ಈ 5 ಕೆಂಪು ಹಣ್ಣುಗಳು ಆರೋಗ್ಯಕ್ಕೆ ವರದಾನ, ಇಂದಿನಿಂದಲೇ ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿ...
ಕೆಂಪು ಬಣ್ಣದ ಹಣ್ಣುಗಳು ಮತ್ತು ತರಕಾರಿಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇವು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ.
ನವದೆಹಲಿ: ಹಣ್ಣುಗಳ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕೆಂಪು ಬಣ್ಣದ ಹಣ್ಣುಗಳು ಮತ್ತು ತರಕಾರಿಗಳು (Red Fruits And Vegetables) ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇವು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ. ನಿಯಮಿತವಾಗಿ ಇವುಗಳನ್ನು ಸೇವಿಸುತ್ತಾ ಬಂದರೆ ಮಧುಮೇಹ, ಆಸ್ಟಿಯೊಪೊರೋಸಿಸ್ ಮತ್ತು ಅಧಿಕ ಕೊಲೆಸ್ಟ್ರಾಲ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ತಜ್ಞರ ಪ್ರಕಾರ ಹಣ್ಣುಗಳು ಮತ್ತು ತರಕಾರಿಗಳ ಗಾಢವಾದ ಕೆಂಪು ಬಣ್ಣವು ಹೆಚ್ಚು ಖನಿಜಗಳು, ವಿಟಮಿನ್ ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಯಾವ ಹಣ್ಣುಗಳು ತಿನ್ನಲು ನಿಮಗೆ ಹೆಚ್ಚು ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿರಿ.
ಕಲ್ಲಂಗಡಿ
ಕಲ್ಲಂಗಡಿಯಲ್ಲಿ ಲೈಕೋಪೀನ್ ಕಂಡುಬರುತ್ತದೆ. ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಇದರ ಸೇವನೆಯು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಬೊಜ್ಜು ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ.
ಇದನ್ನೂ ಓದಿ: Methi Benefits : ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯ ಬೀಜ ಸೇವಿಸಿ : ಇದರಿಂದ ರೋಗಗಳು ಹತ್ತಿರವು ಸುಳಿಯುವುದಿಲ್ಲ
ದಾಳಿಂಬೆ
ದಾಳಿಂಬೆಯು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ಪ್ರಾಸ್ಟೇಟ್ ಕ್ಯಾನ್ಸರ್ ಬರುವ ಅಪಾಯ ಕಡಿಮೆಯಾಗುತ್ತದೆ. ದಾಳಿಂಬೆ ಉರಿಯೂತವನ್ನು ಕಡಿಮೆ ಮಾಡುವ ಸಂಯುಕ್ತಗಳನ್ನು ಹೊಂದಿದೆ. ಇದು ರಕ್ತದ ಕೊರತೆಯನ್ನು ಪೂರೈಸುತ್ತದೆ ಮತ್ತು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ.
ಸೇಬು
ಸೇಬುಗಳು ಉತ್ಕರ್ಷಣ ನಿರೋಧಕಗಳು, ಆಹಾರದ ಫೈಬರ್ ಮತ್ತು ಫ್ಲೇವನಾಯ್ಡ್ಗಳಲ್ಲಿ ಸಮೃದ್ಧವಾಗಿವೆ. ಇದು ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಬೀಟ್ರೂಟ್
ಬೀಟ್ರೂಟ್ ಆಂಟಿ ಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿದೆ. ಇದು ಉತ್ತಮ ಪ್ರಮಾಣದ ಕಬ್ಬಿಣ, ಫೈಬರ್, ಪೊಟ್ಯಾಸಿಯಮ್, ವಿಟಮಿನ್ ಸಿ, ನೈಟ್ರೇಟ್ ಮತ್ತು ಫೋಲೇಟ್ ಅನ್ನು ಸಹ ಒಳಗೊಂಡಿದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
ಇದನ್ನೂ ಓದಿ: Radish Leaves:ಈ ಗಂಭೀರ ಕಾಯಿಲೆಗಳಿಗೆ ಪರಿಣಾಮಕಾರಿ ಮದ್ದು ಮೂಲಂಗಿ ಎಲೆಗಳು, ಈ ರೀತಿ ಬಳಸಿ
ಟೊಮೇಟೊ
ಟೊಮೇಟೊದಲ್ಲಿರುವ ಲೈಕೋಪೀನ್ ಪ್ರಾಸ್ಟೇಟ್ ಕ್ಯಾನ್ಸರ್, ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಟೊಮೇಟೊದಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ನಿಮ್ಮ ತ್ವಚೆಯನ್ನು ಸುಂದರವಾಗಿಸುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.