ಬೆಂಗಳೂರು: ಅಡುಗೆ ಮನೆಯಲ್ಲಿ ಬಳಸುವ ಸಾಂಬಾರು ಪದಾರ್ಥಗಳು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ ಹಲವಾರು ಔಷಧೀಯ ಗುಣಗಳಿಂದ ಕೂಡಿರುತ್ತವೆ. ಇಂದು ನಾವು ನಾವು ನಿಮಗೆ ಕಲೋಂಜಿ ಬೀಜಗಳ ಅಥವಾ ಕಪ್ಪು ಜೀರಿಗೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ಕೊಡುತ್ತಿದ್ದೇವೆ. ಕಪ್ಪು ಬೀಜಗಳನ್ನು ದ್ವಿದಳ ಧಾನ್ಯಗಳು ಮತ್ತು ತರಕಾರಿಗಳಲ್ಲಿ ಬಳಸಲಾಗುತ್ತದೆ. ಅಡುಗೆಮನೆಯಲ್ಲಿ ಇರುವ ಕಪ್ಪು ಜೀರಿಗೆ ಅನೇಕ ಕಾಯಿಲೆಗಳ ಪರಿಹಾರಕ್ಕೆ ಸಹ ಪ್ರಯೋಜನಕಾರಿಯಾಗಿದೆ. ಕಲೋಂಜಿ ತಿನ್ನುವ ಪ್ರಯೋಜನಗಳ ಕುರಿತು ತಿಳಿದುಕೊಳ್ಳೋನ ಬನ್ನಿ (Health News In Kannada),
ಕಪ್ಪು ಜೀರಿಗೆ ಸೇವನೆಯಿಂದ ಆಗುವ ಪ್ರಯೋಜನಗಳು
ಕೊಲೆಸ್ಟ್ರಾಲ್ ನಿಯಂತ್ರಣ
ಕಪ್ಪು ಜೀರಿಗೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ, ನೀವು ರಕ್ತದೊತ್ತಡ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು. ಕಪ್ಪು ಜೀರಿಗೆ ಪುಡಿ ಮತ್ತು ಎಣ್ಣೆಯು ಕೊಲೆಸ್ಟ್ರಾಲ್ಗೆ ಪ್ರಯೋಜನಕಾರಿಯಾಗಿದೆ.
ಮಧುಮೇಹ ನಿಯಂತ್ರಣ
ಅಧಿಕ ರಕ್ತದ ಸಕ್ಕರೆಯ ಸಮಸ್ಯೆಯನ್ನು ನಿವಾರಿಸಲು ಕಪ್ಪು ಜೀರಿಗೆ ಒಂದು ವರದಾನಕ್ಕೆ ಸಮಾನ ಎಂದರೆ ತಪ್ಪಾಗಲಾರದು. ಈ ಬೀಜಗಳನ್ನು ಆಹಾರದಲ್ಲಿ ಸೇರಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಇದು ಟೈಪ್ 2 ಮಧುಮೇಹದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ
ಕಪ್ಪು ಜೀರಿಗೆಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕ್ಯಾನ್ಸರ್ನಂತಹ ಮಾರಕ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಸಂಯುಕ್ತಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ.
ಯಕೃತ್ತಿನ ಆರೋಗ್ಯಕ್ಕೆ ಉತ್ತಮ
ಕಪ್ಪು ಜೀರಿಗೆ ಯಕೃತ್ತಿನ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಇದು ಯಕೃತ್ತನ್ನು ಗಾಯ ಮತ್ತು ಹಾನಿಯಿಂದ ರಕ್ಷಿಸುತ್ತದೆ ಮತ್ತು ಯಕೃತ್ತನ್ನು ಆರೋಗ್ಯವಾಗಿರಿಸುತ್ತದೆ.
ಇದನ್ನೂ ಓದಿ-ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸೂಪರ್ ಫುಡ್ ಈ ಹಾಲು, ಮನೆಯಲ್ಲಿಯೇ ಹೀಗೆ ತಯಾರಿಸಿ!
ತೂಕ ಇಳಿಕೆಗೆ ಸಹಕಾರಿ
ಹೊಟ್ಟೆಯ ಕೊಬ್ಬು ಮತ್ತು ಬೊಜ್ಜು ಕಡಿಮೆ ಮಾಡಲು ಸಹ ನೀವು ಕಪ್ಪು ಜೀರಿಗೆಯನ್ನು ಬಳಸಬಹುದು. ಇದರಲ್ಲಿರುವ ಪೋಷಕಾಂಶಗಳು ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಇದು ರೋಗಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ಇದನ್ನೂ ಓದಿ-ಕೇವಲ ಒಂದೇ ತಿಂಗಳೊಳಗೆ 10 ಕೆ.ಜಿ ತೂಕ ಇಳಿಸುತ್ತೆ ಈ ನೀರು, ಸೇವಿಸುವ ಸಮಯ ಇದಾಗಿರಲಿದೆ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=q9auZ2eqeZo
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.