Vitamin C Deficiency: ಮಳೆಗಾಲ, ಚಳಿಗಾಲದಲ್ಲಿ ಸೋಂಕಿನ ಅಪಾಯ ಹೆಚ್ಚಾಗಿರುತ್ತದೆ. ಇಂತಹ ಸೋಂಕಿನ ವಿರುದ್ಧ ಹೋರಾಡಲು ಬಲವಾದ ರೋಗ ನಿರೋಧಕ ಶಕ್ತಿ ಬಹಳ ಮುಖ್ಯ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದ್ದಾರೆ ಇದರಿಂದ ಸೋಂಕಿನ ಅಪಾಯವು ಕಡಿಮೆಯಾಗುತ್ತದೆ. ಆದರೆ, ಇದಕ್ಕಾಗಿ ಔಷಧಿಗಳ ಮೊರೆ ಹೋಗುವ ಅಗತ್ಯವಿರುವುದಿಲ್ಲ. ಬದಲಿಗೆ ಕೆಲವು ಆಹಾರ ಪದಾರ್ಥಗಳಿಂದ, ಹಣ್ಣುಗಳಿಂದಲೂ ಇದು ಸಾಧ್ಯವಾಗುತ್ತದೆ. 


COMMERCIAL BREAK
SCROLL TO CONTINUE READING

ಆರೋಗ್ಯ ತಜ್ಞರ ಪ್ರಕಾರ, ಸೋಂಕಿನ ವಿರುದ್ಧ ಹೋರಾಡಲು ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಕೆಲವು ಸಿಟ್ರಸ್ ಹಣ್ಣುಗಳು ಕೂಡ ತುಂಬಾ ಪ್ರಯೋಜನಕಾರಿ ಆಗಿವೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿ ವೃದ್ಧಿಗೆ ಈ ಹಣ್ಣುಗಳ ಸೇವನೆ ನೈಸರ್ಗಿಕ ಮಾರ್ಗವಾಗಿದೆ. ಹಾಗಿದ್ದರೆ, ವಿಟಮಿನ್ ಸಿ ಕೊರತೆಯನ್ನು ನೀಗಿಸಲು ಸಹಾಯಕವಾಗುವ ಆ ಎರಡು ಅತ್ಯುತ್ತಮ ಹಣ್ಣುಗಳು ಯಾವುವು ಎಂದು ನೋಡುವುದಾದರೆ...  


ಇದನ್ನೂ ಓದಿ- ಮೊಟ್ಟೆಗಳನ್ನು ಬುದ್ಧಿವಂತಿಕೆಯಿಂದ ಸೇವಿಸಿ, ಇಲ್ಲದಿದ್ದರೆ ಈ ರೋಗಗಳು ಉಂಟಾಗಬಹುದು..!


ಈ ಸಿಟ್ರಸ್ ಹಣ್ಣುಗಳ ಸೇವನೆಯಿಂದ ದೂರವಾಗುತ್ತೆ ವಿಟಮಿನ್ ಸಿ ಕೊರತೆ:
* ಕಿತ್ತಳೆ ಹಣ್ಣು: 

ಬಹಳ ಸುಲಭವಾಗಿ ಕೈಗೆಟುಕುವ ಬೆಳೆಯಲ್ಲಿ ಲಭ್ಯವಿರುವ ಹಣ್ಣು ಎಂದರೆ ಕಿತ್ತಳೆ ಹಣ್ಣು. ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ನಮ್ಮ ಸಮೃದ್ಧವಾಗಿದೆ. ಈ ಹಣ್ಣನ್ನು ನಿಮ್ಮ ಡಯಟ್ನಲ್ಲಿ ಸೇರಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ವತಂತ್ರ ರಾಡಿಕಲ್‌ಗಳಿಂದ ನಮ್ಮನ್ನು ರಕ್ಷಿಸುತ್ತವೆ. ಈ ಹಣ್ಣನ್ನು ನೆರವಾಗಿಯೂ ಸೇವಿಸಬಹುದು. ಮಾತ್ರವಲ್ಲ, ಜ್ಯೂಸ್ ರೂಪದಲ್ಲೂ ಸೇವಿಸಬಹುದು. 


ಇದನ್ನೂ ಓದಿ- ರಾತ್ರಿ ಹೊತ್ತು ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ..? ಇಲ್ಲಿದೆ ಮಾಹಿತಿ


* ಕಿವಿ: 
ದುಬಾರಿ ಹಣ್ಣು ಎಂತಲೇ ಖ್ಯಾತಿ ಪಡೆದಿರುವ ಕಿವಿ ಹಣ್ಣಿನಲ್ಲೂ ವಿಟಮಿನ್ ಸಿ ಸಮೃದ್ಧವಾಗಿದೆ. ಸಂಶೋಧನೆಯ ಪ್ರಕಾರ, ಕಿವಿ ಹಣ್ಣಿನಲ್ಲಿ ಕಿತ್ತಳೆ ಹಣ್ಣಿಗಿಂತ ಹೆಚ್ಚಿನ ವಿಟಮಿನ್ ಸಿ ಕಂಡು ಬರುತ್ತದೆ. ಕಿವಿ ಹಣ್ಣಿನ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರವಲ್ಲದೆ, ಇದರಲ್ಲಿ ಹಲವು ಪೋಷಕಾಂಶಗಳು ಹೆಚ್ಚಾಗಿದ್ದು ನಿಯಮಿತವಾಗಿ ಇದನ್ನು ಸೇವಿಸುವುದರಿಂದ ಹಲವು ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.