಹೀಗಾಗಿ ದಿನನಿತ್ಯದ ನಿಮ್ಮ ಆಹಾರದಲ್ಲಿ ಪಾಲಕ್‌ ಸೇವಿಸುವುದು ಆರೋಗ್ಯವಾಗಿರಲು ಉತ್ತಮ ಮಾರ್ಗವಾಗಿದೆ.. ‌


 


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.